Asianet Suvarna News Asianet Suvarna News

Karnataka Politics: ಯಡಿಯೂರಪ್ಪ ರಾಜ್ಯ ಬಿಜೆಪಿಯ ಸರ್ವೋಚ್ಚ ನಾಯಕ: ಅರುಣ್‌ ಸಿಂಗ್‌

*  ಮನಸಾರೆ ಹೊಗಳಿದ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್‌ ಸಿಂಗ್‌
*  ಯಡಿಯೂರಪ್ಪ ಮಾರ್ಗದರ್ಶದಲ್ಲಿ ಬೊಮ್ಮಾಯಿ ಸರ್ಕಾರ ಒಳ್ಳೆಯ ಆಡಳಿತ ನಡೆಸುತ್ತಿದೆ
*  ಮುಂಬರುವ ಚುನಾವಣೆಯಲ್ಲಿ ಬಿಜೆಪಿ 150ಕ್ಕೂ ಹೆಚ್ಚು ಸ್ಥಾನದಲ್ಲಿ ಗೆಲುವು ಸಾಧಿಸಲಿದೆ 

BS Yediyurappa Is the BJP's Supreme Leader in Karnataka Says Arun Singh grg
Author
Bengaluru, First Published Apr 13, 2022, 4:39 AM IST

ಬೆಳಗಾವಿ(ಏ.13): ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ(BS Yediyurappa) ಕರ್ನಾಟಕ ಬಿಜೆಪಿಯ ಸರ್ವೋಚ್ಚ ನಾಯಕರಾಗಿದ್ದು, ಅವರ ಮಾರ್ಗದರ್ಶನದಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ9Basavaraj Bommai) ನೇತೃತ್ವದ ರಾಜ್ಯ ಸರ್ಕಾರ ಉತ್ತಮ ಆಡಳಿತ ನೀಡುತ್ತಿದೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್‌ ಸಿಂಗ್‌(Arun Singh) ಪ್ರಶಂಸಿಸಿದ್ದಾರೆ.

ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಯಡಿಯೂರಪ್ಪ ಅವರನ್ನು ಮನಸಾರೆ ಹೊಗಳಿದರು. ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯನ್ನು(Karnataka Assembly Election) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನೇತೃತ್ವದಲ್ಲಿ ಎದುರಿಸಲಾಗುವುದು. ಯಡಿಯೂರಪ್ಪ ಮಾರ್ಗದರ್ಶದಲ್ಲಿ ಬೊಮ್ಮಾಯಿ ಸರ್ಕಾರ ಒಳ್ಳೆಯ ಆಡಳಿತ ನಡೆಸುತ್ತಿದೆ. ಮುಂಬರುವ ಚುನಾವಣೆಯಲ್ಲಿ ಬಿಜೆಪಿ 150ಕ್ಕೂ ಹೆಚ್ಚು ಸ್ಥಾನದಲ್ಲಿ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Karnataka Politics: ಸಿಎಂ ಬದಲಾವಣೆ ಇಲ್ಲ: ಇನ್ಮುಂದೆ ಕರ್ನಾಟಕದತ್ತ ಬಿಜೆಪಿ ಹೆಚ್ಚು ಗಮನ: ಅರುಣ್ ಸಿಂಗ್

ಕರ್ನಾಟಕದಲ್ಲಿ(Karnataka) ಗೆಲ್ಲುವ ಮೂಲಕ ಇಡೀ ದೇಶವನ್ನು ನಡೆಸಲು ಕಾಂಗ್ರೆಸ್‌(Congress) ಯೋಜನೆ ಹಾಕಿಕೊಂಡಿದೆ. ಆದರೆ, ನಾವು ಕಾಂಗ್ರೆಸ್‌ ಗೆಲ್ಲಲು ಬಿಡುವುದಿಲ್ಲ. ಕಾಂಗ್ರೆಸ್‌ ಪಕ್ಷ ಇಡೀ ದೇಶದಲ್ಲಿ ನೆಲ ಕಚ್ಚುತ್ತಿದ್ದು, ಸಂಪೂರ್ಣ ನಿರ್ನಾಮಗೊಂಡಿದೆ. ಪಂಚರಾಜ್ಯ ಚುನಾವಣೆಗಳ ಪೈಕಿ ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಐತಿಹಾಸಿಕ ಗೆಲುವು ಸಾಧಿಸಿದೆ. ಕರ್ನಾಟಕದಲ್ಲಿಯೂ ಮತ್ತೆ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ ಎಂದರು.

