ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೈದಿಗಳ ಸನ್ನಡತೆ ಆಧಾರದ ಮೇಲೆ ಬಿಡುಗಡೆ, ಆಶಾ ಕಾರ್ಯಕರ್ತೆಯರಿಗೆ ಹೆಚ್ಚುವರಿ 1 ಸಾವಿರ ರು. ಪ್ರೋತ್ಸಾಹಧನ ವಿತರಣೆ ಸೇರಿದಂತೆ ಹಲವು ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ.

ಬೆಂಗಳೂರು (ಮೇ.10): ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೈದಿಗಳ ಸನ್ನಡತೆ ಆಧಾರದ ಮೇಲೆ ಬಿಡುಗಡೆ, ಆಶಾ ಕಾರ್ಯಕರ್ತೆಯರಿಗೆ ಹೆಚ್ಚುವರಿ 1 ಸಾವಿರ ರು. ಪ್ರೋತ್ಸಾಹಧನ ವಿತರಣೆ ಸೇರಿದಂತೆ ಹಲವು ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ.

ಏನೇನು ನಿರ್ಧಾರ?
* ರಾಜ್ಯದ ವಿವಿಧ ಕೇಂದ್ರ ಕಾರಾಗೃಹದಲ್ಲಿರುವ 48 ಜೀವಾವಧಿ ಬಂದಿಗಳನ್ನು ಸನ್ನಡತೆ ಆಧಾರದ ಮೇಲೆ ಬಿಡುಗಡೆಗೆ ತೀರ್ಮಾನ
* ಆಶಾ ಕಾರ್ಯಕರ್ತೆಯರಿಗೆ ಹೆಚ್ಚುವರಿಯಾಗಿ ಒಂದು ಸಾವಿರ ರುಪಾಯಿ ಪ್ರೋತ್ಸಾಹದನ ನೀಡಲು ನಿರ್ಧಾರ
* ಬೆಳಗಾವಿ ಜಿಲ್ಲೆಯ ಬೆನಕನಹಳ್ಳಿ ಗ್ರಾಪಂ, ಹಿಂಡಲಂಗಾ ಗ್ರಾಪಂ ಹಾಗೂ ಹಿರೇಬಾಗೇವಾಡಿ ಗ್ರಾಪಂಗಳು ಪಟ್ಟಣ ಪಂಚಾಯಿತಿಗಳನ್ನಾಗಿ ಮೇಲ್ದರ್ಜೆಗೆ
*ಕೇಂದ್ರದ 15ನೇ ಹಣಕಾಸು ಆಯೋಗದಡಿ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯ ಆಧುನೀಕರಣಕ್ಕೆ 329 ಕೋಟಿ ರು. (ಕೇಂದ್ರದಿಂದ 247.42 ಕೋಟಿ, ರಾಜ್ಯದಿಂದ 82.47 ಕೊಟಿ ರು.) ನೀಡಲು ಒಪ್ಪಿಗೆ. ಮೊದಲ ಹಂತದಲ್ಲಿ 11 ಹೊಸ ಅಗ್ನಿಶಾಮಕ ಠಾಣೆ ಸ್ಥಾಪಿಸಲು, ವಾಹನಗಳು, ರಕ್ಷಣಾ ಉಪಕರಣಕ್ಕಾಗಿ 98.97 ಕೋಟಿ ರು. ಅನುಮೋದನೆ.

