Asianet Suvarna News Asianet Suvarna News

ಕಗ್ಗಂಟಾದ ವಿಪಕ್ಷ ನಾಯಕನ ಆಯ್ಕೆ, ಹೈಕಮಾಂಡ್ ಬುಲಾವ್ ದೆಹಲಿಗೆ ಹೊರಟ ಬಿಎಸ್‌ವೈ

ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಅವರಿಗೆ ಹೈಕಮಾಂಡ್ ಬುಲಾವ್ ಹಿನ್ನೆಲೆ ಬೆಳಗ್ಗೆ ದೆಹಲಿಗೆ ತೆರಳಲಿದ್ದಾರೆ.  ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಜೊತೆ ಸಭೆ ನಡೆಸಿದ ಬಳಿಕ ವಿಪಕ್ಷ ನಾಯಕನ ಘೋಷಣೆ ಆಗಲಿದೆ.

BS Yediyurappa travel to delhi to meet BJP High Command over discussion of BJP opposition leader gow
Author
First Published Jul 1, 2023, 9:10 PM IST

ಬೆಂಗಳೂರು (ಜು.1): ಸೋಮವಾರದಿಂದ ವಿಧಾನಮಂಡಲದ ಅಧಿವೇಶನ ಆರಂಭವಾಗುವ ಹಿನ್ನೆಲೆಯಲ್ಲಿ ಬಿಜೆಪಿಯಲ್ಲಿ ಇನ್ನೂ ಕೂಡ ವಿರೋಧ ಪಕ್ಷದ ನಾಯಕನ ಆಯ್ಕೆ ಆಗಿಲ್ಲ.  ಭಾನುವಾರ ಘೋಷಣೆ ಮಾಡುವ ಸಾಧ್ಯತೆಯಿದೆ. ಈ ಪೈಕಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹೆಸರು ಮುಂಚೂಣಿಯಲ್ಲಿದೆ. ನಂತರದ ಸ್ಥಾನದಲ್ಲಿ ಮಾಜಿ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ, ಹಿರಿಯ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಮಾಜಿ ಸಚಿವರಾದ ಆರ್‌.ಅಶೋಕ್‌, ವಿ.ಸುನೀಲ್‌ಕುಮಾರ್‌, ಶಾಸಕ ಅರವಿಂದ ಬೆಲ್ಲದ ಅವರ ಹೆಸರುಗಳು ಪ್ರಸ್ತಾಪವಾಗಿವೆ.

Resort Politics: ಹುಟ್ಟುಹಬ್ಬದ ನೆಪವೊಡ್ಡಿ ಚಿಕ್ಕಮಗಳೂರು ರೆಸಾರ್ಟ್‌ನಲ್ಲಿ ತಂಗಿದ ಬಿಜೆಪಿ

ಇವೆಲ್ಲದರ ನಡುವೆ ನಾಳೆ ನಡೆಸಲು ಉದ್ದೇಶಿಸಲಾಗಿದ್ದ, ಬಿಜೆಪಿ ಶಾಸಕಾಂಗ ಸಭೆ ನಡೆಯುತ್ತಿಲ್ಲ ಎಂದು ತಿಳಿದುಬಂದಿದೆ. ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಅವರಿಗೆ ಹೈಕಮಾಂಡ್ ಬುಲವ್ ಹಿನ್ನೆಲೆ  ಬೆಳಗ್ಗೆ ದೆಹಲಿಗೆ ತೆರಳಲಿದ್ದಾರೆ. ನಾಳೆ 2 ಗಂಟೆಗೆ ಬಿಎಸ್ ವೈ ದೆಹಲಿಗೆ ತಲುಪಲಿದ್ದು, 3  ಗಂಟೆಗೆ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಜೊತೆ ಸಭೆ ನಡೆಸಲಿದ್ದಾರೆ. ದೆಹಲಿಯಲ್ಲೇ ವಿಪಕ್ಷ ನಾಯಕನ ಆಯ್ಕೆ ನಡೆಯಲಿದ್ದು, ‌ನಾಳೆಯೇ ಘೋಷಣೆ ಆಗಲಿದೆ. ಭಾನುವಾರ ಬಿಎಸ್ ವೈ ದೆಹಲಿಯಲ್ಲೇ ಉಳಿಯಲಿದ್ದು, ರಾಜ್ಯಾಧ್ಯಕ್ಷರ ಆಯ್ಕೆ, ವಿಪಕ್ಷ ನಾಯಕನ ಆಯ್ಕೆ ಹಾಗು ಕೇಂದ್ರ ಸಂಪುಟ ವಿಸ್ತರಣೆ ಕುರಿತು ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. 

