ಬೈ ಎಲೆಕ್ಷನ್ನಲ್ಲಿ ಬಿಜೆಪಿಗೆ ಮತ ನೀಡಿ ಎನ್ನುವ ಆಡಿಯೋ ವೈರಲ್: ಡಿಕೆಶಿ ಪ್ರತಿಕ್ರಿಯಿಸಿದ್ದು ಹೀಗೆ
* ರಂಗೇರಿದ ಹಾನಗಲ್, ಸಿಂದಗಿ ಉಪಚುನಾವಣೆ ಕದನ
* ಬಿಜೆಪಿಯಿಂದ ನೀತಿ ಸಂಹಿತೆ ಉಲ್ಲಂಘನೆ ಆರೋಪ
* ಮತದಾರರಿಗೆ ಫೋನ್ ಮಾಡಿ ಮತ ನೀಡಿ ಎನ್ನುವ ಆಡಿಯೋ ವೈರಲ್
* ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಂದ ಆರೋಪ
ಹಾವೇರಿ, (ಅ.22): ಹಾನಗಲ್ ಹಾಗೂ ಸಿಂದಗಿ ಉಪಚುನಾವಣೆ (By Election) ರಣಾಂಗಣದಲ್ಲಿ ಪ್ರಚಾರದ ಅಬ್ಬರ, ಆರ್ಭಟ ಜೋರಾಗಿದೆ. ಮೂರು ಪಕ್ಷಗಳ ಅತಿರಥ ಮಹಾರಥರು ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಬಿರುಸಿನ ಪ್ರಚಾರದಲ್ಲಿ ನಿರತರಾಗಿದ್ದಾರೆ. ಹಳ್ಳಿ-ಹಳ್ಳಿಗಳಲ್ಲಿ ಮತಬೇಟೆ ಮಾಡುತ್ತಿದ್ದು, ಮತದಾರರಿಗೆ ಆಮಿಷ ಒಡ್ಡಲಾಗುತ್ತಿದೆ ಎನ್ನುವ ಆರೋಪಗಳು ಕೇಳಿಬಂದಿದೆ,
ಬಿಜೆಪಿ(BJP) ಕಾಲ್‍ಸೆಂಟರ್‌ನಿಂದ ಮತದಾರರಿಗೆ ಫೋನ್ ಮಾಡಿ ಬಿಜೆಪಿಗೆ ಮತ ನೀಡಿ ಎನ್ನುವ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi), ಹಿಂದಿನ ಮುಖ್ಯಮಂತ್ರಿ ಯಡಿಯೂರಪ್ಪ (BS Yediyurappa), ಹಾಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಉಚಿತವಾಗಿ ಗ್ಯಾಸ್ ಸಿಲಿಂಡರ್ (Gas Cylinder) ಕೊಟ್ಟಿದ್ದಾರೆ. ಹಾಗಾಗಿ ಬಿಜೆಪಿ ಅಭ್ಯರ್ಥಿಗೆ ಮತ ಹಾಕಿ ಎಂದು ಆಡಿಯೋದಲ್ಲಿ ಮನವಿ ಮಾಡಲಾಗಿದೆ.
'ಹಾನಗಲ್‌ನಲ್ಲಿ ಬಿಜೆಪಿ ಸೋಲುತ್ತೆ, ಬೊಮ್ಮಾಯಿ, ನಿರಾಣಿಗೆ ಗೊತ್ತಿದೆ'
ಇನ್ನು ಈ ಬಗ್ಗೆ ನರೇಗಲ್‍ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರದ ವೇಳೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಪ್ರತಿಕ್ರಿಯಿಸಿದ್ದು. ಕೇಂದ್ರ ಸರ್ಕಾರ ಬಿಪಿಎಲ್ ಕಾರ್ಡ್‍ದಾರರಿಗೆ ಉಚಿತವಾಗಿ ಸಿಲಿಂಡರ್ ಕೊಟ್ಟಿದೆ. ಉಪಚುನಾವಣೆಯಲ್ಲಿ ಬಿಜೆಪಿಗೇ ಮತ ಹಾಕಿ ಎಂದು ಕೇಳುವ ಮೂಲಕ ನೀತಿ-ಸಂಹಿತೆ ಉಲ್ಲಂಘಿಸಲಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ.
ಬಿಜೆಪಿಯ ಕಾಲ್‍ಸೆಂಟರ್‌ನಿಂದ ಮತದಾರರಿಗೆ ಫೋನ್ ಮಾಡಲಾಗುತ್ತಿದೆ. ಬಿಜೆಪಿ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಮತದಾರರ ಮೇಲೆ ಪ್ರಭಾವ ಬೀರಲು ಪ್ರಯತ್ನಿಸುತ್ತಿದೆ ಎಂದು ಕಿಡಿಕಾರಿದರು.
ಅನ್ನಭಾಗ್ಯ ಅಕ್ಕಿ ನೀಡಿದ್ದು ಸಿದ್ದು ಅಲ್ಲ, ಕೇಂದ್ರ: ಯಡಿಯೂರಪ್ಪ
ಪ್ರಧಾನಿ ನರೇಂದ್ರ ಮೋದಿ, ಹಿಂದಿನ ಮುಖ್ಯಮಂತ್ರಿ ಯಡಿಯೂರಪ್ಪ, ಹಾಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉಚಿತವಾಗಿ ಗ್ಯಾಸ್ ಸಿಲಿಂಡರ್ ಕೊಟ್ಟಿದ್ದಾರೆ. ಹಾಗಾಗಿ ಬಿಜೆಪಿ ಅಭ್ಯರ್ಥಿಗೆ ಮತ ಹಾಕಿ ಎಂದು ಮನವಿ ಮಾಡಲಾಗುತ್ತಿದೆ. ಕರೆ ಸ್ವೀಕರಿಸಿದ ಮತದಾರನೊಬ್ಬ ಗ್ಯಾಸ್ ಸಿಲಿಂಡರ್‍ಅನ್ನು ಬಿಜೆಪಿಯವರು ಮನೆಯಿಂದ ತಂದುಕೊಟ್ಟಿದ್ದಾರಾ ಎಂದು ಪ್ರಶ್ನಿಸಿದ್ದಾರೆ.
ನೀವು ಸಿಲಿಂಡರ್ ಕೊಟ್ಟಿದ್ದಕ್ಕಾಗಿ ಮತ ಕೇಳುತ್ತಿದ್ದೀರ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಉಚಿತವಾಗಿ ಅಕ್ಕಿ ಕೊಟ್ಟಿದ್ದರು. ಅದರಲ್ಲಿ ದಿನ ಅನ್ನ ತಿನ್ನುತ್ತಿದ್ದೇವೆ. ಹಾಗಗಿದ್ದರೆ ಕಾಂಗ್ರೆಸ್‍ಗೆ ವೋಟ್ ಹಾಕುವುದು ಬೇಡವೇ ಎಂದು ಮರು ಪ್ರಶ್ನಿಸಿದ್ದಾನೆ. ನೀವು ಸಿಲಿಂಡರ್ ಅಲ್ಲ, ಏನೇ ಕೊಟ್ಟರೂ ನಾನು ಕಾಂಗ್ರೆಸ್‍ಗೇ ಮತ ಹಾಕುತ್ತೇನೆ ಎಂದು ಮತದಾರ ಹೇಳಿರುವ ಆಡಿಯೋ ವೈರಲ್ ಆಗಿದೆ.