Asianet Suvarna News Asianet Suvarna News

ಅಸ್ತ್ರಕ್ಕೆ ಪ್ರತ್ಯಸ್ತ್ರ: ಕುಮಾರಸ್ವಾಮಿ ಸೇರಿ ವಿಪಕ್ಷ ನಾಯಕರ ಪ್ರಾಸಿಕ್ಯೂಷನ್‌ಗೆ ಸಂಪುಟ ಒತ್ತಡ

ಸಂವಿಧಾನದ 163 ವಿಧಿ ಅನ್ವಯ ರಾಜ್ಯಪಾಲರಿಗೆ ನೆರವು ಮತ್ತು ಸಲಹೆ ನೀಡಲು ಸಚಿವ ಸಂಪುಟಕ್ಕೆ ಅವಕಾಶವಿದೆ. ಅದರಂತೆ ಈ 4 ಪ್ರಕರಣಗಳಿಗೆ ಸಂಬಂಧಿಸಿದಂತೆ ಸಲಹೆಗಳನ್ನು ರಾಜ್ಯಪಾಲರಿಗೆ ಸಲ್ಲಿಸಲಾಗುವುದು. ಭ್ರಷ್ಟಾಚಾರ ತಡೆ ಕಾಯ್ದೆ 1988ರ ಅಡಿಯಲ್ಲಿ ತನಿಖಾ ಸಂಸ್ಥೆಗಳು ಸಲ್ಲಿಸಿರುವ ಹಲವು ಅನುಮೋದನಾ ಅರ್ಜಿಗಳು ರಾಜ್ಯಪಾಲರ ಬಳಿ ಬಾಕಿ ಉಳಿದಿದೆ. 

Cabinet demand for prosecution of opposition leaders including HD Kumaraswamy grg
Author
First Published Aug 23, 2024, 10:29 AM IST | Last Updated Aug 23, 2024, 10:29 AM IST

ಬೆಂಗಳೂರು(ಆ.23): ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಮಾಜಿ ಸಚಿವರಾದ ಜನಾರ್ದನ ರೆಡ್ಡಿ, ಶಶಿಕಲಾ ಜೊಲ್ಲೆ ಹಾಗೂ ಮುರುಗೇಶ್ ನಿರಾಣಿ ವಿರುದ್ದ ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿ ಲೋಕಾಯುಕ್ತ ಪೊಲೀಸರು ಸಲ್ಲಿಸಿರುವ ಮನವಿಗಳನ್ನು ಶೀಘ್ರವಾಗಿ ಇತ್ಯರ್ಥಪಡಿಸುವಂತೆ ರಾಜ್ಯಪಾಲರಿಗೆ ಸಲಹೆ ನೀಡುವ ತೀರ್ಮಾನವನ್ನು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೆಗೆದು ಕೊಳ್ಳಲಾಗಿದೆ. 

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಕತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯು, ಪ್ರತಿಪಕ್ಷಗಳ ನಾಯಕರ ಮೇಲೆ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ಬಾಕಿ ಇರುವ ಅರ್ಜಿಗಳ ಇತ್ಯರ್ಥಕ್ಕೆ ನೆರವು ಮತ್ತು ಸಲಹೆ ನೀಡಲು ನಿರ್ಧರಿಸಿದೆ. ತನ್ಮೂಲಕ ಪ್ರಾಸಿಕ್ಯೂಷನ್‌ಗೆ ಒತ್ತಡ ಹೇರುವ ಪ್ರಯತ್ನ ಮಾಡಿದೆ. ಈ ಬಗ್ಗೆ ಕಾನೂನು ಸಚಿವ ಎಚ್. ಕೆ.ಪಾಟೀಲ್ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು.

