Asianet Suvarna News Asianet Suvarna News

ಉಪ​ಸ​ಮರ ನಾಮ​ಪತ್ರ ಸಲ್ಲಿಕೆ ಪ್ರಕ್ರಿಯೆ ಶುರು

 ಶಿರಾ ವಿಧಾನಸಭಾ ಕ್ಷೇತ್ರ ಹಾಗೂ ಬೆಂಗಳೂರಿನ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತಗಳ ಉಪಚುನಾವಣೆಗೆ ಇಂದು ಅಧಿಸೂಚನೆ ಹೊರಬೀಳಲಿದೆ

By Election Nomination Filing Begins From October 9 snr
Author
Bengaluru, First Published Oct 9, 2020, 8:24 AM IST

ಬೆಂಗಳೂರು (ಅ.09):  ತೀವ್ರ ಕುತೂಹಲ ಕೆರಳಿಸಿರುವ ತುಮಕೂರು ಜಿಲ್ಲೆಯ ಶಿರಾ ವಿಧಾನಸಭಾ ಕ್ಷೇತ್ರ ಹಾಗೂ ಬೆಂಗಳೂರಿನ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತಗಳ ಉಪಚುನಾವಣೆಗೆ ಇಂದು ಅಧಿಸೂಚನೆ ಹೊರಬೀಳಲಿದ್ದು, ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಲಿದೆ.

ಆಡಳಿತಾರೂಢ ಬಿಜೆಪಿ ಹಾಗೂ ಪ್ರತಿಪಕ್ಷ ಕಾಂಗ್ರೆಸ್‌ ತೀವ್ರ ಜಿದ್ದಾಜಿದ್ದಿ ಹೋರಾಟದ ನಿರೀಕ್ಷೆ ಮೂಡಿಸಿರುವ ಈ ಎರಡು ಕ್ಷೇತ್ರಗಳಿಗೆ ಶುಕ್ರವಾರ ಅಧಿಸೂಚನೆ ಪ್ರಕಟವಾಗಲಿದೆ. ಅ.16 ರಂದು ನಾಮಪತ್ರ ಸಲ್ಲಿಕೆಗೆ ಕಡೆಯ ದಿನವಾಗಿದೆ. ಅ.17ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಅ.19 ರಂದು ಉಮೇದುವಾರಿಕೆ ಹಿಂಪಡೆಯಲು ಕೊನೆಯ ದಿನವಾಗಿದೆ. ನ.3ರಂದು ಮತದಾನ ನಡೆಯಲಿದ್ದು, ನ.10 ರಂದು ಮತ ಎಣಿಕೆ ನಡೆಯಲಿದೆ. ನ.12 ರಂದು ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳಿದೆ.

ಕಾಂಗ್ರೆಸ್‌ನವರು ಬಿಜೆಪಿ ಹೋಗಲು ಕಾರಣ ಯಾರೆಂದು ಗೊತ್ತು : HDK ಬಾಂಬ್ .

ಆರ್‌.ಆರ್‌.ನಗರ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಮುನಿರತ್ನ ಅವರು ರಾಜೀನಾಮೆ ನೀಡಿ ಬಿಜೆಪಿಗೆ ಸೇರ್ಪಡೆಯಾಗಿರುವುದರಿಂದ ಮತ್ತು ಶಿರಾ ಕ್ಷೇತ್ರದಿಂದ ಆಯ್ಕೆಯಾಗಿದ್ದ ಜೆಡಿಎಸ್‌ನ ಬಿ.ಸತ್ಯನಾರಾಯಣ ಅವರ ಅಕಾಲಿಕ ನಿಧನದಿಂದಾಗಿ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ಘೋಷಣೆ ಮಾಡಲಾಗಿದೆ. ಕೋವಿಡ್‌-19 ಹಿನ್ನೆಲೆಯಲ್ಲಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಅನುಸರಿಸಿ ಉಪಚುನಾವಣೆ ನಡೆಸಬೇಕು ಮತ್ತು ಅಗತ್ಯ ಇರುವಷ್ಟುಮತಯಂತ್ರಗಳನ್ನು ಸಿದ್ದವಾಗಿಟ್ಟುಕೊಳ್ಳಬೇಕು ಎಂದು ಚುನಾವಣಾ ಆಯೋಗವು ಸೂಚನೆ ನೀಡಿದೆ.

ರಾಯಚೂರು ಜಿಲ್ಲೆಯ ಮಸ್ಕಿ ಮತ್ತು ಶಾಸಕ ನಾರಾಯಣರಾವ್‌ ನಿಧನ ಹಿನ್ನೆಲೆಯಲ್ಲಿ ಬಸವಕಲ್ಯಾಣ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆಯಾಗಬೇಕಿದೆ.

Follow Us:
Download App:
  • android
  • ios