Asianet Suvarna News Asianet Suvarna News

ಪೋಕ್ಸೋ ಕೇಸ್‌ನಲ್ಲಿ ಅಗತ್ಯ ಬಿದ್ದರೆ ಬಿಎಸ್‌ವೈ ಬಂಧನ: ಗೃಹ ಸಚಿವ ಪರಮೇಶ್ವರ್‌

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರನ್ನು ಬಂಧಿಸುವ ಸಾಧ್ಯತೆಯಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸಿಐಡಿಯವರು ನೋಟಿಸ್ ಕೊಟ್ಟಿದ್ದಾರೆ. 
 

BS Yediyurappa arrested in POCSO case if necessary Says Home Minister Dr G Parameshwar gvd
Author
First Published Jun 14, 2024, 5:06 AM IST

ತುಮಕೂರು (ಜೂ.14): ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರನ್ನು ಬಂಧಿಸುವ ಸಾಧ್ಯತೆಯಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸಿಐಡಿಯವರು ನೋಟಿಸ್ ಕೊಟ್ಟಿದ್ದಾರೆ. ಅವರು ವಿಚಾರಣೆಗೆ ಹಾಜರಾಗಬೇಕಾಗಿತ್ತು. ಅಷ್ಟೇ ನನಗೆ ಗೊತ್ತಿರುವುದು. ಜೂ.15 ರೊಳಗೆ ಚಾರ್ಜ್ ಶೀಟ್ ಮಾಡಬೇಕು ಅಂತ ಇದೆ. ಅಷ್ಟರೊಳಗೆ ಚಾರ್ಜ್ ಶೀಟ್ ಫೈಲ್ ಮಾಡುತ್ತಾರೆ. ಅಲ್ಲದೇ ಹೇಳಿಕೆ ಪಡೆದು ಅವರನ್ನು ಹಾಜರುಪಡಿಸಬೇಕು.ಈ ಎಲ್ಲಾ ಕೆಲಸವನ್ನು ಇಲಾಖೆಯವರು ಮಾಡುತ್ತಾರೆ. ಸ್ವಾಭಾವಿಕವಾಗಿ ಯಡಿಯೂರಪ್ಪನವರು ಅರ್ಜಿ ಹಾಕಿಕೊಂಡಿದ್ದಾರೆ. ಅಗತ್ಯಬಿದ್ದರೆ ಬಂಧಿಸುತ್ತಾರೆ ಎಂದರು. ವಾಲ್ಮೀಕಿ ನಿಗದ ಹಗರಣ ವಿಚಾರಕ್ಕೆ ಸಂಬಂಧಿಸಿದಂತೆ ಯಾರ್ಯಾರು ಭಾಗಿಯಾಗಿದ್ದಾರೆ ಎಂಬುದು ಎಸ್ಐಟಿ ಅವರಿಗೆ ಮಾಹಿತಿಯಿದೆ. ಅಂತಹವರನ್ನು ಬಂಧಿಸುತ್ತಾರೆ ಎಂದರು.

ವಾಂತಿಭೇದಿಯಿಂದ ಅಸ್ವಸ್ಥರಾದವರಿಗೆ ಉತ್ತಮ ಚಿಕಿತ್ಸೆ ನೀಡಿ: ಮಧುಗಿರಿ ತಾಲೂಕಿನ ಮಿಡಿಗೇಶಿ ಹೋಬಳಿ ಚಿನ್ನೇನಹಳ್ಳಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ವಾಂತಿಭೇದಿಯಿಂದ ಅಸ್ವಸ್ಥರಾಗಿ ಜಿಲ್ಲಾಸ್ಪತ್ರೆಗೆ ದಾಖಲಾಗಿರುವ ರೋಗಿಗಳು ಸಂಪೂರ್ಣವಾಗಿ ಗುಣಮುಖರಾಗುವವರೆಗೆ ಉತ್ತಮ ಚಿಕಿತ್ಸೆ ನೀಡಿದ ನಂತರ ಆಸ್ಪತ್ರೆಯಿಂದ ಬಿಡುಗಡೆ ಮಾಡಬೇಕು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಟ ದರ್ಶನ್‌ ಬಚಾವ್‌ ಮಾಡಲು ಯಾರೂ ಯತ್ನಿಸಿಲ್ಲ: ಗೃಹ ಸಚಿವ ಪರಮೇಶ್ವರ್‌

