Karnataka Budget 2023: ಬಿಜೆಪಿ ಸರ್ಕಾರವನ್ನು ದ್ವೇಷಿಸುವ ರಿವರ್ಸ್‌ಗೇರ್‌ ಬಜೆಟ್‌: ಬೊಮ್ಮಾಯಿ

ಬಜೆಟ್‌ನಲ್ಲಿ ಭವಿಷ್ಯದ ಯೋಜನೆಗಳ ಕುರಿತು ಹೇಳುವ ಬದಲು, ಹಿಂದಿನ ರಾಜ್ಯ ಸರ್ಕಾರ ಹಾಗೂ ಈಗಿನ ಕೇಂದ್ರ ಸರ್ಕಾರವನ್ನು ದ್ವೇಷಿಸುವ ರಾಜಕೀಯ ಪ್ರೇರಿತ, ರಿವರ್ಸ್‌ ಗೇರ್‌ ಬಜೆಟ್‌ ಇದಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟೀಕಿಸಿದ್ದಾರೆ.

Budget in reverse gear to hate BJP govt Says Basavaraj Bommai gvd

ಬೆಂಗಳೂರು (ಜು.08): ಬಜೆಟ್‌ನಲ್ಲಿ ಭವಿಷ್ಯದ ಯೋಜನೆಗಳ ಕುರಿತು ಹೇಳುವ ಬದಲು, ಹಿಂದಿನ ರಾಜ್ಯ ಸರ್ಕಾರ ಹಾಗೂ ಈಗಿನ ಕೇಂದ್ರ ಸರ್ಕಾರವನ್ನು ದ್ವೇಷಿಸುವ ರಾಜಕೀಯ ಪ್ರೇರಿತ, ರಿವರ್ಸ್‌ ಗೇರ್‌ ಬಜೆಟ್‌ ಇದಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟೀಕಿಸಿದ್ದಾರೆ. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ ಇಂದಿನ ಹಣಕಾಸು, ವಾಸ್ತವ ಸ್ಥಿತಿ ಬಗ್ಗೆ ಮಾತನಾಡುವ ಬದಲು ಹಳೆಯ ಕಾರ್ಯಕ್ರಮಗಳ ಬಗ್ಗೆ ಹೇಳುತ್ತಾರೆಂದರೆ ಅವರು ಭೂತಕಾಲದಲ್ಲಿದ್ದಾರೆ. ಇದು ರಾಜಕೀಯ ಬಜೆಟ್‌. ಹಲವಾರು ಅಂಕಿ-ಅಂಶಗಳನ್ನು ಆ ಸಂದರ್ಭಕ್ಕೆ, ವಾಸ್ತವಾಂಶಕ್ಕೆ ತಕ್ಕಂತೆ ಎಲ್ಲಾ ಸರ್ಕಾರಗಳು ಮಾಡಿವೆ. 

ಪ್ರತಿಯೊಂದಕ್ಕೂ 2013ಕ್ಕೆ ಹೋಲಿಕೆ ಮಾಡಿದ್ದಾರೆ. ಅದನ್ನು ನೋಡಿದರೆ ಅವರು ಹೆಚ್ಚು ಸಾಲ ಮಾಡಿದ್ದಾರೆ ಎಂದರು. ರಾಜ್ಯಪಾಲರ ಭಾಷಣ ಮತ್ತು ಬಜೆಟ್‌ ವ್ಯತ್ಯಾಸ ನೋಡಿದರೆ ಇದೊಂದು ಸುಳ್ಳು ಹೇಳುವ ಸರ್ಕಾರ ಎಂದು ಗೊತ್ತಾಗಿದೆ. ದೇಶದ ಕೋವಿಡ್‌ ನಿರ್ವಹಣೆಯನ್ನು ಇಡೀ ವಿಶ್ವವೇ ಕೊಂಡಾಡಿದೆ. ನಮ್ಮ ರಾಜ್ಯದ ಕೋವಿಡ್‌ ನಿರ್ವಹಣೆ ಬಗ್ಗೆ ದೇಶವೇ ಕೊಂಡಾಡಿದೆ. ಕೇಂದ್ರ ಸರ್ಕಾರ ಕೋವಿಡ್‌ ಸಂದರ್ಭದಲ್ಲಿ ಸಾಕಷ್ಟುಸಹಾಯ ಮಾಡಿದೆ. ನಮ್ಮ ಸರ್ಕಾರ ಕೂಡ ಸುಮಾರು .2000 ಕೋಟಿ ಕೋವಿಡ್‌ನಿಂದ ಸಂಕಷ್ಟಕ್ಕೆ ಒಳಗಾದವರ ನೆರವಿಗೆ ನೀಡಿದೆ. 

