ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ 50 ವರ್ಷಗಳ ರಾಜಕೀಯ ಜೀವನದ ಸವಿನೆನಪಿಗಾಗಿ ಚಿತ್ರದುರ್ಗದಲ್ಲಿ ಬೃಹತ್ ಸಮಾವೇಶವನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮವು ಮೇ 9 ರಂದು ನಡೆಯುವ ನಿರೀಕ್ಷೆಯಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾಗವಹಿಸುವ ಸಾಧ್ಯತೆಯಿದೆ.

 ಬೆಂಗಳೂರು (ಏ.21): ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ರಾಜಕಾರಣಕ್ಕೆ ಪ್ರವೇಶಿಸಿ 50 ವಸಂತಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಚಿತ್ರದುರ್ಗದಲ್ಲಿ ಹಮ್ಮಿಕೊಳ್ಳಲು ಉದ್ದೇಶಿಸಿರುವ ಬೃಹತ್ ಸಮಾವೇಶ ಬರುವ ಮೇ 9ರಂದು ನಡೆಯುವ ನಿರೀಕ್ಷೆಯಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಈ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದು, ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶ ಮೇ 4ರಂದು ಹೊರಬಿದ್ದ ಬಳಿಕ ಆಗಮಿಸುವುದಾಗಿ ತಿಳಿಸಿದ್ದಾರೆ. ಬಹುತೇಕ ಮೇ 9ರಂದು ಸಮಾವೇಶ ನಡೆಯಬಹುದು ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ವಿಶ್ವಾಸ

ಇದು ಅಮಿತ್ ಶಾ ಅವರ ಭೇಟಿಯ ಮೇಲೆ ನಿರ್ಧರಿತವಾಗುವುದರಿಂದ ಇನ್ನೂ ಅಂತಿಮಗೊಂಡಿಲ್ಲ. ಮೇ ತಿಂಗಳಲ್ಲೇ ಸಮಾವೇಶ ನಡೆಸಬೇಕು ಎಂಬ ನಿರ್ಣಯವಾಗಿದೆ. ಇದಕ್ಕೆ ಪೂರಕವಾಗಿ ತೆರೆಮರೆಯಲ್ಲಿ ಸಿದ್ಧತೆಗಳೂ ಆರಂಭಗೊಂಡಿವೆ. ಶೀಘ್ರದಲ್ಲೇ ಅಧಿಕೃತ ದಿನಾಂಕ ಪ್ರಕಟಿಸಲಾಗುವುದು ಎಂದು ಪಕ್ಷದ ಹಿರಿಯ ನಾಯಕರು ಮಾಹಿತಿ ನೀಡಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ರಾಜಕಾರಣಕ್ಕೆ ಪ್ರವೇಶಿಸಿ 50 ವಸಂತಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಚಿತ್ರದುರ್ಗದಲ್ಲಿ ಹಮ್ಮಿಕೊಳ್ಳಲು ಉದ್ದೇಶಿಸಿರುವ ಬೃಹತ್ ಸಮಾವೇಶ ಬರುವ ಮೇ 9ರಂದು ನಡೆಯುವ ನಿರೀಕ್ಷೆಯಿದೆ.