ಕಾಂಗ್ರೆಸ್‌ ಸರ್ಕಾರದಿಂದ ದಲಿತರ ಹಣ ಹಗಲು ದರೋಡೆ, 500ಕ್ಕೂ ಹೆಚ್ಚು ರೈತರ ಆತ್ಮಹತ್ಯೆ: ವಿಜಯೇಂದ್ರ ವಾಗ್ದಾಳಿ

ಮೊಸಳೆ ಕಣ್ಣೀರು ಹಾಕುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರದಿಂದ 500 ಕ್ಕೂ ಅಧಿಕ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ   ಬಿ ವೈ ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
 

by vijayendra public meeting at chikkaballapur gow

ವರದಿ: ರವಿಕುಮಾರ್ ವಿ, ಏಷ್ಯಾನೆಟ್ ಸುವರ್ಣ ನ್ಯೂಸ್

ಚಿಕ್ಕಬಳ್ಳಾಪುರ (ಫೆ.12): ಮೊಸಳೆ ಕಣ್ಣೀರು ಹಾಕುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರದಿಂದ 500 ಕ್ಕೂ ಅಧಿಕ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಭೀಕರ ಬರಗಾಲ ಬಂದಿರುವ ಸಮಯದಲ್ಲಿ ಏಳು ಗಂಟೆ ವಿದ್ಯುತ್‌ ಕೊಡಲು ಆಗುತ್ತಿಲ್ಲ ಎಂದು  ಬಿಜೆಪಿ ರಾಜ್ಯಾಧ್ಯಕ್ಷ   ಬಿ ವೈ ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದರು.

ಚಿಕ್ಕಬಳ್ಳಾಪುರ ತಾಲೂಕಿನ ದಿಬ್ಬೂರು ಗ್ರಾಮದಲ್ಲಿ ಆಯೋಜಿಸಿದ್ದ ಗ್ರಾಮ ಪರಿಕ್ರಮ ಕಾರ್ಯಕ್ರಮ ದಲ್ಲಿ ಭಾಗವಹಿಸಿ ಮಾತನಾಡಿದರು. ಈ ವೇಳೆ ಮಾತನಾಡಿದ ಅವರು 200 ಯೂನಿಟ್ ಉಚಿತ ಎಂದ ಕಾಂಗ್ರೆಸ್‌ ರೈತರಿಗೆ ಸರಿಯಾಗಿ ವಿದ್ಯುತ್‌ ನೀಡಿದ್ದರೆ ಆತ್ಮಹತ್ಯೆ ನಡೆಯುತ್ತಿರಲಿಲ್ಲ. ಉಚಿತ ಬಸ್‌ ಎಂದು ಹೇಳಿ ಮಕ್ಕಳಿಗೆ ಬಸ್‌ ನೀಡಿಲ್ಲ. ಸ್ಟಾಂಪ್‌ ಡ್ಯೂಟಿ ದರ ಹೆಚ್ಚಳವಾಗಿದೆ. ಬಿಜೆಪಿ-ಜೆಡಿಎಸ್‌ ಒಂದಾಗಿ ಚುನಾವಣೆ ಎದುರಿಸುತ್ತಿದ್ದು, ಎಲ್ಲ 28 ಕ್ಷೇತ್ರಗಳನ್ನೂ ಗೆಲ್ಲಲಿದ್ದೇವೆ. ಈ ಮೂಲಕ ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸಲಿದ್ದೇವೆ ಎಂದರು.

ರಾಜ್ಯ ಸರ್ಕಾರದ ಅನ್ಯಾಯದ ವಿರುದ್ಧ ಸಿಡಿದೆದ್ದ ಅರಣ್ಯಶಾಸ್ತ್ರ ಪದವಿ ವಿ ...

