ಬಾಗಲಕೋಟೆ (ನ.11): ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಬದಲಾವಣೆ ಖಚಿತ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪುನರುಚ್ಚರಿಸಿದ್ದಾರೆ. 

ಉಪ ಚುನಾವಣೆ ಗೆದ್ದರೂ ಯಡಿಯೂರಪ್ಪರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುತ್ತಾರೆ ಎಂಬ ಮಾಹಿತಿ ಇದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

 ದೆಹಲಿಯಿಂದ ಬಂದಿರುವ ಮಾಹಿತಿ ಪ್ರಕಾರ ಮುಖ್ಯಮಂತ್ರಿ ಹುದ್ದೆಯಿಂದ ಯಡಿಯೂರಪ್ಪ ಬದಲಾವಣೆ ಸಾಧ್ಯತೆ ಇದೆ ಎಂದು ಇತ್ತೀಚೆಗಷ್ಟೇ ಸಿದ್ದರಾಮಯ್ಯ ಮೈಸೂರಲ್ಲಿ ಹೇಳಿದ್ದರು. 

ನಮ್ಮ ಕೇಂದ್ರದ ನಾಯಕರ ಜತೆ ಸಿದ್ದರಾಮಯ್ಯ ಸಂಪರ್ಕ: ಬಾಂಬ್ ಸಿಡಿಸಿದ ಬಿಜೆಪಿ ಸಂಸದ ...

ಇದೀಗ ಬಾದಾಮಿಯಲ್ಲಿ  ಸುದ್ದಿಗಾರರ ಮುಂದೆ ಮುಖ್ಯಮಂತ್ರಿ ಬದಲಾವಣೆ ವಿಚಾರವನ್ನು ಮತ್ತೆ ಪ್ರಸ್ತಾಪಿಸಿದ ಅವರು ಉಪ ಚುನಾವಣೆಯಲ್ಲಿ ಗೆದ್ದರೂ ಯಡಿಯೂರಪ್ಪ ಕುರ್ಚಿ ಬದಲಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.