ಬೆಂಗಳೂರು, (ಸೆ.05): ಸೋಶಿಯಲ್ ಮೀಡಿಯಾದಲ್ಲಿ ಸಿಎಂ ಯಡಿಯೂರಪ್ಪ ಅವರ ಪುತ್ರ ಬಿ ವೈ ವಿಜಯೇಂದ್ರ ಹೆಸರಿನಲ್ಲಿ ನಕಲಿ ಖಾತೆ ಸೃಷ್ಟಿಯಾಗಿದೆ.

ಈ ಸಂಬಂಧ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳುವಂತೆ ಸೈಬರ್ ಕ್ರೈಂ ಠಾಣೆಗೆ ದೂರು ನೀಡಿದ್ದಾರೆ, 

ರಾಗಿಣಿ ಅರೆಸ್ಟ್: ನಮ್ಮ ಪಕ್ಷಕ್ಕೂ, ಅವರಿಗೂ ಯಾವುದೇ ಸಂಬಂಧವಿಲ್ಲ ಎಂದ ಸಚಿವ

ಈ ಬಗ್ಗೆ ಬಿ ವೈ ವಿಜಯೇಂದ್ರ ಅವರೇ ಟ್ವೀಟ್ ಮಾಡಿದ್ದು, ದುರುದ್ದೇಶದಿಂದ ಟ್ವಿಟ್ಟರ್ ನಲ್ಲಿ ನನ್ನ ಹೆಸರಿನಲ್ಲಿ ನಕಲಿ ಖಾತೆ ಸೃಷ್ಟಿಸಿ, ಸುಳ್ಳು ಮಾಹಿತಿ, ತಪ್ಪು ಸಂದೇಶ ರವಾನಿಸುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಇದರ ವಿರುದ್ಧ ಕಾನೂನು ಪ್ರಕಾರ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಸೈಬರ್ ಕ್ರೈಮ್ ಪೊಲೀಸರಿಗೆ ದೂರು ನೀಡಲಾಗಿದೆ. ಇಂತಹ ಕೀಳು ಪ್ರಯತ್ನಗಳ ವಿರುದ್ಧ ಎಲ್ಲರೂ ಎಚ್ಚರಿಕೆಯಿಂದಿರಬೇಕು ಎಂದಿದ್ದಾರೆ.