ಕುಂದಾಪುರ (ಜೂ.08):  ಸಂಘಟನೆಯಿಂದ ನಮ್ಮ ಕುಟುಂಬಕ್ಕೆ ಸಾಕಷ್ಟುಅವಕಾಶಗಳು ದೊರೆತಿವೆ. ಸೋದರ ಬಿ.ವೈ. ವಿಜಯೇಂದ್ರ ಅವರನ್ನು ಉಪ ಮುಖ್ಯಮಂತ್ರಿ ಮಾಡುತ್ತಾರೆ, ಬಿಜೆಪಿ ಅಧ್ಯಕ್ಷರನ್ನಾಗಿ ಮಾಡುತ್ತಾರೆ ಎನ್ನುವ ಸುದ್ದಿ ಸುಳ್ಳು ಎಂದು ಸಂಸದ ಬಿ.ವೈ. ರಾಘವೇಂದ್ರ ಸ್ಪಷ್ಟಪಡಿಸಿದ್ದಾರೆ.

ಸೋಮ​ವಾರ ಸುದ್ದಿ​ಗೋ​ಷ್ಠಿ​ಯಲ್ಲಿ ಮಾತ​ನಾ​ಡಿದ ಅವರು, ವೈಯಕ್ತಿಕ ಕೆಲಸಗಳಿಗಾಗಿ ವಿಜಯೇಂದ್ರ ಅವರು ದೆಹಲಿಗೆ ಹೋಗಿದ್ದ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷರ ನೆಲೆಯಲ್ಲಿ ಪಕ್ಷದ ಹಿರಿಯರನ್ನು ಭೇಟಿಯಾಗಿದ್ದಾರೆಯೇ ಹೊರತು ಇದಕ್ಕೆ ರಾಜಕೀಯ ಕಾರಣಗಳು ಇಲ್ಲ ಎಂದು ತಿಳಿಸಿದರು.

ವಿಜಯೇಂದ್ರ ದಿಲ್ಲಿಗೆ ಹೋಗಿದ್ಯಾಕೆ? ಹೈಕಮಾಂಡ್ ಹೇಳಿದ್ದೇನು? ಹೊಸ ಬಾಂಬ್ ಸಿಡಿಸಿದ ಯತ್ನಾಳ್ ..

ಬ್ಲ್ಯಾಕ್‌ ಫಂಗಸ್‌ ಚಿಕಿತ್ಸೆಯ ವೆಚ್ಚವನ್ನು ರಾಜ್ಯ ಸರ್ಕಾರವೇ ವಹಿಸಿಕೊಂಡಿದೆ. ಕೋವಿಡ್‌ ಕಾರಣದಿಂದ ಸಂಕಷ್ಟಕ್ಕೆ ಒಳಗಾಗಿರುವ ಕುಟುಂಬಗಳಿಗೆ ಸ್ಪಂದಿಸುವ ಕೆಲಸ ಸರ್ಕಾರದಿಂದ ಆಗುತ್ತಿದೆ ಎಂದು ಹೇಳಿದರು.