Asianet Suvarna News Asianet Suvarna News

ಮತ್ತೆ ಮೋದಿ ಪ್ರಧಾನಿ ಆಗಲೆಂದು ಗಣೇಶನಿಗೆ ವಿಶೇಷ ಪೂಜೆ ಸಲ್ಲಿಸಿದ ಯಡಿಯೂರಪ್ಪ

ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬ ನಿಮಿತ್ತ ಅವರ ಆರೋಗ್ಯ ವೃದ್ಧಿ ಮತ್ತು ಅವರು ಮತ್ತೊಮ್ಮೆ ಪ್ರಧಾನಿಯಾಗಲಿ ಎಂದು ಪ್ರಾರ್ಥಿಸಿ ಗಣೇಶನಿಗೆ ವಿಶೇಷ ಪೂಜೆ ನೆರವೇರಿಸಿದ್ದೇವೆ. 

BS Yediyurappa did not offer special pooja to Ganesha when Modi became PM again gvd
Author
First Published Sep 18, 2023, 2:20 AM IST

ಕೋಲಾರ (ಸೆ.18): ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬ ನಿಮಿತ್ತ ಅವರ ಆರೋಗ್ಯ ವೃದ್ಧಿ ಮತ್ತು ಅವರು ಮತ್ತೊಮ್ಮೆ ಪ್ರಧಾನಿಯಾಗಲಿ ಎಂದು ಪ್ರಾರ್ಥಿಸಿ ಗಣೇಶನಿಗೆ ವಿಶೇಷ ಪೂಜೆ ನೆರವೇರಿಸಿದ್ದೇವೆ. ಇನ್ನು ಮುಂದೆ ರಾಜ್ಯಾದ್ಯಂತ ಪ್ರವಾಸ ಮಾಡಿ, ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಭಾನುವಾರ ಮುಳಬಾಗಿಲು ತಾಲೂಕಿನ ಕುರುಡುಮಲೆ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದರು. ರಾಜ್ಯ ಸರ್ಕಾರ ಇದ್ದರೂ ಸತ್ತಂತಾಗಿದೆ. ರಾಜ್ಯದಲ್ಲಿ ಭೀಕರ ಬರಗಾಲ ಇದ್ದರೂ ಸರ್ಕಾರ ಕುಂಭಕರ್ಣ ನಿದ್ರೆಯಲ್ಲಿದೆ. ಹಾಗಾಗಿ, ಸರ್ಕಾರವನ್ನು ಎಚ್ಚರಿಸುವ ಕೆಲಸವನ್ನು ಮಾಡಲಿದ್ದೇವೆ. ರಾಜ್ಯದಲ್ಲಿನ ಭೀಕರ ಬರಗಾಲ ಮತ್ತು ರಾಜ್ಯ ಸರ್ಕಾರದ ವೈಫಲ್ಯಗಳನ್ನು ಖಂಡಿಸಿ, ಮುಳಬಾಗಿಲಿನಿಂದ ಹೋರಾಟ ಪ್ರಾರಂಭವಾಗಿದೆ. 

ದೇಶದಲ್ಲಿ ಸಂವಿಧಾನಕ್ಕಿಂತ ಬೇರೆ ಯಾವ ಧರ್ಮವು ದೊಡ್ಡದಲ್ಲ: ಸಚಿವ ಮಹದೇವಪ್ಪ

ರಾಜ್ಯದ ಉದ್ದಗಲಕ್ಕೂ ಕಾರ್ಯಕರ್ತರ ಸಭೆಗಳನ್ನು ನಡೆಸಿ, ಮುಂದಿನ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 25ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು, ಮೋದಿಯವರಿಗೆ ಉಡುಗೊರೆ ನೀಡಲಿದ್ದೇವೆ ಎಂದರು. ಮಾಜಿ ಮುಖ್ಯಮಂತ್ರಿ ಸದಾನಂದಗೌಡ, ಮಾಜಿ ಉಪಮುಖ್ಯಮಂತ್ರಿಗಳಾದ ಡಾ. ಅಶ್ವತ್ಥ್‌ ನಾರಾಯಣ, ಗೋವಿಂದ ಕಾರಜೋಳ, ಸಂಸದ ಮುನಿಸ್ವಾಮಿ, ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಬಿಜೆಪಿ ಜಿಲ್ಲಾಧ್ಯಕ್ಷ ಡಾ.ವೇಣುಗೋಪಾಲ್, ಮಾಜಿ ಶಾಸಕ ವೈ.ಸಂಪಂಗಿ ಹಾಗೂ ಇತರ ನಾಯಕರು ಇದ್ದರು.