ಇವೆಲ್ಲದರ ನಡುವೆ ಯಡಿಯೂರಪ್ಪ ಮುಂದೆ ಕೆಲವು ಶಾಸಕರ ಕೆಲವು ತಮ್ಮ ಅಭಿಪ್ರಾಯ‌ ಮಂಡನೆ ಮಾಡಿದ್ದಾರೆ. ಕೆಲವರು ಬೊಮ್ಮಾಯಿ‌ ಬಿಟ್ಟು ಬೇರೆ ಯಾರನ್ನಾದರೂ ವಿಪಕ್ಷ ನಾಯಕನನ್ನಾಗಿ ಮಾಡಿ ಎಂದು ಸಲಹೆ ನೀಡಿದ್ದಾರಂತೆ. ಯತ್ನಾಳ್ ಪರವೂ ಬಹುತೇಕ ಶಾಸಕರು ವಿರೋಧ ವ್ಯಕ್ತಪಡಿಸಿದ್ದಾರೆ. ಇನ್ನು ಕೆಲವು ಶಾಸಕರು, ಸುರೇಶ್ ಕುಮಾರ್ ಹೆಸರು ನೀಡಿದ್ದಾರೆ. ಇನ್ನು ಕೆಲವು ಶಾಸಕರು ಡಾ. ಅಶ್ವಥ್ ನಾರಾಯಣ ಹೆಸರು ಸೂಚಿಸಿದ್ದಾರೆ ಎಂದು ಹೇಳಲಾಗಿದೆ.   ಸುನೀಲ್ ಕುಮಾರ್ ಆದರೂ ಪರ್ವಾಗಿಲ್ಲ ಎಂದು ಇನ್ನು ಕೆಲವು ಶಾಸಕರು ತಮ್ಮ ಅಭಿಪ್ರಾಯ ಹೇಳಿದ್ದಾರೆ ಎನ್ನಲಾಗಿದೆ. ಎಲ್ಲದಕ್ಕೂ ನಾಳೆ ದೆಹಲಿಯಿಂದ ಸ್ಪಷ್ಟ ಉತ್ತರ ಸಿಗಲಿದೆ.

ಕೊಡಗಿನಲ್ಲಿ ಬೀಡುಬಿಟ್ಟು ಎನ್‌ಡಿಆರ್‌ಎಫ್ ತಂಡ ತಾಲೀಮು, ಭೂಕುಸಿತದಲ್ಲಿ

ಇನ್ನು ಇಷ್ಟೆಲ್ಲ ಬೆಳವಣಿಗೆ ಮಧ್ಯೆ ರಾಜ್ಯಾಧ್ಯಕ್ಷ ಮತ್ತು ವಿಪಕ್ಷ ನಾಯಕನ ಆಯ್ಕೆ ಗೊಂದಲದಲ್ಲಿರುವ ಬಿಜೆಪಿಯನ್ನು ಕಾಂಗ್ರೆಸ್ ಪಕ್ಷ ಅಣಕಿಸಿದೆ. ಈ ಬಗ್ಗೆ ಟ್ವೀಟ್ ಮಾಡಿದೆ.

  • ವಿರೋಧ ಪಕ್ಷದ ನಾಯಕರೊಬ್ಬರು ಬೇಕಾಗಿದ್ದಾರೆ.
  • ಸಂವಿಧಾನವನ್ನು ತಿಳಿದವರು, ಪ್ರಜಾಪ್ರಭುತ್ವವನ್ನು ಅರಿತವರು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ.
  • ಸಿಡಿಗೆ ತಡೆಯಜ್ಞೆ ತರದವರು, ಭ್ರಷ್ಟಾಚಾರಿಯಲ್ಲದವರು ವಿಪಕ್ಷ ನಾಯಕ ಬೇಕಾಗಿದ್ದಾರೆ.
  • RSS ಕೈಗೊಂಬೆಯಾಗದವರು, ಕೋಮುವಾದಿ ಅಲ್ಲದವರು ವಿಪಕ್ಷ ನಾಯಕ ಬೇಕಾಗಿದ್ದಾರೆ.
  • ವಾಟ್ಸಾಪ್ ಯೂನಿವರ್ಸಿಟಿಯಲ್ಲಿ ಪದವಿ ಪಡೆದಿರಬಾರದು, ಸುಳ್ಳು ಹೇಳಬಾರದು.
  • ಘನತೆಯ ವ್ಯಕ್ತಿತ್ವದವರು, ತೂಕದ ಮಾತಿನವರು ವಿಪಕ್ಷ ನಾಯಕ ಬೇಕಾಗಿದ್ದಾರೆ.
  • ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಲು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ!
  •  

 

Follow Us:
Download App:
  • android
  • ios