ಬಿಜೆಪಿ-ಜೆಡಿಎಸ್ ಮೈತ್ರಿ ಅಧಿಕೃತ, ಒಪ್ಪಿಕೊಂಡ ಬಿಎಸ್ ಯಡಿಯೂರಪ್ಪ
ದೇವೇಗೌಡರು ನಮ್ಮ ಪ್ರಧಾನಿಯನ್ನು ಭೇಟಿ ಮಾಡಿರುವುದು ನನಗೆ ಖುಷಿ ತಂದಿದೆ ಮಾತುಕತೆ ಪ್ರಕಾರವಾಗಿ 4 ಲೋಕಸಭಾ ಸೀಟು ಬಿಟ್ಟು ಕೊಡಬೇಕೆಂಬ ಬೇಡಿಕೆಗೆ ಒಪ್ಪಿಗೆ ಕೊಡಲಾಗಿದೆ ಎಂದು ಬಿಎಸ್‌ವೈ ಹೇಳಿಕೆ ನೀಡಿದ್ದಾರೆ.

ಬೆಂಗಳೂರು (ಸೆ.8): 2024 ರ ಲೋಕಸಭೆ ಚುನಾವಣೆಗೆ ಬಿಜೆಪಿ ಜೆಡಿಎಸ್ ಮೈತ್ರಿ ಬಗ್ಗೆ ಮಾಜಿ ಸಿಎಂ ಬಿಸ್ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಈಗಾಗಲೇ ಈ ಬಗ್ಗೆ ಮಾಜಿ ಪ್ರಧಾನಿ ದೇವೇಗೌಡ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರ ಜೊತೆ ಚರ್ಚೆ ನಡೆಸಿದ್ದಾರೆ. ಮಾತುಕತೆ ಪ್ರಕಾರವಾಗಿ 4 ಲೋಕಸಭಾ ಸೀಟು ಬಿಟ್ಟು ಕೊಡಬೇಕೆಂಬ ಬೇಡಿಕೆಗೆ ಒಪ್ಪಿಗೆ ಕೊಡಲಾಗಿದೆ. ಇದು ಈ ಬಾರಿಯ ಲೋಕಸಭಾ ಚುನಾವಣೆ ಗೆಲ್ಲಲು ಬಹಳ ಅನುಕೂಲ ಆಗಲಿದೆ. ಇದರ ಬಗ್ಗೆ ದೆಹಲಿಯಿಂದ ಯಾವ ನಿರ್ಧಾರ ಬರುತ್ತೋ ಅದನ್ನು ಸ್ವಾಗತಿಸುತ್ತೇನೆ. ದೇವೇಗೌಡರು ನಮ್ಮ ಪ್ರಧಾನಿಯನ್ನು ಭೇಟಿ ಮಾಡಿರುವುದು ನನಗೆ ಖುಷಿ ತಂದಿದೆ ಎಂದಿದ್ದಾರೆ.
ಜೆಡಿಎಸ್‌ಗೆ ಮಂಡ್ಯ ಬಿಟ್ಟು ಕೊಡಲು ಬಿಜೆಪಿ ಒಪ್ಪಿಗೆ, ಸುಮಲತಾ ಕಥೆಯೇನು?
ಇಂತಿಷ್ಟೇ ಸೀಟು ಕೊಡಬೇಕೆಂಬ ಬಗ್ಗೆ ರಾಜ್ಯ ಘಟಕಕ್ಕೆ ಯಾವ ಸೂಚನೆ ಇಲ್ಲ. ಟಿವಿಯಲ್ಲಿ ಬಂದ ನಂತರವೇ ನನಗೆ ತಿಳಿದಿರುವುದು. ಎಲ್ಲಾ ಕ್ಲೀಯರ್ ಆಗ ಮೇಲೆ ನಾನು ದೇವೆಗೌಡ ಮತ್ತು ಕುಮಾರಸ್ವಾಮಿ ಅವರನ್ನು ಭೇಟಿ ಮಾಡುತ್ತೇನೆ. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಸಂತೋಷ ತಂದಿದೆ. ಜೆಡಿಎಸ್ ಜೊತೆಗಿನ ಮೈತ್ರಿಯಿಂದ ನಮಗೆ ಶಕ್ತಿ ಬರುತ್ತದೆ ಎಂದು ಹೇಳಿದ್ದಾರೆ.
ಹೈಕಮಾಂಡ್ ತಲೆಯಲ್ಲಿನ ಲೆಕ್ಕಾಚಾರ ಏನು..? ವಿಜಯೇಂದ್ರಗೆ ಸಿಗುತ್ತಾ ಪ್ರಮುಖ
ಮಂಡ್ಯ ಜೆಡಿಎಸ್‌ಗೆ ಬಿಟ್ಟು ಕೊಡಲು ಬಿಜೆಪಿ ಒಪ್ಪಿಗೆ ಸೂಚಿಸಿದೆ ಎಂದು ಸುವರ್ಣ ನ್ಯೂಸ್ ಗೆ ಉನ್ನತ ಮೂಲಗಳ ಮಾಹಿತಿ ನೀಡಿದೆ. ಈ ಮೂಲಕ ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯಾಗುತ್ತಿದೆ. ಇದರ ಜೊತೆಗೆ ಕೋಲಾರ, ತುಮಕೂರು, ಹಾಸನ , ಬೆಂಗಳೂರು ಗ್ರಾಮಾಂತರ ಮತ್ತು ಚಿಕ್ಕಬಳ್ಳಾಪುರ ಕ್ಷೇತ್ರಕ್ಕೂ ಜೆಡಿಎಸ್ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಆದರೆ ದಳಪತಿ ಗಳ ಬೇಡಿಕೆ ಇಟ್ಟಿದ್ದ ಕ್ಷೇತ್ರದಲ್ಲಿ ಪ್ರಾಥಮಿಕ ಹಂತವಾಗಿ ಮಂಡ್ಯ ಕ್ಷೇತ್ರ ಬಿಟ್ಟು ಕೊಡಲು ಬಿಜೆಪಿ ಒಪ್ಪಿದೆ.
ಕಳೆದ ಎರಡು ತಿಂಗಳ ಹಿಂದೆಯೇ ಅಮಿತ್ ಶಾ ಅವರನ್ನು ಹೆಚ್‌ಡಿ ಕುಮಾರಸ್ವಾಮಿ ಭೇಟಿ ಮಾಡಿದ್ದರು. ಜೆಡಿಎಸ್ ನ ಪ್ರಮುಖ ಟಾರ್ಗೆಟ್ ಮಂಡ್ಯವೇ ಆಗಿದೆ. ಶತಾಯಗತಾಯ ಮಂಡ್ಯ ಕ್ಷೇತ್ರವನ್ನು ಜೆಡಿಎಸ್ ತೆಕ್ಕೆಗೆ ಹಾಕಿಕೊಳ್ಳಲು ಮಾಜಿ ಪ್ರಧಾನಿ ದೇವೇಗೌಡರು ಶತ ಪ್ರಯತ್ನ ನಡೆಸಿದ್ದರು. ಹಾಗಾಗಿ ಮಂಡ್ಯ ಕ್ಷೇತ್ರ ಬಿಟ್ಟುಕೊಡಲು ಅಮಿತ್ ಶಾ ಒಪ್ಪಿಗೆ ಸೂಚಿಸಿದ್ದಾರೆ