Asianet Suvarna News Asianet Suvarna News

ಇದೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಅತ್ಯುತ್ತಮ ಶಾಸಕ ಪ್ರಶಸ್ತಿ ಪ್ರದಾನ

* ಇದೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಅತ್ಯುತ್ತಮ ಶಾಸಕ ಪ್ರಶಸ್ತಿ ಘೋಷಣೆ
* ಮಾಜಿ ಸಿಎಂ ಯಡಿಯೂರಪ್ಪಗೆ ಅತ್ಯುತ್ತಮ ಶಾಸಕ ಪ್ರಶಸ್ತಿ
* ಬಿಎಸ್‌ವೈಗೆ ಪ್ರಶಸ್ತಿ ಪ್ರದಾನ ಮಾಡಿದ ಲೋಕಸಭಾ ಸ್ಪೀಕರ್ ಓಂ ಬಿರ್ಲಾ

BS Yediyurappa  best Karnataka legislator of the year 2020 21 rbj rbj
Author
Bengaluru, First Published Sep 24, 2021, 5:15 PM IST
  • Facebook
  • Twitter
  • Whatsapp

ಬೆಂಗಳೂರು, (ಸೆ.24):  ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರಿಗೆ (BS Yediyurappa) ಅತ್ಯುತ್ತಮ ಶಾಸಕ ಪ್ರಶಸ್ತಿ ಸಿಕ್ಕಿದೆ. ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಇಂದು (ಸೆ.24) ಬಿಎಸ್‌ವೈ ಅವರನ್ನು ಅತ್ಯುತ್ತಮ ಶಾಸಕ  ಎಂದು ಘೋಷಿಸಿದರು.

ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ಇದೇ ಮೊದಲ ಬಾರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿ (Award) ಘೋಷಿಸಲಾಗಿದ್ದು, ಬಿ.ಎಸ್.ಯಡಿಯೂರಪ್ಪನವರಿಗೆ ಪ್ರಶಸ್ತಿ ನೀಡಲಾಗಿದೆ.  ಲೋಕಸಭಾ ಸ್ಪೀಕರ್ ಓಂ ಬಿರ್ಲಾ (Om Birla) ಅವರು ಯಡಿಯೂರಪ್ಪನವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

ಕರ್ನಾಟಕವನ್ನ ಕೊಂಡಾಡಿದ ಲೋಕಸಭೆ ಸ್ಪೀಕರ್ ಓಂ ಬಿರ್ಲಾ

ಈ ಕುರಿತು ಮಾತನಾಡಿದ ಸ್ಪೀಕರ್ ಕಾಗೇರಿ, ಹಲವು ರಾಜ್ಯಗಳಲ್ಲಿ ಉತ್ತಮ ಶಾಸಕ (Legislator) ಪ್ರಶಸ್ತಿ ಕೊಡುವ ಸಂಪ್ರದಾಯವಿದೆ.  ಶಾಸಕರಲ್ಲಿ ಅತ್ಯುತ್ತಮ ಸಂಸದೀಯ ಪಟುವನ್ನು ಗುರುತಿಸುವ ನಿಟ್ಟಿನಲ್ಲಿ ಈ ಪ್ರಶಸ್ತಿ ಘೋಷಿಸಲಾಗಿದೆ ಎಂದರು.

ಅತ್ಯುತ್ತಮ ಶಾಸಕ ಪ್ರಶಸ್ತಿ ಆಯ್ಕೆಗೆ ಸಮಿತಿಯನ್ನು ರಚನೆ ಮಾಡಲಾಗಿದ್ದು, ಸ್ಪೀಕರ್ ನೇತೃತ್ವದ ಸಮಿತಿಯಲ್ಲಿ ಸಿಎಂ ಬೊಮ್ಮಾಯಿ‌, ಸಿದ್ದರಾಮಯ್ಯ, ಮಾಧುಸ್ವಾಮಿ, ದೇಶಪಾಂಡೆ ಸಮಿತಿ ರಚನೆ ಮಾಡಲಾಗಿತ್ತು ಎಂದು ತಿಳಿಸಿದರು.

ಲೋಕಸಭೆ ಮಾದರಿಯಲ್ಲಿ ಕರ್ನಾಟಕ ರಾಜ್ಯ ವಿಧಾನ ಮಂಡಲದಲ್ಲೂ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ಮೊದಲ ಬಾರಿಗೆ ಪ್ರದಾನ ಮಾಡಲಾಗಿದೆ.

Follow Us:
Download App:
  • android
  • ios