ಬೆಂಗಳೂರು, (ಫೆ.13):ಕಾಶಪ್ಪನವರ್ ಅಂದ್ರೆ ಯಾರು? ಮಾಜಿ ಶಾಸಕನಾ? ಬಾರ್ ನಲ್ಲಿ ಗಲಾಟೆ ಮಾಡಿದ್ರಲ್ಲ ಅವರಾ? ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿರುಗೇಟು ನೀಡಿದ್ದಾರೆ.

ವಿರುದ್ಧ ಗಂಭೀರ ಆರೋಪ ಮಾಡಿದ್ದು, ಶ್ರೀಗಳ ಮೂಲಕ ಪಂಚಮಸಾಲಿ ಹೋರಾಟವನ್ನು ಹತ್ತಿಕ್ಕುವ ಕೆಲಸವನ್ನು ಮುಖ್ಯಮಂತ್ರಿ ಪುತ್ರ ವಿಜಯೇಂದ್ರ ಮಾಡುತ್ತಿದ್ದಾರೆ ಎಂದು ವಿಜಯಾನಂದ ಕಾಶಪ್ಪನವರ್, ವಿಜಯೇಂದ್ರ ವಿರುದ್ಧ ಗಂಭೀರ ಆರೋಪ ಮಾಡಿದ್ದರು.

ಬಿಜೆಪಿಗೆ ಖಡಕ್ ಎಚ್ಚರಿಕೆ ಸಂದೇಶ ರವಾನಿಸಿದ ಜಯ ಮೃತ್ಯುಂಜಯ ಸ್ವಾಮೀಜಿ

ಇದೀಗ ವಿಜಯಾನಂದ ಕಾಶಪ್ಪನವರ್ ಅವರ ಆರೋಪಕ್ಕೆ ಏಕವಚನದಲ್ಲೇ ತಿರುಗೇಟು ನೀಡಿದ ವಿಜಯೇಂದ್ರ, ಹಾದಿ ಬೀದಿಯಲ್ಲಿ ನಿಂತು ಹೇಳಿಕೆಗಳನ್ನು ನೀಡಬಾರದು. ಯಾರ ಯೋಗ್ಯತೆ ಏನು ಎಂಬುದು ಎಲ್ಲರಿಗೂ ಗೊತ್ತಿದೆ ಎಂದು ಟಾಂಗ್ ಕೊಟ್ಟರು.

ಬಿಜೆಪಿ ಉಪಾಧ್ಯಕ್ಷನಾಗಿ ನಾನು ನನ್ನ ಇತಿಮಿತಿಯಲ್ಲಿ ಕೆಲಸ ಮಾಡುತ್ತಿದ್ದೇನೆ. ಯಾವ ಹೋರಾಟವನ್ನು ದಿಕ್ಕು ತಪ್ಪಿಸುವ ಕೆಲಸ ಮಾಡಿಲ್ಲ. ಅದು ನನಗೆ ಸಂಬಂಧಿಸಿದ ವಿಚಾರವೂ ಅಲ್ಲ.  ಸಿಎಂ ಯಡಿಯೂರಪ್ಪ ಎಲ್ಲಾ ಮಠಮಾನ್ಯಗಳಿಗೆ ಗೌರವ ಕೊಡುತ್ತಾರೆ. ಕಾಶಪ್ಪನವರ್ ಇಲ್ಲಸಲ್ಲದ ಆರೋಪಗಳನ್ನು ಮಾಡಬಾರದು ಎಂದು ಕಿಡಿಕಾರಿದರು.