ನಗರದಲ್ಲಿ ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳ ಆರೋಗ್ಯ ವಿಚಾರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಚಿನ್ನೇನಹಳ್ಳಿ ಗ್ರಾಮದಲ್ಲಿ ಇತ್ತೀಚಿಗೆ ಕಲುಷಿತ ನೀರು ಸೇವಿಸಿ ಸುಮಾರು 100 ಕ್ಕೂ ಹೆಚ್ಚು ಜನರಲ್ಲಿ ವಾಂತಿಭೇದಿ ಕಾಣಿಸಿಕೊಂಡ ಕಾರಣ ಕೆಲವರು ಮಧುಗಿರಿ, ಕೊರಟಗೆರೆ, ತುಮಕೂರಿನ ಖಾಸಗಿ ಆಸ್ಪತ್ರೆ ಸೇರಿದಂತೆ ಸರ್ಕಾರಿ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ. ವಿಷಯ ತಿಳಿದ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಆರೋಗ್ಯ ಇಲಾಖೆ ಅಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ನೀಡಿ ಅಸ್ವಸ್ಥರಾಗಿದ್ದವರನ್ನು ಕೂಡಲೇ ಜಿಲ್ಲಾಸ್ಪತ್ರೆಗೆ ದಾಖಲಿಸಲು ಕ್ರಮಕೈಗೊಂಡಿದ್ದಾರೆ ಎಂದರು.

ಓವರ್ ಹೆಡ್ ಟ್ಯಾಂಕ್‌ ನಿಯಮಿತವಾಗಿ ಸ್ವಚ್ಛಗೊಳಿಸಿ: ಕಲುಷಿತ ನೀರಿನಿಂದ ಚಿನ್ನೇನಹಳ್ಳಿ ವಾಂತಿಭೇದಿ ಪ್ರಕರಣಗಳು ಜಿಲ್ಲೆಯಲ್ಲಿ ಮತ್ತೊಮ್ಮೆ ಮರುಕಳಿಸದಂತೆ ಗ್ರಾಮ ಪಂಚಾಯತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ನಿಗಾವಹಿಸಬೇಕು. ವಿವಿಧ ಇಲಾಖೆಗಳು ಕುಡಿಯುವ ನೀರಿನ ಕಾಮಗಾರಿಗಳನ್ನು ಕೈಗೊಳ್ಳುವಾಗ ಎಚ್ಚರಿಕೆ ವಹಿಸಬೇಕು. ಸಾರ್ವಜನಿಕರಿಗೆ ಸರಬರಾಜು ಮಾಡುವ ಓವರ್ ಹೆಡ್ ಟ್ಯಾಂಕ್‌ಗಳನ್ನು ನಿಯಮಿತವಾಗಿ ಸ್ವಚ್ಛಗೊಳಿಸಬೇಕು ಹಾಗೂ ಆರ್.ಓ.ಪ್ಲಾಂಟ್‌ಗಳ ಕಾರ್ಯನಿರ್ವಹಣೆ ಬಗ್ಗೆ ನಿಗಾವಹಿಸಬೇಕು ಎಂದು ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು.

ಸಚಿವರ ಕ್ಷೇತ್ರಗಳ ಹಿನ್ನಡೆ ಬಗ್ಗೆ ಆತ್ಮಾವಲೋಕನ ಅಗತ್ಯ: ಸಚಿವ ಪರಮೇಶ್ವರ್‌

ಇಂದು ಜಿಲ್ಲಾಮಟ್ಟದ ಸಭೆ ನಡೆಸಿ, ಚರ್ಚೆ: ಶುದ್ಧ ಕುಡಿಯುವ ನೀರು ಪೂರೈಕೆ ಸೇರಿದಂತೆ ಜಿಲ್ಲೆಯ ಪ್ರಗತಿಗೆ ಸಂಬಂಧಿಸಿದಂತೆ ಶುಕ್ರವಾರ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಚರ್ಚಿಸಲಾಗುವುದು. ಈ ಸಭೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಜಲಜೀವನ್ ಮಿಷನ್ ಯೋಜನೆಯ ಪ್ರಗತಿಯನ್ನು ಪರಿಶೀಲಿಸಲಾಗುವುದು. ಜಿಲ್ಲೆಯ ಕೆಲವು ಗ್ರಾಮಗಳಲ್ಲಿ ಜಲಜೀವನ್ ಮಿಷನ್ ಯೋಜನೆ ಸಮರ್ಪಕವಾಗಿ ಅನುಷ್ಟಾನಗೊಂಡಿಲ್ಲವೆಂದು ಸಾರ್ವಜನಿಕ ದೂರುಗಳಿದ್ದು, ಈ ಕುರಿತು ಸಭೆಯಲ್ಲಿ ಸುಧೀರ್ಘವಾಗಿ ಚರ್ಚಿಸಲಾಗುವುದು ಎಂದರು. ವಾಂತಿಭೇದಿಯಿಂದ ಮೃತಪಟ್ಟವರಿಗೆ ಪರಿಹಾರ ನೀಡುವ ಬಗ್ಗೆ ಪ್ರಶ್ನಿಸಿದಾಗ ಪ್ರತಿಕ್ರಿಯಿಸಿ, ಪರಿಹಾರ ನೀಡುವ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸುತ್ತೇನೆ ಎಂದು ಭರವಸೆ ನೀಡಿದರು.

Latest Videos
Follow Us:
Download App:
  • android
  • ios