ಕೇಂದ್ರ ಸಚಿವ ಖೂಬಾ ಬಿಕ್ಕಟ್ಟು ಶಮನಕ್ಕೆ ಯಡಿಯೂರಪ್ಪ ಪ್ರವೇಶ

ಪಕ್ಷದ ಶಾಸಕರಾದ ಪ್ರಭು ಚವ್ಹಾಣ್, ಶರಣು ಸಲಗರ ಸೇರಿದಂತೆ ಹಲವು ಮುಖಂಡರು ಖೂಬಾ ಅವರಿಗೆ ಮತ್ತೊಮ್ಮೆ ಟಿಕೆಟ್ ನೀಡುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಪೈಕಿ ಪ್ರಭು ಚವ್ಹಾಣ್ ಅವರು ಇತ್ತೀಚೆಗೆ ನೂತನ ಜಿಲ್ಲಾಧ್ಯಕ್ಷರ ಪದಗ್ರಹಣ ಸಮಾರಂಭಕ್ಕೆ ಆಗಮಿಸಿದ್ದ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ವೇದಿಕೆಯಲ್ಲೇ ಸಾಷ್ಟಾಂಗ ನಮಸ್ಕಾರ ಮಾಡುವ ಮೂಲಕ ಖೂಬಾ ಅವರಿಗೆ ಟಿಕೆಟ್ ನೀಡದಂತೆ ಒತ್ತಾಯಿಸಿದ್ದರು.

BS Yediyurappa Entry into Union Minister Bhagwanth Khuba on Lok Sabha Election Ticket Issue grg

ಬೆಂಗಳೂರು(ಫೆ.07):  ಕೇಂದ್ರದ ರಸಗೊಬ್ಬರ ಖಾತೆ ರಾಜ್ಯ ಸಚಿವ ಹಾಗೂ ಬೀದರ್ ಲೋಕಸಭಾ ಕ್ಷೇತ್ರದ ಸಂಸದ ಭಗವಂತ್ ಖೂಬಾ ಅವರಿಗೆ ಈ ಬಾರಿ ಟಿಕೆಟ್ ನೀಡುವುದಕ್ಕೆ ಪಕ್ಷದಲ್ಲಿ ತೀವ್ರ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಖುದ್ದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಸ್ಥಳೀಯ ಮುಖಂಡರೊಂದಿಗೆ ಮಾತುಕತೆ ನಡೆಸಲು ಮುಂದಾಗಿದ್ದಾರೆ.

ಶುಕ್ರವಾರ ಬೀದರ್‌ಗೆ ತೆರಳಲಿರುವ ಯಡಿಯೂರಪ್ಪ ಅವರು ಬೆಳಗ್ಗೆ 10.30ರಿಂದ 11.30ರವರೆಗೆ ಬೀದರ್ ಲೋಕಸಭಾ ಕ್ಷೇತ್ರದ ಜನಪ್ರತಿನಿಧಿಗಳು ಹಾಗೂ ಮುಖಂಡರೊಂದಿಗೆ ಸಭೆ ನಡೆಸಲಿದ್ದಾರೆ.

ಪರಿಹಾರ ಬಿಡುಗಡೆ ವಿಳಂಬಕ್ಕೆ ಸಚಿವ ಈಶ್ವರ ಖಂಡ್ರೆ ನಿರ್ಲಕ್ಷವೇ ಕಾರಣ: ಭಗವಂತ ಖೂಬಾ

ಪಕ್ಷದ ಶಾಸಕರಾದ ಪ್ರಭು ಚವ್ಹಾಣ್, ಶರಣು ಸಲಗರ ಸೇರಿದಂತೆ ಹಲವು ಮುಖಂಡರು ಖೂಬಾ ಅವರಿಗೆ ಮತ್ತೊಮ್ಮೆ ಟಿಕೆಟ್ ನೀಡುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಪೈಕಿ ಪ್ರಭು ಚವ್ಹಾಣ್ ಅವರು ಇತ್ತೀಚೆಗೆ ನೂತನ ಜಿಲ್ಲಾಧ್ಯಕ್ಷರ ಪದಗ್ರಹಣ ಸಮಾರಂಭಕ್ಕೆ ಆಗಮಿಸಿದ್ದ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ವೇದಿಕೆಯಲ್ಲೇ ಸಾಷ್ಟಾಂಗ ನಮಸ್ಕಾರ ಮಾಡುವ ಮೂಲಕ ಖೂಬಾ ಅವರಿಗೆ ಟಿಕೆಟ್ ನೀಡದಂತೆ ಒತ್ತಾಯಿಸಿದ್ದರು.

ಎರಡು ದಿನಗಳ ಹಿಂದಷ್ಟೇ ದಾವಣಗೆರೆ ಜಿಲ್ಲಾ ಘಟಕದಲ್ಲಿನ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಜಿಲ್ಲೆಯ ಮುಖಂಡರನ್ನು ತಮ್ಮ ನಿವಾಸಕ್ಕೆ ಕರೆಸಿಕೊಂಡು ಮಾತುಕತೆ ಮೂಲಕ ಪರಿಹರಿಸಿದ್ದ ಯಡಿಯೂರಪ್ಪ ಅವರು ಈಗ ಬೀದರ್‌ ಜಿಲ್ಲೆಗೇ ತೆರಳಿ ಅಲ್ಲಿಯ ಸಮಸ್ಯೆ ಬಗೆಹರಿಸಲು ಪ್ರಯತ್ನಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

Latest Videos
Follow Us:
Download App:
  • android
  • ios