ಅದರಂತೆಯೇ ಈ ಭಾಗದ ಬಿಜೆಪಿ ಕಾರ್ಯಕರ್ತರು ಚಿಕ್ಕಬಳ್ಳಾಪುರ ಹಾಗೂ ಕೋಲಾರ ಕ್ಷೇತ್ರಗಳನ್ನು ಗೆಲ್ಲಿಸಿ ಅವರ ಕೈಯಲ್ಲಿ ಇರಿಸಬೇಕು ಎಂದು ಮಾಜಿ ಸಚಿವ ಡಾ.ಕೆ.ಸುಧಾಕರ್‌ ಕರೆ ನೀಡಿದರು. ಲೋಕಸಭಾ ಚುನಾವಣೆಯಲ್ಲಿ ಜನರು ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು 28 ಕ್ಷೇತ್ರಗಳನ್ನು ಗೆಲ್ಲಿಸುವುದಾಗಿ ಹೇಳಿದ್ದಾರೆ. ಅದರಂತೆಯೇ ಈ ಭಾಗದ ಬಿಜೆಪಿ ಕಾರ್ಯಕರ್ತರು ಚಿಕ್ಕಬಳ್ಳಾಪುರ ಹಾಗೂ ಕೋಲಾರ ಎರಡೂ ಕ್ಷೇತ್ರಗಳನ್ನು ಗೆಲ್ಲಿಸಿ ಅವರ ಕೈಯಲ್ಲಿ ಇರಿಸಬೇಕು. ರೈತರ ಕಲ್ಯಾಣಕ್ಕಾಗಿ ಮತ್ತೆ ನರೇಂದ್ರ ಮೋದಿಯವರನ್ನು ಪ್ರಧಾನಿಯಾಗಿಸಬೇಕು. ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವನ್ನು ತೆಗೆದು ಮತ್ತೆ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತರಬೇಕು ಎಂದರು.

ಪ್ರಧಾನಿ ನರೇಂದ್ರ ಮೋದಿ ರೈತರ ಆರ್ಥಿಕ ಸ್ಥಿತಿ ಬಲಪಡಿಸಲು ಕೆಲಸ ಮಾಡುತ್ತಿದ್ದಾರೆ. ಆದರೆ ಕಾಂಗ್ರೆಸ್‌ ಸರ್ಕಾರ ಅಮಾಯಕ ರೈತರ ಮತ ಗಳಿಸಿ ಅಪಚಾರ ಎಸಗುತ್ತಿದೆ. ಕೋವಿಡ್‌ ಬಂದ ಸಮಯದಲ್ಲಿ ಬಡವರು ಹಸಿವಿನಿಂದ ಇರಬಾರದು ಎಂಬ ಕಾರಣಕ್ಕೆ ಪ್ರಧಾನಿ ಮೋದಿ ಸರ್ಕಾರ ಗರೀಬ್‌ ಕಲ್ಯಾಣ ಯೋಜನೆಯಡಿ 5 ಕೆಜಿ ಅಕ್ಕಿ ನೀಡಿದೆ. ಇನ್ನು ಮುಂದೆಯೂ ಅಕ್ಕಿ ನೀಡಲಿದೆ. ಆದರೆ ನಾನು ಅನ್ನಭಾಗ್ಯ ಕೊಟ್ಟೆ ಎಂದು ಅವರು ಹೇಳಿಕೊಳ್ಳಲಿಲ್ಲ. ಆದರೆ ಅಕ್ಕಿ ನೀಡದ ಕಾಂಗ್ರೆಸ್‌ ಸರ್ಕಾರ ಕ್ರೆಡಿಟ್‌ ತೆಗೆದುಕೊಳ್ಳುತ್ತಿದ್ದು, ಅದಕ್ಕಾಗಿ ಕಾಂಗ್ರೆಸ್‌ ನಾಯಕರಿಗೆ ನಾಚಿಕೆಯಾಗಬೇಕು ಎಂದರು.

ರಾಜ್ಯಪಾಲ ಭಾಷಣದಲ್ಲಿ ಕೇಂದ್ರದ ವಿರುದ್ಧ ಟಾಕ್‌ಫೈಟ್‌, ತೆರಿಗೆ ವಿಚಾರದ ...

ದಲಿತರು ಪ್ರತಿಭಟಿಸಿ
ಪರಿಶಿಷ್ಟ ಜಾತಿ, ಪಂಗಡಕ್ಕೆ ಸೇರಿದ 11 ಸಾವಿರ ಕೋಟಿ ರೂಪಾಯಿಯನ್ನು ಕಾಂಗ್ರೆಸ್‌ ಸರ್ಕಾರ ಗ್ಯಾರಂಟಿಗೆ ಬಳಸಿಕೊಂಡಿದೆ. ಇದು ದಲಿತರ ವಿಚಾರದಲ್ಲಿ ಸರ್ಕಾರ ಮಾಡಿದ ದೊಡ್ಡ ಅಪರಾಧ. ದಲಿತರ ಹಣವನ್ನು ಕಾಂಗ್ರೆಸ್‌ ಸರ್ಕಾರ ಹಗಲು ದರೋಡೆ ಮಾಡಿದೆ. ಇದರ ವಿರುದ್ಧ ದಲಿತ ಸಂಘಟನೆಗಳು ಪ್ರತಿಭಟಿಸಬೇಕು ಎಂದು ಕೋರುತ್ತೇನೆ ಎಂದರು. 