ಗೌರ್ನರ್‌ರಿಂದ ರಾಜ್ಯದಲ್ಲಿ ಪ್ರಜಾಪ್ರಭುತ್ವ ಹಾಳು: ಸಚಿವ ಎನ್.ಚಲುವರಾಯಸ್ವಾಮಿ

ರಾಜ್ಯಪಾಲರ ಬಳಿ ಕುಮಾರಸ್ವಾಮಿ, ಜೊಲ್ಲೆ, ರೆಡ್ಡಿ ಮತ್ತು ನಿರಾಣಿ ಅವರ ಕುರಿತಾಗಿ ಅನುಮೋದನೆಗಾಗಿ ಬಾಕಿಯಿರುವ ವಿಷಯಗಳಲ್ಲಿ ಶೀಘ್ರ ತೀರ್ಮಾನ ಕೈಗೊಳ್ಳಲು ಹಾಗೂ ನ್ಯಾಯದ ಪ್ರಕ್ರಿಯೆಯನ್ನು ಸುಗಮಗೊಳಿಸಲು ರಾಜ್ಯಪಾಲರಿಗೆ ಸಂವಿಧಾನದ 163ನೇ ವಿಧಿಯನಯ ನೆರವು ಮತ್ತು ಸಲಹೆ ನೀಡಲು ಸಂಪುಟ ತನ್ನ ಅನುಮೋದನೆ ನೀಡಿದೆ' ಎಂದು ಹೇಳಿದರು. 

ಈ ಅರ್ಜಿಗಳ ತನಿಖೆ ಬಳಿಕ ಕೆಲವು ಪ್ರಕರಣಗಳಲ್ಲಿ ಆರೋಪ ಪಟ್ಟಿಗಳನ್ನು ಸಲ್ಲಿಸಲಾಗಿದ್ದು, ಭ್ರಷ್ಟಾಚಾರ ತಡೆ ಕಾಸಂವಿಧಾನದ 163 ವಿಧಿ ಅನ್ವಯ ರಾಜ್ಯಪಾಲರಿಗೆ ನೆರವು ಮತ್ತು ಸಲಹೆ ನೀಡಲು ಸಚಿವ ಸಂಪುಟಕ್ಕೆ ಅವಕಾಶವಿದೆ. ಅದರಂತೆ ಈ 4 ಪ್ರಕರಣಗಳಿಗೆ ಸಂಬಂಧಿಸಿದಂತೆ ಸಲಹೆಗಳನ್ನು ರಾಜ್ಯಪಾಲರಿಗೆ ಸಲ್ಲಿಸಲಾಗುವುದು. ಭ್ರಷ್ಟಾಚಾರ ತಡೆ ಕಾಯ್ದೆ 1988ರ ಅಡಿಯಲ್ಲಿ ತನಿಖಾ ಸಂಸ್ಥೆಗಳು ಸಲ್ಲಿಸಿರುವ ಹಲವು ಅನುಮೋದನಾ ಅರ್ಜಿಗಳು ರಾಜ್ಯಪಾಲರ ಬಳಿ ಬಾಕಿ ಉಳಿದಿದೆ. ಯ್ದೆ (ಪಿಸಿ ಆಕ್ಟ್) ಸೆಕ್ಷನ್ 17-ಎ ಹಾಗೂ ಭಾರತೀಯ ನಾಗರಿಕ ದಂಡ ಸಂಹಿತೆ 218ರ ಸೇರಿದಂತೆ ವಿವಿಧ ಕಾಯ್ದೆಗಳ ಅಡಿಯಲ್ಲಿ ಅನುಮೋದನೆಗಾಗಿ ಲೋಕಾಯುಕ್ತ ಪೊಲೀಸರು ಅನುಮೋದನೆ ಕೋರಿದ್ದಾರೆ ಎಂದು ಪಾಟೀಲ್ ತಿಳಿಸಿದರು. 

ಈ ಪೈಕಿ ಕುಮಾರಸ್ವಾಮಿ ಹಾಗೂ ರೆಡ್ಡಿ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಸಿದ್ದಪಡಿಸಿದ್ದಾರೆ. ಇನ್ನು ಶಶಿಕಲಾ ಜೊಲ್ಲೆ ಹಾಗೂ ಮುರುಗೇಶ ನಿರಾಣಿ ಪ್ರಕರಣದಲ್ಲಿ ತನಿಖೆ ನಡೆಸಿ ತನಿಖೆಯಲ್ಲಿ ಆರೋಪ ಸಾಬೀತಾಗಿದ್ದು, ಅದರ ಆಧಾರದ ಮೇಲೆ ಪ್ರಾಸಿಕ್ಯೂಷನ್‌ ಗೆ ಅನುಮೋದನೆ ಕೇಳಿದ್ದಾರೆ ಎಂದು ಹೇಳಿದರು. ರಾಜ್ಯಪಾಲರು ಸಚಿವ ಸಂಪುಟದ ಸಲಹೆಯನ್ನು ಸ್ವೀಕರಿಸಲು ಬಾಧ್ಯಸ್ಥರಾಗಿದ್ದು, ಈ ವಿಷಯದಲ್ಲಿ ರಾಜ್ಯಪಾಲರು ತಮ್ಮ ವಿವೇಚನೆಯನ್ನು ನ್ಯಾಯ ಯುತವಾಗಿ ಬಳಸಿಕೊಳ್ಳುವ ವಿಶ್ವಾಸವಿದೆ ಎಂದು ಹೇಳಿದರು. 

