ಮೈಸೂರು (ಡಿ.01): ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. 
ಸಿಎಂ ಬದಲಾವಣೆ ಸಂಬಂಧ ಮೈಸೂರಿನಲ್ಲಿ  ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಇನ್ನೂ ಎರಡೂವರೆ ವರ್ಷ ಯಡಿಯೂರಪ್ಪ ಮುಖ್ಯಮಂತ್ರಿ ಎಂದು ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಹೇಳಿದ್ದಾರೆ.

 ಸಂತೋಷ್‌ ಆತ್ಮಹತ್ಯೆ ಯತ್ನ ಕೇಸ್‌ ತನಿಖೆಗೆ ಡಿಕೆಶಿ ಒತ್ತಾಯ ಕುರಿತು ಪ್ರತಿಕ್ರಿಯಿಸಿದ ಅವರು, ಡಿ.ಕೆ. ಶಿವಕುಮಾರ್‌ ಉಪಚುನಾವಣೆ ಸೋಲಿನಿಂದ ಹತಾಶರಾಗಿದ್ದಾರೆ. 

ಸೋಲಿನ ಹತಾಶೆಯಿಂದ ಸಂತೋಷ್‌ ವಿಚಾರವನ್ನು ರಾಜಕೀಯವಾಗಿ ಬಳಸುತ್ತಿದ್ದಾರೆ. ಈ ರೀತಿಯ ವಿಚಾರಗಳನ್ನು ಹುಡುಕುತ್ತಾ ರಾಜಕಾರಣ ಮಾಡುತ್ತಿದ್ದಾರೆ. ಈಗಾಗಲೇ ಸಿಎಂ ಆಸ್ಪತ್ರೆಗೆ ಭೇಟಿ ನೀಡಿ ಸಂತೋಷ್‌ ಆರೋಗ್ಯ ವಿಚಾರಿಸಿದ್ದಾರೆ ಎಂದು ಹೇಳಿದರು.

ಬೇಲೂರಿನಿಂದ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಈಗಲೇ ಫಿಕ್ಸ್ : ಗೆಲುವು ಫಿಕ್ಸ್ ಎಂದ ವಿಜಯೇಂದ್ರ ..

ಯಡಿಯೂರಪ್ಪ ಸಿಎಂ ಆಗಲು ಕುರುಬ ಸಮುದಾಯದ ಕೊಡುಗೆ ಇದೆ ಎಂಬ ಎಚ್‌.ವಿಶ್ವನಾಥ್‌ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಈಗಾಗಲೇ ನಳಿನ್‌ ಕುಮಾರ್‌ ಕಟೀಲ್, ಮುಖ್ಯಮಂತ್ರಿ ಸಮಾಲೋಚನೆ ಮಾಡಿದ್ದಾರೆ. ರಾಷ್ಟ್ರೀಯ ನಾಯಕರ ಜೊತೆಯೂ ಚರ್ಚೆ ಮಾಡಲಾಗಿದೆ. ಆದಷ್ಟುಬೇಗ ಇದಕ್ಕೆ ಉತ್ತರ ಸಿಗಲಿದೆ. ಯಾರಿಗೂ ಅನ್ಯಾಯ ಆಗುವ ಪ್ರಶ್ನೆಯೇ ಇಲ್ಲ ಎಂದರು.