ನವದೆಹಲಿ, (ಜ.10): ಸಿಎಂ ಬಿಎಸ್ ಯಡಿಯೂರಪ್ಪ ಅವರು ಸಂಪುಟ ವಿಸ್ತರಣೆ ಕುರಿತಂತೆ ಬಿಜೆಪಿ ಜೊತೆಗೆ ಇಂದು (ಭಾನುವಾರ) ನಡೆಸಿದ ಚರ್ಚೆ ಸಿಎಂ ಹೇಳಿಕೆ ನೋಡಿದ್ರೆ ಫಲಪ್ರದವಾದಂತಿದೆ.

"

 ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಜೊತೆ ಸಿಎಂ ಸುಮಾರ್ 45 ನಿಮಿಷಗಳ ಕಾಲ  ಸುದೀರ್ಘ ಚರ್ಚೆ ನಡೆಸಿದ್ದಾರೆ.

ಬಿಎಸ್‌ವೈ ಅವರ ಈ ಹೇಳಿಕೆ ಹಲವು ಗೊಂದಲಗಳಿಗೆ ಕಾರಣವಾಗಿದೆ. ಯಾಕಂದ್ರೆ ಸಭೆಯಲ್ಲಿ ಯಾವುದೇ ಸಿಹಿ ಸುದ್ದಿ ಸಿಕ್ಕಿರುವಾಗಿಲ್ಲ, ಬದಲಿಗೆ ಕೇಂದ್ರ ನಾಯಕರೇ ಸಿಹಿ ಸುದ್ದಿ ನೀಡಲಿದ್ದಾರೆ ಎಂದಿದ್ದಾರೆ. ಹಾಗಾದ್ರೆ ಬಿಎಸ್‌ವೈ ಸಭೆ ಬಳಿಕ ಸುದ್ದಿಗಾರರೊಂದಿಗೆ ಏನೆಲ್ಲಾ ಮತನಾಡಿದ್ದಾರೆ ಎನ್ನುವುದು ಈ ಕೆಳಗಿನಂತಿದೆ.

ಹೈಕಮಾಂಡ್‌ ಜೊತೆ ಬಿಎಸ್‌ವೈ ಸಭೆ ಅಂತ್ಯ: ಏನೆಲ್ಲಾ ಚರ್ಚೆ ನಡೆದಿರಬಹುದು..? 

 ಕೇಂದ್ರ ನಾಯಕರ ಜೊತೆಗಿನ ಸಭೆ, ತಮಗೆ ತೃಪ್ತಿ ತಂದಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನಿವಾಸದಲ್ಲಿ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ನಡೆದ ಸಭೆಯಲ್ಲಿ, ಮಂತ್ರಿ ಮಂಡಲ ವಿಸ್ತರಣೆ ಬಗ್ಗೆ ವಿಸ್ತೃತವಾದ ಚರ್ಚೆ ನಡೆದಿದೆ. ಕೇಂದ್ರ ನಾಯಕರಿಗೆ ಎಲ್ಲಾ ರೀತಿಯ ಮಾಹಿತಿಯನ್ನು ನೀಡಿದ್ದೇವೆ. ಆದಷ್ಟು ಶೀಘ್ರದಲ್ಲಿಯೇ ಶುಭ ಸುದ್ದಿ ಸಿಗುವ ವಿಶ್ವಾಸವಿದೆ ಎಂದರು.

ಆದಾಗ್ಯೂ, ಮಂತ್ರಿ ಮಂಡಲ ವಿಸ್ತರಣೆಯೇ ಅಥವಾ ಪುನಾರಚನೆಯೋ ಎಂಬುದರ ಬಗ್ಗೆ ಗೊಂದಲಕಾರಿ ಹೇಳಿಕೆಗಳನ್ನು ನೀಡಿದ ಮುಖ್ಯಮಂತ್ರಿ, ಈ ವಿಚಾರದಲ್ಲಿ ಕೇಂದ್ರ ನಾಯಕರು ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದಷ್ಟೇ ಹೇಳಿದರು. 

ಇನ್ನೂ ಕಗ್ಗಂಟು:
ಹೌದು...ಸಂಪುಟ ವಿಸ್ತರಣೆಯೋ ಅಥವಾ ಪುನಾರಚನೆಯೋ ಎನ್ನುವುದರ ಬಗ್ಗೆ ಸ್ವತಃ ಸಿಎಂಗೆ ಹೇಳಿಲ್ಲ. , ಈ ವಿಚಾರದಲ್ಲಿ ಕೇಂದ್ರ ನಾಯಕರು ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಯಡಿಯೂರಪ್ಪನವರು ಹೇಳಿಕೆ ಕೊಟ್ಟಿದ್ದಾರೆ.

ಇದನ್ನು ಗಮನಿಸಿದ್ರೆ ಇನ್ನೂ ಕಂಗ್ಗಂಟಾಗಿಯೇ ಉಳಿದಿದೆ. ಸಭೆಯಲ್ಲಿ ಯಾವುದೇ ಅಂತಿಮ ತೀರ್ಮಾನ ತೆಗೆದುಕೊಂಡಿಲ್ಲ. ಇನ್ನು ಸಂಪುಟ ವಿಸ್ತರಣೆಗೆ ಅಥವಾ ಪುನಾರಚನೆಗೆ ದಿನಾಂಕವೂ ಸಹ ಹೇಳಿಲ್ಲದಿರುವುದು ನೋಡಿದ್ರೆ ಅಮಿತ್ ರಾಜ್ಯಕ್ಕೆ ಆಗಮಿಸಿದ ಬಳಿಕ ಸ್ಪಷ್ಟ ಚಿತ್ರಣ ಹೊರಬೀಳುವ ಸಾಧ್ಯತೆಗಳಿವೆ.

ಒಟ್ಟಿನಲ್ಲಿ ಹೈಕಮಾಂಡ್ ಜೊತೆಗಿನ ಚರ್ಚೆ ಯಡಿಯೂರಪ್ಪನವರಿಗೆ ತೃಪ್ತಿ ತಂದಿರಬಹುದು. ಆದ್ರೆ, ಸಂಪುಟ ವಿಸ್ತರಣೆ ಬಗ್ಗೆ ಇನ್ನೂ ಸಿಹಿ ಸುದ್ದಿ ಸಿಕ್ಕಿಲ್ಲ ಅನ್ಸುತ್ತೆ.