ಯಡಿಯೂರಪ್ಪನವರಿಗೆ ಕಲ್ಲು ಎಸೆದರೆ ಅದು ಪಕ್ಷಕ್ಕೇ ಹೊಡೆತ ಬೀಳುತ್ತದೆ. ಇದನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು. ಬರುವ ದಿನಗಳಲ್ಲಿ ಇದು ಅರ್ಥವಾಗಲಿದೆ ಎಂದು ಬಿಜೆಪಿ ರಾಜ್ಯಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. 

ವಿಜಯಪುರ (ಜ.28): ಯಡಿಯೂರಪ್ಪನವರಿಗೆ ಕಲ್ಲು ಎಸೆದರೆ ಅದು ಪಕ್ಷಕ್ಕೇ ಹೊಡೆತ ಬೀಳುತ್ತದೆ. ಇದನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು. ಬರುವ ದಿನಗಳಲ್ಲಿ ಇದು ಅರ್ಥವಾಗಲಿದೆ ಎಂದು ಬಿಜೆಪಿ ರಾಜ್ಯಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ಶುಕ್ರವಾರ ಜಿಲ್ಲೆಯ ಇಂಡಿ ತಾಲೂಕಿನ ಹೊರ್ತಿ ಗ್ರಾಮದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಯಡಿಯೂರಪ್ಪನವರು ಎಲ್ಲ ಜನ ವರ್ಗದವರೂ ಒಪ್ಪಿ ಕೊಂಡ ಧೀಮಂತ ನಾಯಕ, ಅವರ ಬಗ್ಗೆ ಅವಹೇಳನೆ ಸಲ್ಲದು ಎಂದರು. 

ಯಡಿಯೂರಪ್ಪನವರ ವಿಚಾರವಾಗಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಸೈಲೆಂಟ್‌ ಆಗಿರುವುದು ಪಕ್ಷದ ಹಿತದೃಷ್ಟಿಯಿಂದ ಒಳ್ಳೆಯ ಬೆಳವಣಿಗೆ. ನಾನಿನ್ನೂ ರಾಜಕೀಯದಲ್ಲಿ ಅಂಬೆಗಾಲು ಇಡುತ್ತಿರುವೆ. ನನಗೆ ವೈಯಕ್ತಿಕವಾಗಿ ಯತ್ನಾಳರ ಬಗ್ಗೆ ಯಾವುದೇ ವಿರೋಧವಿಲ್ಲ. ಅವರು ಹಿರಿಯರು, ಅವರ ಬಗ್ಗೆ ನಾನು ಮಾತನಾಡಲ್ಲ ಎಂದ ಅವರು, ನಮ್ಮ ಹೇಳಿಕೆಗಳು ಪಕ್ಷದ ಬೆಳವಣಿಗೆಗೆ ಪೂರಕವಾಗಿರಬೇಕು ಎಂದರು.

Kalaburagi: ಯುವಕರೇ ಸಂಸ್ಕೃತಿಯ ರಕ್ಷಕರು: ನಟ ಸುಚೇಂದ್ರ ಪ್ರಸಾದ್

ವಾಗ್ದಾಳಿ: ಇದೇ ವೇಳೆ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ ವಿಜಯೇಂದ್ರ, ಇಡೀ ದೇಶದಲ್ಲಿಯೇ ಜನರು ಕಾಂಗ್ರೆಸ್‌ ಪಕ್ಷವನ್ನು ಧಿಕ್ಕರಿಸಿದ್ದಾರೆ. ಭ್ರಷ್ಟಾಚಾರದ ಕುರಿತು ಕಾಂಗ್ರೆಸ್‌ ಮಾತನಾಡುತ್ತಿರುವುದು ಭೂತದ ಬಾಯಲ್ಲಿ ಭಗವದ್ಗೀತೆ ಕೇಳಿದಂತೆ. ಭ್ರಷ್ಟಾಚಾರಕ್ಕೂ ಕಾಂಗ್ರೆಸ್ಸಿಗೂ ಅವಿನಾಭಾವ ಸಂಬಂಧವಿದೆ ಎಂದರು. ಕಾಂಗ್ರೆಸ್ಸಿನಲ್ಲಿ ಡಿ.ಕೆ. ಶಿವಕುಮಾರ್‌ ವಿರುದ್ಧ ಸಿದ್ದರಾಮಯ್ಯ ಎನ್ನುವಂತಾಗಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಲು ಡಿ.ಕೆ.ಶಿವಕುಮಾರ ಕೆಪಿಸಿಸಿ ರಾಜ್ಯಾಧ್ಯಕ್ಷರಾಗಬೇಕಾ? ಎಂದು ಪ್ರಶ್ನಿಸಿದರು.

