ಬಿಎಸ್‌ವೈ ಸವಾಲಿನಿಂದ ವಿಪಕ್ಷದ ನಿದ್ದೆ ಹಾಳಾಗಿದೆ: ವಿಜಯೇಂದ್ರ
ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಸಂದರ್ಭದಲ್ಲಿ 2023ರ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಮತ್ತೆ ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರುತ್ತೇನೆಂದು ಹೇಳಿದ್ದರು. ಈ ಮಾತು ಪ್ರತಿಪಕ್ಷಗಳಿಗೆ ನಿದ್ದೆಗೆಡಿಸಿದೆ: ಬಿ.ವೈ. ವಿಜಯೇಂದ್ರ
ಚಿಕ್ಕಮಗಳೂರು(ಮಾ.05): ಮಾಜಿ ಸಿಎಂ ಯಡಿಯೂರಪ್ಪ ಸವಾಲು ಹಾಕಿದ್ರೆ ಅದರ ಪರಿಣಾಮ ಏನಾಗುತ್ತೆ ಎಂಬುದು ಪ್ರತಿಪಕ್ಷದವರಿಗೆ ಗೊತ್ತಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.
ನಗರದಲ್ಲಿ ಶನಿವಾರ ಯುವ ಸಂಗಮ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಸಂದರ್ಭದಲ್ಲಿ 2023ರ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಮತ್ತೆ ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರುತ್ತೇನೆಂದು ಹೇಳಿದ್ದರು. ಈ ಮಾತು ಪ್ರತಿಪಕ್ಷಗಳಿಗೆ ನಿದ್ದೆಗೆಡಿಸಿದೆ ಎಂದರು.
Prajadhwani yatre: ಜನ ಜೀವನ ಸುಧಾರಣೆಗೆ ಕಾಂಗ್ರೆಸ್ ಕಂಕಣಬದ್ಧ: ಬಿಕೆ ಹರಿಪ್ರಸಾದ್
ಕಾಂಗ್ರೆಸ್ ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಬರಬೇಕೆಂದು ಹಗಲುಗನಸು ಕಾಣುತ್ತಿದೆ. ಈ ಹಿಂದೆ 5 ವರ್ಷ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿತ್ತು. ಆಗ ಜಾತಿ, ಧರ್ಮಗಳ ಮಧ್ಯೆ ವಿಷ ಬೀಜ ಬಿತ್ತಿದರು. ಹಲವು ಮಂದಿ ಹಿಂದೂ ಕಾರ್ಯಕರ್ತರು ಹತ್ಯೆಯಾದರು, ಅಲ್ಪಸಂಖ್ಯಾತರನ್ನು ಓಲೈಸುವ ರಾಜಕಾರಣ ಮಾಡಿದರು. ಕೇಸರಿ ಪೇಟ, ಕುಂಕುಮ ಕಂಡರೆ ಅವರಿಗೆ ತಲೆ ತಿರುಗುತ್ತೆ. ಇಂತಹವರನ್ನು ರಾಜ್ಯದ ಜನ ಕ್ಷಮಿಸುವುದಿಲ್ಲ. ಯಡಿಯೂರಪ್ಪನವರ ಮುಖ್ಯಮಂತ್ರಿ ಅವಧಿಯಲ್ಲಿ ಎಲ್ಲಾ ಜಾತಿಯವರನ್ನು ಒಂದೇ ಕುಟುಂಬದವರಂತೆ ನೋಡಿಕೊಳ್ಳಲಾಗಿತ್ತು. ಹೀಗಾಗಿ ಅವರ ಮೇಲೆ ಈ ರಾಜ್ಯದ ಜನತೆ ವಿಶ್ವಾಸ ಇಟ್ಟಿದ್ದಾರೆ. ಅವರ ಈ ಆದರ್ಶವನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನಡೆಸಿಕೊಂಡು ಹೋಗುತ್ತಿದ್ದಾರೆ. ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತ ಎಂದು ಹೇಳಿದರು.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಅಮೇಥಿ ಕ್ಷೇತ್ರದಲ್ಲಿ ಸೋತ ನಂತರ, ಕೇರಳದ ವೈನಾಡು ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡರು. ಇದಕ್ಕೆ ಕಾರಣ, ಅಲ್ಲಿ ಶೇ.50 ರಷ್ಟು ಮುಸ್ಲಿಂ, ಶೇ.20 ರಷ್ಟು ಕ್ರಿಶ್ಚಿಯನ್ ಸಮುದಾಯದವರಿದ್ದಾರೆ. ದೇಶದ ಯಾವುದೇ ಕ್ಷೇತ್ರದಲ್ಲಿ ನಿಂತರೂ ಅವರು ಗೆಲ್ಲಲು ಸಾಧ್ಯವಿಲ್ಲ, ಹಾಗಾಗಿ, ವೈನಾಡನ್ನು ಆಯ್ಕೆ ಮಾಡಿಕೊಂಡಿದ್ದಾರೆ. ದೇಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಡ್ರೆಸ್ ಇಲ್ಲದಂತಾಗಿದೆ. ಅಂತಹ ದಾರುಣ ಸ್ಥಿತಿಗೆ ಬಂದಿದೆ ಎಂದು ಟೀಕಿಸಿದರು.