ಮೆಡಿಕಲ್ ಕಾಲೇಜು, ಪರಿಷ್ಕೃತ ಅಂದಾಜಿಗೆ ಕ್ಯಾಬಿನೆಟ್ ಅಸ್ತು: ಸಚಿವ ಶಿವಾನಂದ ಪಾಟೀಲ್
ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವಸತಿ ನಿಲಯ ನಿರ್ಮಾಣ ಯೋಜನೆಯ ಪರಿಷ್ಕೃತ ಅಂದಾಜು 499 ಕೋಟಿ ರೂ. ಮೊತ್ತಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಲು ಸಚಿವ ಸಂಪುಟ ಸಮ್ಮತಿ ನೀಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಎಸ್.ಪಾಟೀಲ್ ತಿಳಿಸಿದ್ದಾರೆ.
ಹಾವೇರಿ (ಫೆ.04): ದೇವಗಿರಿ ಸಮೀಪ ಹಾವೇರಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಆವರಣದಲ್ಲಿ ನಿರ್ಮಾಣ ಹಂತದಲ್ಲಿರುವ ಹೊಸ ವೈದ್ಯಕೀಯ ಕಾಲೇಜು ಬಾಲಕರ ಮತ್ತು ಬಾಲಕಿಯರ ಹಾಸ್ಟೆಲ್, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವಸತಿ ನಿಲಯ ನಿರ್ಮಾಣ ಯೋಜನೆಯ ಪರಿಷ್ಕೃತ ಅಂದಾಜು 499 ಕೋಟಿ ರೂ. ಮೊತ್ತಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಲು ಸಚಿವ ಸಂಪುಟ ಸಮ್ಮತಿ ನೀಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಎಸ್.ಪಾಟೀಲ್ ತಿಳಿಸಿದ್ದಾರೆ.
ಆಡಳಿತ ಭವನ ಎ ಮತ್ತು ಬಿ ಬ್ಲಾಕ್‌ಗಳು ಪೂಣಗೊಂಡಿವೆ. ಕಚೇರಿ ಮತ್ತು ಅನಾಟಮಿ ವಿಭಾಗಗಳನ್ನು ಈಗಾಗಲೇ ನೂತನ ಕಟ್ಟಡಕ್ಕೆ ಸ್ಥಳಾಂತರ ಮಾಡಲಾಗಿದೆ. ಡೀನ್ ಅವರು ನೂತನ ಕಟ್ಟಡದಲ್ಲೇ ಕಾಯನಿವಹಿಸುತ್ತಿದ್ದಾರೆ. ಮೊದಲ ಪದವಿ ತರಗತಿಗಳು ಹೊಸ ಕಟ್ಟಡದಲ್ಲಿ ನಡೆಯುತ್ತಿವೆ. ಎರಡನೇ ವರ್ಷದ ಪದವಿ ತರಗತಿಗಳೂ ಶೀಘ್ರದಲ್ಲಿ ನೂತನ ಕಟ್ಟಡದಲ್ಲಿ ಆರಂಭವಾಗಲಿವೆ ಎಂದು ತಿಳಿಸಿದ್ದಾರೆ. ಹಾಸ್ಟೆಲ್ ಕಟ್ಟಡಗಳ ಕಾಮಗಾರಿ ಪ್ರತಿಶತ ಶೇ.೯೫ರಷ್ಟು, ಲೆಕ್ಟರ್ ಹಾಲ್, ಸಿಬ್ಬಂದಿ, ನರ್ಸಿಂಗ್ ಮತ್ತು ಡಿ ಗ್ರೂಪ್ ನೌಕರರ ವಸತಿನಿಲಯ ಕಾಮಗಾರಿ ಪ್ರತಿಶತ ಶೇ.೯೦ರಷ್ಟು ಪೂರ್ಣಗೊಂಡಿವೆ. ಆವರಣದಲ್ಲಿ ಲ್ಯಾಂಡ್ ಸ್ಕೇಪಿಂಗ್, ಪ್ಲಾಂಟೇಷನ್ ಮತ್ತು ಕಾಂಪೌಂಡ್ ನಿರ್ಮಾಣ ಪ್ರಗತಿಯಲ್ಲಿದೆ ಎಂದು ಅವರು ತಿಳಿಸಿದ್ದಾರೆ.
ಅಡ್ವಾನಿಯವರಿಗೆ ಭಾರತ ರತ್ನ ಕೊಟ್ಟಿದ್ದರಲ್ಲಿ ತಪ್ಪಿಲ್ಲ: ಸಚಿವ ಆರ್.ಬಿ.ತಿಮ್ಮಾಪುರ
ಜಿಲ್ಲೆಯ ಎಲ್ಲ ನರ್ಸಿಂಗ್ ಕಾಲೇಜುಗಳ ಪರೀಕ್ಷೆಗಳು ಮತ್ತು ಮೊದಲ ಎಂಬಿಬಿಎಸ್ ಪದವಿ ಪರೀಕ್ಷೆಗಳನ್ನು ಯಾವುದೇ ಸಮಸ್ಯೆ ಇಲ್ಲದೆ ನೂತನ ಕಟ್ಟಡದಲ್ಲಿ ಮಾಡಲಾಗಿದೆ. ಆಡಳಿತ ಭವನದವರೆಗೆ ಸಿಮೆಂಟ್ ರಸ್ತೆ ನಿಮಾಣ, ರಸ್ತೆ ವಿಭಜಕ ಮತ್ತು ವಿದ್ಯುದ್ದೀಪಗಳ ಕಾಮಗಾರಿ ಪೂರ್ಣಗೊಂಡಿದೆ. ಮುಖ್ಯ ರಸ್ತೆಯಿಂದ ಕಾಲೇಜು ಆವರಣದೊಳಗೆ ಎಲ್ಲಕಡೆ ಕಾಂಕ್ರೀಟ್ ರಸ್ತೆಗಳ ನಿರ್ಮಾಣ ಪೂರ್ಣಗೊಂಡಿದೆ. ಎಲ್ಲ ವಿಭಾಗಗಳನ್ನು ಶೀಘ್ರವಾಗಿ ನೂತನ ಕಟ್ಟಡಕ್ಕೆ ಸ್ಥಳಾಂತರ ಮಾಡಲು ಎಲ್ಲ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ನಿರ್ದೇಶನ ನೀಡಲಾಗಿದೆ ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.