'4 ದಿನಗಳಲ್ಲಿ ಉಪ ಚುನಾವಣೆ ಘೋಷಣೆ, ನಾಲ್ಕರಲ್ಲೂ ಗೆಲುವು ನಮ್ಮದೇ'

4 ದಿನಗಳಲ್ಲಿ ಉಪ ಚುನಾವಣೆ ಘೋಷಣೆಯಾಗಲಿದೆ. 4 ಕ್ಷೇತ್ರಗಳಲ್ಲೂ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಸಿಎಂ ಭವಿಷ್ಯ ನುಡಿಸಿದ್ದಾರೆ.

by elections announced in 4 days says cm bs yediyurappa at shivamogga

ಶಿವಮೊಗ್ಗ, (ಮಾ.01): ರಾಜ್ಯದ 3 ವಿಧಾನಸಭಾ ಹಾಗೂ 1 ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಬೇಕಿದ್ದು, ಪ್ರತ್ಯೇಕ ಅಧಿಸೂಚನೆ ಹೊರಡಿಸಲಾಗುವುದು ಎಂದು ಕೇಂದ್ರ ಚುನಾವಣೆ ಆಯೋಗ ತಿಳಿಸಿದೆ.

ಇನ್ನು ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಾ ಅವರು ಪ್ರತಿಕ್ರಿಯೆ ಕೊಟ್ಟಿದ್ದು, 4 ದಿನಗಳಲ್ಲಿ ಉಪ ಚುನಾವಣೆ ಘೋಷಣೆಯಾಗಲಿದೆ. 4 ಕ್ಷೇತ್ರಗಳಲ್ಲೂ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕರ್ನಾಟಕದ 4 ಕ್ಷೇತ್ರಗಳ ಉಪ ಚುನಾವಣೆಗೆ ಪ್ರತ್ಯೇಕ ಅಧಿಸೂಚನೆ

ಶಿವಮೊಗ್ಗದಲ್ಲಿ ಇಂದು (ಸೋಮವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಲೋಕಸಭಾ ಕ್ಷೇತ್ರ ಹಾಗೂ ಮಸ್ಕಿ, ಬಸವ ಕಲ್ಯಾಣ, ಸಿಂಧಗಿ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದೆ. ಉಪ ಚುನಾವಣೆಗೆ ಪಕ್ಷದ ಉಸ್ತುವಾರಿಗಳನ್ನು ನೇಮಕ ಮಾಡಲಾಗಿದೆ. ಚುನಾವಣೆ ಘೋಷಣೆಯಾದ ತಕ್ಷಣ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗುವುದು. ಮಾರ್ಚ್ 8ರಂದು ಬಜೆಟ್ ಮಂಡಿಸಿದ ನಂತರ ಚುನಾವಣಾ ಪ್ರಚಾರ ಆರಂಭಿಸುವೆ ಎಂದರು.

ಪಶ್ಚಿಮ ಬಂಗಾಳ, ಕೇರಳ, ಪುದುಚೇರಿ, ತಮಿಳುನಾಡು ಹಾಗೂ ಅಸ್ಸಾಂ ಪಂಚರಾಜ್ಯಗಳ ಚುನಾವಣೆಗೆ ದಿನಾಂಕ ನಿಗದಿಪಡಿಸಿದ್ದು, ಫಲಿತಾಂಶ ಮೇ 2ರಂದು ಪ್ರಕಟವಾಗಲಿದೆ. ಇದರ ಜೊತೆ ರಾಜ್ಯದ ಬೈ ಎಲೆಕ್ಷನ್‌ ರಿಸಲ್ಟ್‌ ಕೂಡ ಪ್ರಕಟವಾಗಲಿದೆ ಎಂದು ಚುನಾವಣೆ ಆಯೋಗ ತಿಳಿಸಿದೆ. ಆದ್ರೆ, ಮತದಾನ ದಿನಾಂಕವನ್ನು ಪ್ರತ್ಯೇಕ ಅಧಿಸೂಚನೆಯಲ್ಲಿ ತಿಳಿಸಲಾಗುವುದು ಎಂದು ಹೇಳಿದೆ.

Latest Videos
Follow Us:
Download App:
  • android
  • ios