ಎಚ್‌ಡಿಕೆ ವಿರುದ್ಧ ಪ್ರಾಸಿಕ್ಯೂಷನ್‌ಗೆ ಗೌರ್ನರ್ ಸಮ್ಮತಿಸದಿದ್ರೆ ಕೋರ್ಟ್‌ಗೆ: ಪರಂ

ದ್ವೇಷದ ಕ್ರಮ ಅಲ್ಲ: 

ಇದು ಸಿದ್ದರಾಮಯ್ಯ ವಿರುದ್ದದ ಪ್ರಾಸಿಕ್ಯೂಷನ್‌ನ ದ್ವೇಷದ ಕ್ರಮವೇ ಎಂಬ ಪ್ರಶ್ನೆಗೆ, 'ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧಖಾಸಗಿ ವ್ಯಕ್ತಿ ರಾಜ್ಯಪಾಲರಿಗೆ ದೂರು ನೀಡಿದ್ದು, ತರಾತುರಿಯಲ್ಲಿ ಸಂಜೆಯೊಳಗಾಗಿ ತೋಕಾಸ್ ನೋಟಿಸ್ ನೀಡಲಾಗಿದೆ. ಆದರೆ ಈ ನಾಲ್ಕು ಪ್ರಕರಣಗಳು ಭಿನ್ನವಾಗಿದ್ದು, ತನಿಖೆಸೇರಿದಂತೆ ಎಲ್ಲಾ ಪ್ರಕ್ರಿಯೆಗಳು ಮುಗಿದರೂ ರಾಜ್ಯಪಾಲರು ಯಾವುದೇ ಕ್ರಮ ಕೈಗೊಂಡಿಲ್ಲ. ಆದ್ದರಿಂದ ಸಾರ್ವಜನಿಕರ ದೃಷ್ಟಿಯಲ್ಲಿ ರಾಜ್ಯಪಾಲರ ಕಚೇರಿ ಬಗ್ಗೆ ತಪ್ಪು ಭಾವನೆ ಬರಬಾರದು ಮತ್ತು ಯಾವುದೇ ಗೊಂದಲ ಆಗಬಾರದು ಎಂದು ಸಚಿವ ಸಂಪುಟ ನೆರವು ಮತ್ತು ಸಲಹೆ ನೀಡಲು ನಿರ್ಧರಿಸಿದೆ' ಎಂದು ಸಮರ್ಥಿಸಿಕೊಂಡರು.

ಯಾರ ವಿರುದ್ಧ ಏನೇನು ಪ್ರಕರಣ? 

ಎಚ್‌ಡಿಕೆ ವಿರುದ್ಧ ಸಾಯಿ ವೆಂಕಟೇಶ್ವರ ಮಿನರಲ್ಸ್ ಎಂಬ ಬೋಗಸ್ ಸಂಸ್ಥೆಗೆ 550 ಜಾಗ ನೀಡಿದ ಆರೋಪ, ಮಾಜಿ ಸಚಿವ ಜನಾರ್ದನ ರೆಡ್ಡಿ ಕುಟುಂಬ ವಿರುದ್ದ ಆದಾಯಕ್ಕಿಂತ ಶೇ.25.27ರಷ್ಟು ಆಸ್ತಿ ಸಂಗ್ರಹದ ಆರೋಪ, ಮಾಜಿ ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಮೊಟ್ಟೆ ಆಕ್ರಮ ಟೆಂಡ‌ರ್ ಆರೋಪದ ಪ್ರಕರಣ ಮತ್ತು ಮಾಜಿ ಸಚಿವ ಮುರುಗೇಶ್ ನಿರಾಣಿ ವಿರುದ್ಧ 3-ಡಿ ವಿಡಿಯೋ ಹಗರಣದ ಆರೋಪಗಳು. 

Latest Videos
Follow Us:
Download App:
  • android
  • ios