ಚಿಕ್ಕಬಳ್ಳಾಪುರಕ್ಕೆ ಬಿಜೆಪಿ ಸರ್ಕಾರ ಪ್ರತ್ಯೇಕ ಹಾಲು ಒಕ್ಕೂಟ ನೀಡಿದ್ದರೆ, ಕಾಂಗ್ರೆಸ್‌ ಸರ್ಕಾರ ಅದನ್ನು ರದ್ದುಪಡಿಸಿದೆ. ಪ್ರೋತ್ಸಾಹಧನ ಹೆಚ್ಚಳ ಮಾಡುತ್ತೇವೆ ಎಂದು ಹೇಳಿ 715 ಕೋಟಿ ರೂ. ಬಾಕಿ ಉಳಿಸಿಕೊಂಡಿದ್ದಾರೆ. ಪಂಪ್‌ಸೆಟ್‌ಗಳಿಗೆ ವಿದ್ಯುತ್‌ ಕೂಡ ನೀಡಿಲ್ಲ. ಕಲಬುರ್ಗಿಯಲ್ಲಿ ನಡೆದ ಗ್ಯಾರಂಟಿ ಕಾರ್ಯಕ್ರಮಕ್ಕೆ 2 ಕೋಟಿ ರೂ. ಖರ್ಚಾಗಿದೆ. ಯುವನಿಧಿಗೆ 70 ಸಾವಿರ ಯುವಜನರು ನೋಂದಣಿ ಮಾಡಿಕೊಂಡಿದ್ದು, 2 ಸಾವಿರ ಜನರಿಗೆ ಮಾತ್ರ ನಿಧಿ ನೀಡಿದ್ದಾರೆ. ಇದಕ್ಕೆ 50 ಲಕ್ಷ ರೂ. ಖರ್ಚಾಗಲಿದೆ. ಗ್ಯಾರಂಟಿ ಕಾರ್ಯಕ್ರಮಕ್ಕೆ ಮಾಡಿದ ವೆಚ್ಚದಷ್ಟೂ ಯುವನಿಧಿಗೆ ಹಣ ನೀಡಿಲ್ಲ ಎಂದರು.

ಬಿಜೆಪಿಯಲ್ಲಿ ಹೊಸ ಚೈತನ್ಯ
ಬಿ.ವೈ.ವಿಜಯೇಂದ್ರ ಅವರಿಗೆ ಸಣ್ಣ ವಯಸ್ಸಿನಲ್ಲಿ ಉತ್ತಮ ಅವಕಾಶ ದೊರೆತಿದ್ದು, ಅದನ್ನು ಪಡೆಯಲು ಅವರಿಗೆ ಯೋಗವೂ ಇದೆ, ಯೋಗ್ಯತೆಯೂ ಇದೆ. ಬಿ.ಎಸ್‌.ಯಡಿಯೂರಪ್ಪ ಅವರ ಗುಣ ರಕ್ತಗತವಾಗಿ ವಿಜಯೇಂದ್ರ ಅವರಿಗೆ ಬಂದಿದೆ. ಅವರು ರಾಜ್ಯಾಧ್ಯಕ್ಷರಾದ ಬಳಿಕ ಕಾರ್ಯಕರ್ತರಲ್ಲಿ ಹೊಸ ಚೈತನ್ಯ ಬಂದಿದೆ ಎಂದರು. 

ಬೂತ್‌ ಭೇಟಿ
ಇದೇ ವೇಳೆ ಡಾ.ಕೆ.ಸುಧಾಕರ್‌ ಅವರು ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರೊಂದಿಗೆ ಗ್ರಾಮದ ಬೂತ್ ಅಧ್ಯಕ್ಷ ಮಂಜುನಾಥ ಅವರ ಮನೆಗೆ ಭೇಟಿ ನೀಡಿದರು. ಬೂತ್ ಮಟ್ಟದಲ್ಲಿ ಜನರು ಹಾಗೂ ಕಾರ್ಯಕರ್ತರೊಂದಿಗೆ ಮಾತುಕತೆ ನಡೆಸಿದರು. 

Latest Videos
Follow Us:
Download App:
  • android
  • ios