ಗ್ಯಾರಂಟಿಗಳ ಬಗ್ಗೆ ನಾನು ತಲೆಕೆಡಿಸಿಕೊಂಡಿಲ್ಲ, ಇದು ಲೋಕಸಭಾ ಚುನಾವಣೆ ಮೇಲೆ ಪ್ರಭಾವ ಬೀರುವುದಿಲ್ಲ. ರಾಜ್ಯದಲ್ಲಿ ನೀರಾವರಿ ಹಾಗೂ ಅಭಿವೃದ್ಧಿ ಯೋಜನೆಗಳೂ ಸಂಪೂರ್ಣ ಸ್ಥಗಿತವಾಗಿವೆ. ರಾಜ್ಯದಲ್ಲಿ ಒಂದೇ ಒಂದು ಕಿ.ಮೀ. ರಸ್ತೆ ಮಾಡಲೂ ಇವರಿಂದ ಸಾಧ್ಯವಾಗಿಲ್ಲ ಎಂದು ಕಿಡಿ ಕಾರಿದರು. ಮುಂಬರುವ ಲೋಕಸಭಾ ಚುನಾವಣೆಗೆ ಬಿಜೆಪಿ-ಜೆಡಿಎಸ್‌ ಮೈತ್ರಿ ಕುರಿತು ಪ್ರತಿಕ್ರಿಯಿಸಿ, ಇನ್ನೂ ಮಾತುಕತೆ ನಡೆಯುತ್ತಿದೆ. ಹಾಗಾಗಿ ಅದರ ಬಗ್ಗೆ ಈಗಲೇ ಮಾತನಾಡುವುದು ಬೇಡ ಎಂದು ತಿಳಿಸಿದರು.

ರಾಜ್ಯ ಸರ್ಕಾರದ ಗ್ಯಾರಂಟಿಯಿಂದಾಗಿ ನೀರಾವರಿ ಹಾಗೂ ಅಭಿವೃದ್ಧಿ ಯೋಜನೆಗಳು ಸಂಪೂರ್ಣ ಸ್ಥಗಿತವಾಗಿವೆ. ಗ್ಯಾರಂಟಿಗಳು ಲೋಕಸಭೆ ಚುನಾವಣೆ ಮೇಲೆ ಪ್ರಭಾವ ಬೀರುವುದಿಲ್ಲ. ರಾಜ್ಯದಲ್ಲಿ 1 ಕಿ.ಮೀ. ರಸ್ತೆ ಮಾಡಲೂ ಈ ಸರ್ಕಾರಕ್ಕೆ ಸಾಧ್ಯವಾಗಿಲ್ಲ.
- ಯಡಿಯೂರಪ್ಪ, ಮಾಜಿ ಸಿಎಂ

ರಾಜ್ಯದಲ್ಲಿ ಬರಗಾಲ ಕಾಡಲು ಸಿದ್ದರಾಮಯ್ಯ ಕಾಲ್ಗುಣ ಕಾರಣ: ಸಿ.ಟಿ.ರವಿ

ಐದು ಗ್ಯಾರಂಟಿಗಳು ಅಭಿವೃದ್ಧಿ ಅಲ್ವಾ? ಯಾವ ಸರ್ಕಾರವಾದರೂ 1.13 ಕೋಟಿ ಜನರಿಗೆ 2 ಸಾವಿರ ರುಪಾಯಿ ಕೊಟ್ಟಿದೆಯಾ? ಅವರ ಕಾಲದಲ್ಲಿ 7 ಕೆ.ಜಿ. ಬದಲು ಐದು ಕೆ.ಜಿ.ಯಷ್ಟೇ ಅಕ್ಕಿ ಕೊಟ್ಟಿದ್ದಾರೆ. ಇದಕ್ಕೆ ಮಿಸ್ಟರ್ ಯಡಿಯೂರಪ್ಪ ಏನ್‌ ಹೇಳ್ತಾರೆ?
- ಸಿದ್ದರಾಮಯ್ಯ, ಮುಖ್ಯಮಂತ್ರಿ

Follow Us:
Download App:
  • android
  • ios