ವಾಲ್ಮೀಕಿ ಮಹರ್ಷಿ ಚಿಂತನೆ ಪಾಲನೆ ಅಗ​ತ್ಯ: ಶ್ರೇಷ್ಠವಾದ ರಾಮಾಯಣ ಮಹಾಕೃತಿ ರಚಿಸುವ ಮೂಲಕ ದೇಶದ ಸಾಮಾಜಿಕ ಬದುಕಿಗೆ ಭದ್ರ ನೆಲೆಗಟ್ಟು ಕಲ್ಪಿಸಿಕೊಟ್ಟಆದಿಕವಿ ವಾಲ್ಮೀಕಿ ಮಹರ್ಷಿಗಳ ಚಿಂತನೆಯನ್ನು ಜೀವನದಲ್ಲಿ ಅಳವಡಿಸಿಕೊಳ್ಳಲು ಪ್ರಯತ್ನಿಸಬೇಕು. ಆಗ ಉತ್ತಮ ಸಮಾಜ ನಿರ್ಮಾಣವಾಗಲಿದೆ ಎಂದು ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದರು. ಪಟ್ಟಣದ ಅಂಬಾರಗೊಪ್ಪ ಕ್ರಾಸ್‌ ಬಳಿ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟಪಂಗಡಗಳ ಕಲ್ಯಾಣ ಇಲಾಖೆ ವತಿಯಿಂದ ನಿರ್ಮಿಸಲಾಗಿರುವ ವಾಲ್ಮೀಕಿ ಭವನವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಅವ​ರು, ಮಹರ್ಷಿ ವಾಲ್ಮೀಕಿ ಆದರ್ಶ ನುಡಿಗಳು ಇಂದು ಹೆಚ್ಚು ಪ್ರಸ್ತುತವಾಗಿಔಏ ಎಂದ​ರು.

Chamarajanagar: ಕಾಡ್ಗಿಚ್ಚು ತಪ್ಪಿಸಲು ಅರಣ್ಯ ಇಲಾಖೆಯಿಂದ ಫೈರ್‌ಲೈನ್!

ಅಭಿವೃದ್ಧಿಯು ಜಾತಿ, ಮತ, ಧರ್ಮಗಳಿಗೆ ಸೀಮಿತವಾಗಬಾರದು ಎನ್ನುವ ಕಾರಣಕ್ಕೆ ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಎನ್ನುವ ತತ್ವದಲ್ಲಿ ನಂಬಿಕೆ ಇಟ್ಟಿದ್ದೇನೆ. ಅಧಿಕಾರ ಅವಧಿಯಲ್ಲಿ ಅಂಬೇಡ್ಕರ್‌, ವಾಲ್ಮೀಕಿ, ಆದಿಜಾಂಬವ, ಭೋವಿ, ತಾಂಡ, ಉಪ್ಪಾರ, ಮಡಿವಾಳ ಮಾಚಿದೇವ, ಆರ್ಯವೈಶ್ಯ, ಮರಾಠ, ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ ಸ್ಥಾಪಿಸಿ, ನೂರಾರು ಕೋಟಿ ಅನುದಾನ ನೀಡಿದ್ದೇನೆ. ಅದರ ಸದ್ಬಳಕೆ ಮಾಡಿಕೊಂಡು ಸಮಾಜದಲ್ಲಿನ ಬಡವರಿಗೆ ಸೌಲಭ್ಯ ದೊರೆಯುವಂತಾದಾಗ ಮಾತ್ರ ಸಾರ್ಥಕತೆ ದೊರೆಯಲಿದೆ. ಪ್ರತಿಯೊಬ್ಬರೂ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದಕ್ಕೆ ಆದ್ಯತೆ ನೀಡಬೇಕು. ಆಗ ಅವರು ತಮ್ಮ ಕಾಲ ಮೇಲೆ ಭವಿಷ್ಯ ಕಟ್ಟಿಕೊಳ್ಳುತ್ತಾರೆ ಎಂದರು.