ಅಪಾಯಕಾರಿ ಕೆಲಸಕ್ಕೆ ಮಕ್ಕಳ ಬಳಕೆ: ಕೆಮಿಕಲ್‌ ಕಂಪನಿ ವಿರುದ್ಧ ದೂರು ದಾಖಲು

- ರಾಮನಗರ ಜಿಲ್ಲೆಯ ಗನಾಳು ಬಳಿಯ ಅರ್ಕಾವತಿ ನದಿಯಿಂದ ನೀರು ಎತ್ತಿ ರಾಮನಗರ ಮತ್ತು ಕನಕಪುರ ತಾಲೂಕಿನ 46 ಕೆರೆಗಳನ್ನು ತುಂಬಿಸುವ 110 ಕೋಟಿ ರು. ಯೋಜನೆಗೆ ಅನುಮೋದನೆ
- ಚನ್ನಪಟ್ಟಣ ತಾಲೂಕಿನಲ್ಲಿ ಸರಗೂರಿನಿಂದ ಹೊಸಪುರಕ್ಕೆ ಸೇತುವೆ ನಿರ್ಮಾಣ ಕಾಮಗಾರಿಗೆ 15 ಕೋಟಿ ರು. ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಒಪ್ಪಿಗೆ
- ಮಾಗಡಿ, ರಾಮನಗರ, ಕುಣಿಗಲ್‌ ತಾಲೂಕುಗಳಿಗೆ ನೀರು ಪೂರೈಸಲು 90 ಕೋಟಿ ರು. ಮೊತ್ತದ ಸತ್ತೇಗಾಲ ಕುಡಿಯುವ ನೀರು ಯೋಜನೆಗೆ ಅನುಮೋದನೆ.
- ಚಿಕ್ಕಬಳ್ಳಾಪುರ ಜಿಲ್ಲಾ ಕಾಂಗ್ರೆಸ್‌ ಭವನದ ಕಟ್ಟಡ ನಿರ್ಮಾಣ ಉದ್ದೇಶಕ್ಕಾಗಿ ಅಣಕನೂರು ಗ್ರಾಮದ ಅನುಮೋದಿತ ಬಡಾವಣೆಯಲ್ಲಿ 3404 ಚ.ಮೀ. ವಿಸ್ತೀರ್ಣದ ನಿವೇಶನವನ್ನು ಉಚಿತವಾಗಿ ಮಂಜೂರು ಮಾಡಲು ನಿರ್ಣಯ.

ನೈಸ್‌ ಎಕ್ಸ್‌ಪ್ರೆಸ್‌ ವೇ ಅಗತ್ಯವಿದೆಯೇ: ಬೆಂಗಳೂರು-ಮೈಸೂರು ನಡುವೆ ನೈಸ್‌ ಕಂಪನಿಯಿಂದ ನಿರ್ಮಿಸಲು ಉದ್ದೇಶಿಸಿದ್ದ 111 ಕಿ.ಮೀ. ಎಕ್ಸ್‌ಪ್ರೆಸ್‌ ವೇ ರಸ್ತೆ ನಿರ್ಮಾಣ ಅಗತ್ಯವಿದೆಯೇ? ಎಂಬ ಬಗ್ಗೆ ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ಅಧ್ಯಕ್ಷತೆಯ ಸಚಿವ ಸಂಪುಟ ಉಪಮಿತಿಯು ಶುಕ್ರವಾರ ಗಂಭೀರವಾಗಿ ಚರ್ಚೆ ನಡೆಸಿದೆ.

ನನ್ನ ಜನ್ಮದಿನಕ್ಕಿಂತ ಯೋಧರ ಹೋರಾಟ ಮುಖ್ಯ: ಡಿಸಿಎಂ ಡಿಕೆಶಿ ಮನವಿ ಮಾಡಿದ್ದೇನು?

ಈಗಾಗಲೇ ಮೈಸೂರು-ಬೆಂಗಳೂರು ನಡುವೆ 6 ಪಥದ ಮುಖ್ಯ ರಸ್ತೆ (ಸರ್ವಿಸ್‌ ರಸ್ತೆ ಸೇರಿ ದಶಪಥ) ನಿರ್ಮಾಣ ಆಗಿರುವ ಹಿನ್ನೆಲೆಯಲ್ಲಿ ನೈಸ್‌ ಎಕ್ಸ್‌ಪ್ರೆಸ್‌ ವೇ ನಿರ್ಮಿಸುವ ಅಗತ್ಯವೇನಿದೆ? ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ಅವರು ಸಭೆಯಲ್ಲಿ ಪ್ರಶ್ನೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ನೈಸ್‌ ಸಂಸ್ಥೆ ಮೂಲಕ ಬೆಂಗಳೂರು-ಮೈಸೂರು ನಡುವೆ ಎಕ್ಸ್‌ಪ್ರೆಸ್‌ ವೇ ರಸ್ತೆ ಸೇರಿದಂತೆ ವಿವಿಧ ಯೋಜನೆ ನಿರ್ಮಿಸುವ ಪ್ರಸ್ತಾವನೆ ಒಳಗೊಂಡಿರುವ ‘ಬೆಂಗಳೂರು-ಮೈಸೂರು ಮೂಲಸೌಲಭ್ಯ ಕಾರಿಡಾರ್‌ ಯೋಜನೆ’ (ಬಿಎಂಐಸಿಪಿ) ಪ್ರಗತಿ ಪರಿಶೀಲನೆ ನಡೆಸಿ ಯೋಜನೆ ಮುಂದುವರಿಸಬೇಕೆ? ಅಥವಾ ಬೇಡವೇ? ಎಂಬ ಬಗ್ಗೆ ಶಿಫಾರಸು ಮಾಡಲು ಒಟ್ಟು ಏಳು ಮಂದಿ ಸದಸ್ಯರ ಸಚಿವ ಸಂಪುಟ ಉಪಸಮಿತಿ ರಚನೆ ಮಾಡಲಾಗಿದೆ.