Asianet Suvarna News Asianet Suvarna News

ಬೊಮ್ಮಾಯಿ ಸರ್ಕಾರ ನೀಡಿದ್ದ ಸ್ಥಾನಮಾನ ನಿರಾಕರಿಸಿದ ಯಡಿಯೂರಪ್ಪ

* ಬೊಮ್ಮಾಯಿ ಸರ್ಕಾರ ನೀಡಿದ್ದ ಸ್ಥಾನಮಾನ ನಿರಾಕರಿಸಿದ ಯಡಿಯೂರಪ್ಪ
* ಈ ಬಗ್ಗೆ ರಾಜ್ಯ ಸರ್ಕಾರಕ್ಕೆ ಪತ್ರ ಬರೆದು ಮಾಜಿ ಮುಖ್ಯಮಂತ್ರಿ ಬಿಎಸ್‌ವೈ
* ಶನಿವಾರ ಅಷ್ಟೇ ಬಿಎಸ್‌ವೈಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ ಆದೇಶ ಹೊರಡಿಸಿದ್ದ ಸರ್ಕಾರ

BS Yediyurappa refuses Karnataka Govt Cabinet rank facilities rbj
Author
Bengaluru, First Published Aug 8, 2021, 3:43 PM IST
  • Facebook
  • Twitter
  • Whatsapp

ಬೆಂಗಳೂರು, (ಆ.08): ಬಸವರಾಜ ಬೊಮ್ಮಾಯಿ ಸರ್ಕಾರ ನೀಡಿದ ಸ್ಥಾನಮಾನವನ್ನು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ನಿರಾಕರಿಸಿದ್ದಾರೆ.

ಹೌದು...ರಾಜ್ಯ ಸರ್ಕಾರ ನೀಡಿದ್ದ ಸಂಪುಟ ದರ್ಜೆ ಸ್ಥಾನಮಾನವನ್ನು ನಿರಾಕರಿಸಿದ್ದು, ಅದೇಶವನ್ನು ವಾಪಸ್ ಪಡೆಯುವಂತೆ ಯಡಿಯೂರಪ್ಪ ಅವರು ರಾಜ್ಯ ಸರ್ಕಾರ ಮನವಿ ಮಾಡಿದ್ದಾರೆ.

ಯಡಿಯೂರಪ್ಪಗೆ ಮಹತ್ವದ ಸ್ಥಾನಮಾನ ನೀಡಿದ ಬೊಮ್ಮಾಯಿ ಸರ್ಕಾರ

ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪಗೆ ಸಂಪುಟ ದರ್ಜೆ ಸ್ಥಾನಮಾನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೀಡಿದ್ದರು. ಶನಿವಾರ ಈ ಕುರಿತ ಸರ್ಕಾರದಿಂದ ಆದೇಶ ಪ್ರಕಟವಾಗಿತ್ತು. 

ಇಂದು (ಭಾನುವಾರ) ತಮಗೆ ನೀಡಿರುವ ಸಂಪುಟ ದರ್ಜೆ ಸ್ಥಾನಮಾನ ಹಿಂಪಡೆಯಬೇಕು ಎಂದು ಯಡಿಯೂರಪ್ಪ ಮನವಿ ಮಾಡಿದ್ದು, ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಪತ್ರವನ್ನು ಸಹ ಬರೆದಿದ್ದಾರೆ.

ಮಾಜಿ ಮುಖ್ಯಮಂತ್ರಿಗಳಿಗೆ ನೀಡಲಾಗುವ ಸರ್ಕಾರಿ ಸೌಲಭ್ಯಗಳನ್ನು ಮಾತ್ರ ತಮಗೆ ನೀಡಿ. ಸಂಪುಟ ದರ್ಜೆಯ ಸ್ಥಾನಮಾನವನ್ನು ನೀಡಿ ಹೊರಡಿಸಿರುವ ಆದೇಶವನ್ನು ಹಿಂಪಡೆಯಬೇಕು ಎಂದು ಕೋರುತ್ತೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

Follow Us:
Download App:
  • android
  • ios