ಮಂಗಳೂರು (ನ.05):  ಮಾಜಿ ಸಿಎಂ ಸಿದ್ದರಾಮಯ್ಯ ಬೇಜವಾಬ್ದಾರಿ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಕುರಿತ ವಿಪಕ್ಷ ನಾಯಕ ಸಿದ್ದರಾಮಯ್ಯ ನೀಡಿರುವ ಹೇಳಿಕೆಗೆ ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ಶಿರಾ, ರಾಜರಾಜೇಶ್ವರಿ ನಗರ ಹಾಗೂ ಪರಿಷತ್ತಿನ ಚುನಾವಣೆಯಲ್ಲಿ ನಾವು ನೂರಕ್ಕೆ ನೂರು ಗೆಲ್ಲುತ್ತೇವೆ. 

ಆ ಮೂರು ಕ್ಷೇತ್ರಗಳಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಚುನಾವಣೆ ನಡೆದಿದೆ. ಅವರು ನೂರಕ್ಕೆ ನೂರು ದಯನೀಯ ಸೋಲು ಅನುಭವಿಸುತ್ತಾರೆ. ಪರಿಷತ್‌ ಚುನಾವಣೆಯಲ್ಲೂ ನಾವೇ ಗೆಲ್ಲುತ್ತೇವೆ. ಆಗ ಯಾರು ರಾಜೀನಾಮೆ ಕೊಡಬೇಕಾಗುತ್ತದೆ. ಆಗ ಕಾಂಗ್ರೆಸ್‌ ವರಿಷ್ಠರು ಯಾರ ಮೇಲೆ ಕ್ರಮ ಕೈಗೊಳ್ಳಬೇಕಾಗುತ್ತದೆ? ಅದನ್ನು ಸಿದ್ದರಾಮಯ್ಯ ಯೋಚಿಸಲಿ ಎಂದು ತಿರುಗೇಟು ನೀಡಿದರು.

ನನಗೂ ದೆಹಲಿಯಿಂದ ಸುದ್ದಿ ಬಂದಿದೆ, ವಿಪಕ್ಷ ಸ್ಥಾನದಿಂದ ಸಿದ್ದರಾಮಯ್ಯ ಅವರನ್ನು ಬದಲಾವಣೆ ಮಾಡುತ್ತಾರೆ ಎಂದು ವ್ಯಂಗ್ಯವಾಡಿದ ಯಡಿಯೂರಪ್ಪ, ಯಾವಾಗಲೂ ಸಿದ್ದರಾಮಯ್ಯ ಹೀಗೆ ಹಗುರವಾಗಿ ಮಾತನಾಡಬಾರದು ಎಂದರು.

:  ಮಾಜಿ ಸಿಎಂ ಸಿದ್ದರಾಮಯ್ಯ ಬೇಜವಾಬ್ದಾರಿ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಕುರಿತ ವಿಪಕ್ಷ ನಾಯಕ ಸಿದ್ದರಾಮಯ್ಯ ನೀಡಿರುವ ಹೇಳಿಕೆಗೆ ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ಶಿರಾ, ರಾಜರಾಜೇಶ್ವರಿ ನಗರ ಹಾಗೂ ಪರಿಷತ್ತಿನ ಚುನಾವಣೆಯಲ್ಲಿ ನಾವು ನೂರಕ್ಕೆ ನೂರು ಗೆಲ್ಲುತ್ತೇವೆ. 

ಚುನಾವಣೆ ಮುಗಿಯುತ್ತಿದ್ದಂತೆ ಕಾಂಗ್ರೆಸ್‌ನ ಅವರನ್ನ ಹೊಗಳಿದ ಮುನಿರತ್ನ