ತೀವ್ರ ಕುತೂಹಲ ಮೂಡಿಸಿದ್ದ ರಾಯಚೂರು ಜಿಲ್ಲೆಯ ಮಸ್ಕಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಿದೆ. ಇನ್ನು ಈ ರಾಜ್ಯ ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ ಅವರು ಪ್ರತಿಕ್ರಿಯಿಸಿದ್ದು ಹೀಗೆ....

ಬೆಂಗಳೂರು, (ಮೇ.02): ರಾಯಚೂರು ಜಿಲ್ಲೆಯ ಮಸ್ಕಿ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್ ಗೆ ಸೋಲು ಕಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರುವಿಹಾಳ 30 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

YouTube video player

ಬಸವನಗೌಡ ತುರುವಿಹಾಳ 86,222 ಮತಗಳನ್ನು ಪಡೆದಿದ್ದರೆ ಪ್ರತಾಪ್ ಗೌಡ ಪಾಟೀಲ್ 55,581 ಮತಗಳನ್ನು ಪಡೆದಿದ್ದು ಈ ಮೂಲಕ ಬಸನಗೌಡ ಬರೋಬ್ಬರಿ 30, 666 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಮಸ್ಕಿಯಲ್ಲಿ ಕಾಂಗ್ರೆಸ್‌ಗೆ ಭರ್ಜರಿ ಜಯ; ಕಾರ್ಯಕರ್ತರಿಗೆ ಡಿಕೆಶಿ ಮಹತ್ವದ ಮನವಿ 

ಈ ಮೂಲಕ ಮಸ್ಕಿ ಉಪಚುನಾವಣೆಯ ಉಸ್ತುವಾರಿ ತೆಗೆದುಕೊಂಡಿದ್ದ ಸಿಎಂ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿವೈ ವಿಜಯೇಂದ್ರ ಅವರಿಗೆ ತೀವ್ರ ಮುಖಭಂಗವಾಗಿದೆ.

ಸುಮಾರ್ 10ದಿನಗಳಿಂದ ಮಸ್ಕಿಯಲ್ಲಿ ಬೀಡುಬಿಟ್ಟು ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ಗೆಲುವಿಗೆ ನಾನಾ ತಂತ್ರಗಳನ್ನು ಹೆಣೆದಿದ್ದರು. ಆದ್ರೆ, ಮತದಾರ ಬಿಜೆಪಿಯನ್ನು ತಿರಸ್ಕಾರ ಮಾಡಿದ್ದಾನೆ

ಇನ್ನು ಈ ಬಗ್ಗೆ ಟ್ವಿಟ್ಟರ್‌ನಲ್ಲಿ ಪ್ರತಿಕ್ರಿಯಿಸಿದ್ದು, ಜನಾದೇಶಕ್ಕೆ ತಲೆಬಾಗುತ್ತಾ ಚುನಾವಣೆಗಳಲ್ಲಿ ಸೋಲು-ಗೆಲುವುಗಳನ್ನು ಸಮಭಾವದಿಂದ ಸ್ವೀಕರಿಸೋಣ. ಮಸ್ಕಿ ಕಾರ್ಯಕರ್ತರು ಎದೆಗುಂದುವುದು ಬೇಡ.ನಿಮ್ಮ ಪರಿಶ್ರಮ, ಹೋರಾಟ ವ್ಯರ್ಥವಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮಮೇಲಿದೆ. ಕಾರ್ಯಕರ್ತನಾಗಿ ಸದಾ ನಿಮ್ಮೊಂದಿಗಿರುವೆ.ಬಿಜೆಪಿ ಬೆಂಬಲಿಸಿದ ಮತದಾರ ಬಂಧುಗಳಿಗೆ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸುವೆ ಎಂದಿದ್ದಾರೆ.

Scroll to load tweet…