ಸರ್ಕಾರ ಆರ್ಥಿಕ ಸಂಕಷ್ಟದಲ್ಲಿ ಸಿಲುಕಿದೆ. ಆಡಳಿತ ಪಕ್ಷದ ಶಾಸಕರೇ ಕ್ಷೇತ್ರದಲ್ಲಿ ತಲೆ ಎತ್ತಿಕೊಂಡು ಓಡಾಡದೇ ಇರುವ ಪರಿಸ್ಥಿತಿ ಬಂದಿದೆ. ಆರ್ಥಿಕ ಪರಿಸ್ಥಿತಿ ಬಗ್ಗೆ ಮುಖ್ಯಮಂತ್ರಿಗಳು ಕೂಡ ಮಾತನಾಡುತ್ತಿಲ್ಲ. ವಿಷಯಾಂತರ ಮಾಡಲು ಆಪರೇಷನ್ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಲೇವಡಿ ಮಾಡಿದ ಬಿಜೆಪಿ ಶಾಸಕ ಬಿ.ವೈವಿಜಯೇಂದ್ರ
ಬೆಂಗಳೂರು(ನ.06): ಆಪರೇಷನ್ ಮಾಡುವುದರಲ್ಲಿ ನಂಬಿಕೆ ಇಲ್ಲ ಎಂದು ಬಿಜೆಪಿ ಶಾಸಕ ಬಿ.ವೈವಿಜಯೇಂದ್ರ ಹೇಳಿದ್ದಾರೆ.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಯಾವುದೇ ಆಪರೇಷನ್ ಮಾಡುತ್ತಿಲ್ಲ. ಕಾಂಗ್ರೆಸ್ ಪಕ್ಷದ ಶಾಸಕರೇ ತಿರುಗಿ ಬೀಳಬಹುದು ಎಂದರು.
ಕಾಂಗ್ರೆಸ್ ಸರ್ಕಾರ 5 ವರ್ಷ ಇರಲು ಸಾಧ್ಯವೇ ಇಲ್ಲ: ಈಶ್ವರಪ್ಪ
ಸರ್ಕಾರ ಆರ್ಥಿಕ ಸಂಕಷ್ಟದಲ್ಲಿ ಸಿಲುಕಿದೆ. ಆಡಳಿತ ಪಕ್ಷದ ಶಾಸಕರೇ ಕ್ಷೇತ್ರದಲ್ಲಿ ತಲೆ ಎತ್ತಿಕೊಂಡು ಓಡಾಡದೇ ಇರುವ ಪರಿಸ್ಥಿತಿ ಬಂದಿದೆ. ಆರ್ಥಿಕ ಪರಿಸ್ಥಿತಿ ಬಗ್ಗೆ ಮುಖ್ಯಮಂತ್ರಿಗಳು ಕೂಡ ಮಾತನಾಡುತ್ತಿಲ್ಲ. ವಿಷಯಾಂತರ ಮಾಡಲು ಆಪರೇಷನ್ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಲೇವಡಿ ಮಾಡಿದರು.
