ನವದೆಹಲಿ, (ನ.02): ಈಗಾಗಲೇ ರಾಜ್ಯದಲ್ಲಿ ಆರ್‌.ಆರ್‌ ನಗರ ಹಾಗೂ ಶಿರಾ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ನಡೆಯುತ್ತಿದ್ದು, ನಾಳೆ ಅಂದ್ರ ನ.03ರಂದು ಮತದಾನ ನಡೆಯಲಿದೆ. ಇದರ ಬೆನ್ನಲ್ಲೇ ಕರ್ನಾಟಕದಲ್ಲಿ ಮತ್ತೊಂದು ಉಪಚುನಾವಣೆಗೆ ದಿನಾಂಕ ಪ್ರಕಟವಾಗಿದೆ.

ಹೌದು.. ಕೊರೋನಾ ವೈರಸ್‌ನಿಂದಾಗಿ ನಿಧನರಾದ ಸಂಸದ ಅಶೋಕ್ ಗಸ್ತಿ ಅವರಿಂದ ತೆರವಾದ ಕರ್ನಾಟಕದ ಒಂದು ರಾಜ್ಯಸಭಾ ಸ್ಥಾನಕ್ಕೆ ಉಪಚುನಾವಣೆಯ ದಿನಾಂಕವನ್ನು ಚುನಾವಣಾ ಆಯೋಗ ಪ್ರಕಟಿಸಿದೆ.

ಈ ಬಗ್ಗೆ ಇಂದು (ಸೋಮವಾರ) ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಆಯೋಗದ ಪ್ರಕಟಣೆಯಂತೆ ಡಿಸೆಂಬರ್ 1ರಂದು ಮತದಾನ ಮತ್ತು ಮತ ಎಣಿಕೆ ನಡೆಯಲಿದೆ.

ರಾಯಚೂರು: ಹುಟ್ಟೂರಲ್ಲಿ ಅಶೋಕ ಗಸ್ತಿ ಅಂತ್ಯಕ್ರಿಯೆ

ಡಿಸೆಂಬರ್ 1ರಂದು ರಾಜ್ಯಸಭೆ ಸ್ಥಾನಕ್ಕಾಗಿನ ಚುನಾವಣೆ ಜತೆಗೆ ಉತ್ತರ ಪ್ರದೇಶ ವಿಧಾನ ಪರಿಷತ್ತಿನ 11 ಪದವೀಧರರು ಹಾಗೂ ಶಿಕ್ಷಕರ ಕ್ಷೇತ್ರಗಳಿಗೆ ಮತ್ತು ಮಹಾರಾಷ್ಟ್ರ ವಿಧಾನ ಪರಿಷತ್ತಿನ 5 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ ಎಂದು ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ.

ಬಿಜೆಪಿ ಮುಖಂಡರಾದ ಗಸ್ತಿ ಅವರು ಜುಲೈನಲ್ಲಿ ಮೊದಲ ಬಾರಿಗೆ ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಆದರೆ ಕೋವಿಡ್ -19 ಕಾರಣ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನದ್ದರು.