ಜಿಲ್ಲೆಯಲ್ಲಿ ಭಿನ್ನಮತ ಇರುವುದು ನಿಜ: ಬಿಎಸ್‌ವೈ

ಬೆಳಗಾವಿ ಬಿಜೆಪಿ ಜಿಲ್ಲಾ ರಾಜಕಾರಣಿಗಳ ಮಧ್ಯೆ ಭಿನ್ನಮತ ಇರುವುದು ನಿಜ(Dissent) ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದರು. ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗ ಮಾತನಾಡಿದ ಅವರು, ನಿಮ್ಮ ಮುಂದೆ ಯಾವುದೇ ಮುಚ್ಚುಮರೆ ಏನಿಲ್ಲ. ಎಲ್ಲ ನಾಯಕರ ಜೊತೆಗೆ ಒನ್‌ ಟು ಒನ್‌ ಮಾತನಾಡಿದ್ದೇನೆ. ಎಲ್ಲರೂ ಒಂದೇ ತಾಯಿ ಮಕ್ಕಳಂತೆ ಇಲ್ಲಿ ಕೆಲಸ ಮಾಡಬೇಕು. ಭಿನ್ನಾಭಿಪ್ರಾಯಕ್ಕೆ ಅವಕಾಶ ನೀಡದೇ ಪಕ್ಷದ ಒಳಿತಿಗಾಗಿ ಕೆಲಸ ಮಾಡುವಂತೆ ಎಲ್ಲರಿಗೂ ಮನವರಿಕೆ ಮಾಡಲಾಗಿದೆ ಎಂದರು.

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ 18 ಕ್ಷೇತ್ರಗಳಲ್ಲಿ ನಾವು ಗೆಲ್ಲಬೇಕಿದೆ. ಈ ನಿಟ್ಟಿನಲ್ಲಿ ಎಲ್ಲರೂ ಭಿನ್ನಾಭಿಪ್ರಾಯ ಮರೆತು ಒಗ್ಗಟ್ಟಾಗಿ ಕೆಲಸ ಮಾಡುವಂತೆ ಸಲಹೆ ನೀಡಲಾಗಿದೆ. ನಾನು ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರು ತಿಂಗಳಿಗೊಮ್ಮೆ ಇಲ್ಲಿಗೆ ಬರುತ್ತೇವೆ. ಇಲ್ಲಿನ ನಾಯಕರ ಜೊತೆಗೆ ಚರ್ಚೆ ಮಾಡಿ ಭಿನ್ನಮತ ಶಮನ ಮಾಡುತ್ತೇವೆ ಎಂದು ಹೇಳಿದರು.

ದೇಶದ ಜನರನ್ನ ರಕ್ಷಿಸಲು ಬಿಜೆಪಿಯಿಂದ ಮಾತ್ರ ಸಾಧ್ಯ: ಅರುಣ್ ಸಿಂಗ್

ಬಿಎಸ್‌ವೈ, ಬೊಮ್ಮಾಯಿ ನೇತೃತ್ವದಲ್ಲಿ ಚುನಾವಣೆ

ಮುಂದಿನ ಚುನಾವಣೆಯನ್ನು ಬೊಮ್ಮಾಯಿ ಹಾಗೂ ಯಡಿಯೂರಪ್ಪ ನೇತೃತ್ವದಲ್ಲಿ ಎದುರಿಸುತ್ತೇವೆ. ಯಡಿಯೂರಪ್ಪ ಮಾರ್ಗದರ್ಶದಲ್ಲಿ ಬೊಮ್ಮಾಯಿ ಸರ್ಕಾರ ಒಳ್ಳೆಯ ಆಡಳಿತ ನಡೆಸುತ್ತಿದೆ.

ಅವಧಿಗೆ ಮುನ್ನವೇ ಕರ್ನಾಟಕದಲ್ಲಿ ಎಲೆಕ್ಷನ್‌: ಅರುಣ್‌ ಸಿಂಗ್‌ ಹೇಳಿದ್ದಿಷ್ಟು 

ರಾಜ್ಯದಲ್ಲಿ ಅವಧಿಪೂರ್ವ ಚುನಾವಣೆ ನಡೆಯುವ ಸಾಧ್ಯತೆಯನ್ನು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್‌ ಸಿಂಗ್‌ ಬಲವಾಗಿ ತಳ್ಳಿ ಹಾಕಿದ್ದಾರೆ. ಅಲ್ಲದೆ, ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ ಎಂದೂ ಅವರು ಸ್ಪಷ್ಟಪಡಿಸಿದ್ದರು. ಏ.1 ರಂದು ಸಂಜೆ ಬೆಂಗಳೂರಿಗೆ ಆಗಮಿಸಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ್ದ ಅವರು, ಅವಧಿಪೂರ್ವ ಚುನಾವಣೆ(Karnataka Assembly Election) ನಡೆಯುವುದಿಲ್ಲ. ಅವಧಿ ಮುಗಿದ ಬಳಿಕ ನಿಗದಿತ ಸಮಯದಲ್ಲೇ ಚುನಾವಣೆ ನಡೆಯಲಿದೆ ಎಂದು ತಿಳಿಸಿದರು. ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ. ಪಕ್ಷದ ಮುಖಂಡತ್ವದಲ್ಲೂ ಬದಲಾವಣೆ ಇಲ್ಲ ಎಂದು ಹೇಳಿದ್ದರು. 
 

Follow Us:
Download App:
  • android
  • ios