ಜೆಡಿಎಸ್ ಪಕ್ಷ ಎನ್‍ಡಿಎ ಕೂಟಕ್ಕೆ ಸೇರಿದ ನಂತರ ಯಾವುದೇ ಹೋರಾಟ ಮತ್ತು ತೀರ್ಮಾನಗಳನ್ನು ಜಂಟಿಯಾಗಿಯೇ ತೆಗೆದುಕೊಳ್ಳುತ್ತಿದ್ದೇವೆ. ಬುಧವಾರ ನಮ್ಮ ಕೇಂದ್ರದ ವರಿಷ್ಠರು ಮತ್ತು ಜೆಡಿಎಸ್‌ನ ರಾಜ್ಯದ ಹಿರಿಯರು ಚರ್ಚಿಸಿ ರಾಜ್ಯಸಭೆಗೆ 5ನೇ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿಯವರನ್ನು ಕಣಕ್ಕೆ ಇಳಿಸಲು ನಿರ್ಧರಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ 

ಬೆಂಗಳೂರು(ಫೆ.16): ರಾಜ್ಯಸಭಾ ಚುನಾವಣೆಗೆ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಅವರು ನಾಮಪತ್ರ ಸಲ್ಲಿಸಿದ್ದಾರೆ ಎಂದರೆ ಜೆಡಿಎಸ್ ಕಾರ್ಯತಂತ್ರ ಇದ್ದೇ ಇರುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾರ್ಮಿಕವಾಗಿ ಹೇಳಿದ್ದಾರೆ.

Add Asianetnews Kannada as a Preferred SourcegooglePreferred

ಗುರುವಾರ ವಿಧಾನಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಪಕ್ಷ ಎನ್‍ಡಿಎ ಕೂಟಕ್ಕೆ ಸೇರಿದ ನಂತರ ಯಾವುದೇ ಹೋರಾಟ ಮತ್ತು ತೀರ್ಮಾನಗಳನ್ನು ಜಂಟಿಯಾಗಿಯೇ ತೆಗೆದುಕೊಳ್ಳುತ್ತಿದ್ದೇವೆ. ಬುಧವಾರ ನಮ್ಮ ಕೇಂದ್ರದ ವರಿಷ್ಠರು ಮತ್ತು ಜೆಡಿಎಸ್‌ನ ರಾಜ್ಯದ ಹಿರಿಯರು ಚರ್ಚಿಸಿ ರಾಜ್ಯಸಭೆಗೆ 5ನೇ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿಯವರನ್ನು ಕಣಕ್ಕೆ ಇಳಿಸಲು ನಿರ್ಧರಿಸಿದರು ಎಂದು ವಿವರಿಸಿದರು.

ರಾಜ್ಯಸಭೆ ಅಖಾಡಕ್ಕೆ 5ನೇ ಅಭ್ಯರ್ಥಿ ಕುಪೇಂದ್ರ ಪ್ರವೇಶ

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಬಿಜೆಪಿ- ಜೆಡಿಎಸ್ ಒಟ್ಟಾಗಿ ನಮ್ಮ ಅಭ್ಯರ್ಥಿ ಗೆಲ್ಲುವ ದೃಷ್ಟಿಯಿಂದ ತಂತ್ರಗಾರಿಕೆಯನ್ನು ಮುಂದಿನ ದಿನಗಳಲ್ಲಿ ರೂಪಿಸಲಿದ್ದೇವೆ ಎಂದರು.