ಅಭಿವೃದ್ಧಿ, ಸಾಮಾಜಿಕ ನ್ಯಾಯದ ಬಜೆಟ್‌: ಸಚಿವ ಜಮೀರ್‌ ಅಹಮದ್‌ ಬಣ್ಣನೆ

ನಾವು ಎಷ್ಟುಹೆಚ್ಚು ತೆರಿಗೆ ಸಂಗ್ರಹಿಸಿದ್ದೇವೆ, ಕೇಂದ್ರ ಸರ್ಕಾರ ಎಷ್ಟುಅನುದಾನ ನೀಡಿದೆ ಎನ್ನುವ ಕುರಿತು ದಾಖಲೆ ಇದೆ. ಕೇಂದ್ರದ ಅನುದಾನ ಕಡಿಮೆ ಆಗಿದೆ ಅಂತ ಹೇಳಿದ್ದಾರೆ. ಕೇಂದ್ರ ಸರ್ಕಾರ ಎರಡು ರೀತಿಯಲ್ಲಿ ಅನುದಾನ ನೀಡಲಿದೆ. ಕೆಲ ಯೋಜನೆಗಳಲ್ಲಿ ನೇರವಾಗಿ ಫಲಾನುಭವಿಗಳಿಗೆ ಅನುದಾನ ದೊರೆಯುತ್ತದೆ. ಅದನ್ನು ಮರೆಮಾಚುವ ಕೆಲಸ ಮಾಡಿದ್ದಾರೆಂದು ಹೇಳಿದರು. ಈ ಬಜೆಟ್‌ನಲ್ಲಿ ಟೀಕೆಗೇ ಹೆಚ್ಚಿನ ಸ್ಥಾನ ನೀಡಿದ್ದಾರೆ. ಗ್ಯಾರಂಟಿ ಯೋಜನೆಗಳಿಗೆ .52 ಸಾವಿರ ಕೋಟಿ ವೆಚ್ಚವಾಗಲಿದೆ ಎಂದು ತಿಳಿಸಿದ್ದಾರೆ. ಈಗಾಗಲೇ 6 ತಿಂಗಳು ಕಳೆದಿದೆ, ಈ ವರ್ಷ ಸುಮಾರು .25 ಸಾವಿರ ಕೋಟಿ ಮಾತ್ರ ಹೆಚ್ಚಿಗೆ ಬೇಕಾಗುತ್ತದೆ. ತೆರಿಗೆ ಹೆಚ್ಚಳದ ಅಗತ್ಯವಿರಲಿಲ್ಲ ಎಂದು ಬೊಮ್ಮಾಯಿ ಅಭಿಪ್ರಾಯಪಟ್ಟರು.

Karnataka Budget 2023: ಈ ವರ್ಷ 25 ಲಕ್ಷ ಮನೆಗೆ ನಲ್ಲಿ ನೀರು: ಕಲ್ಯಾಣ ಕರ್ನಾಟಕಕ್ಕೆ ‘ಮುಖ್ಯಮಂತ್ರಿಗಳ ಫೆಲೋಶಿಪ್‌’

ಸಾಮಾನ್ಯರ ಮೇಲೆ ಹೊರೆ: ಗ್ಯಾರಂಟಿ ಯೋಜನೆಗಳ ಜಾರಿ ಹೆಸರಲ್ಲಿ ಈ ಬಜೆಟ್‌ ಸಾಮಾನ್ಯರ ಮೇಲೆ ದೊಡ್ಡ ಹೊರೆ ಹೊರೆಸಿದೆ. .77 ಸಾವಿರ ಕೋಟಿ ಸಾಲ ಇದ್ದದ್ದು, ಈಗ .88 ಸಾವಿರ ಕೋಟಿಗೆ ಹೆಚ್ಚಿಸಿದ್ದಾರೆ. ನಾವು ಮಿಗತೆ ಬಜೆಟ್‌ ಮಾಡಿದ್ದೆವು. ಇವರು ಡೆಫಿಸಿಟ್‌ ಬಜೆಟ್‌ ಮಾಡಿದ್ದಾರೆ. ಯಾವುದೇ ಭರವಸೆ ನೀಡದೆ, ಜನರಿಗೆ ಸುಳ್ಳು ಭರವಸೆ ನೀಡಿದ್ದಾರೆ. ಶಿಕ್ಷಣ, ಆರೋಗ್ಯ, ಕೃಷಿ, ಪಿಡಬ್ಲ್ಯುಡಿ, ನೀರಾವರಿ, ಯೋಜನೆಗಳಿಗೆ ಅನುದಾನ ಪ್ರಮಾಣ ಕಡಿಮೆ ಮಾಡಿದ್ದಾರೆ. ಹೆಚ್ಚಿನ ಅನುದಾನ ನೀಡದೆ ಅಭಿವೃದ್ಧಿ ಹೇಗೆ ಆಗುತ್ತದೆ ಎಂದು ಖಾರವಾಗಿ ಪ್ರಶ್ನಿಸಿದರು.

Latest Videos
Follow Us:
Download App:
  • android
  • ios