ಲೋಕಸಭಾ ಚುನಾವಣೆ 2024: ಮೂರು ಪಕ್ಷಗಳಲ್ಲಿ ಗೆಲುವಿನ ಲೆಕ್ಕಾಚಾರ..!
ಕಲಬುರಗಿ, ಬೀದರ್, ಚಿಕ್ಕೋಡಿ, ಕೊಪ್ಪಳ, ಬಳ್ಳಾರಿ, ದಾವಣಗೆರೆ ಮತ್ತು ರಾಯಚೂರಿನಲ್ಲಿ ಕಾಂಗ್ರೆಸ್ ಗೆಲ್ಲುವ ಸಾಧ್ಯತೆ ಹೆಚ್ಚಿದೆ. ದಕ್ಷಿಣ ಕನ್ನಡ, ಮೈಸೂರು, ಬೆಂ. ಉತ್ತರ, ಉಡುಪಿ-ಚಿಕ್ಕಮಗಳೂರು, ಬಾಗಲಕೋಟೆ, ಹಾವೇರಿ, ಉತ್ತರ ಕನ್ನಡ, ಧಾರವಾಡ, ಶಿವಮೊಗ್ಗ, ವಿಜಯಪುರ ಕ್ಷೇತ್ರಗಳಲ್ಲಿ ಹಿನ್ನಡೆಯಾಗುವ ಅನುಮಾನವೂ ಕಾಂಗ್ರೆಸ್ ಪಾಳೆಯದಲ್ಲಿದೆ.
ಬೆಂಗಳೂರು(ಮೇ.10): ಲೋಕಸಭೆ ಬೆನ್ನಲ್ಲೇ ಚುನಾವಣೆ ಆಡಳಿತಾರೂಡ ಕಾಂಗ್ರೆಸ್ ಪಾಳೆಯದಲ್ಲಿ ಗೆಲುವಿನ ಲೆಕ್ಕಾಚಾರ ಆರಂಭ ವಾಗಿದ್ದು, 28 ಕ್ಷೇತ್ರಗಳ ಪೈಕಿ ಕನಿಷ್ಠ 9ರಲ್ಲಿ ಗೆಲುವು ಖಚಿತ ಎಂಬ ವಿಶ್ವಾಸ ಪಕ್ಷದ ನಾಯಕ ರಲ್ಲಿ ಕಂಡು ಬರುತ್ತಿದೆ. 4 ಕ್ಷೇತ್ರಗಳಲ್ಲಿ ಪಕ್ಷ ಗೆಲುವಿನ ತುದಿಯಲ್ಲಿದ್ದರೆ, ಇನ್ನೆರಡು ಕ್ಷೇತ್ರಗಳಲ್ಲಿ 50-50 ಅವಕಾಶವಿರುವುದಾಗಿ ಕಾಂಗ್ರೆಸ್ ಮೂಲಗಳು ತಿಳಿಸಿವೆ.
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಫಲ ನೀಡಿದರೆ 16ರಿಂದ 17 ಸ್ಥಾನ ಗೆಲ್ಲುವ ಸಾಧ್ಯತೆಯೂ ಇದೆ ಎಂಬ ಮಾತು ಕಾಂಗ್ರೆಸ್ಸಿಗರಿಂದ ಕೇಳಿಬರುತ್ತಿದೆ. ಮೋದಿ ವರ್ಚಸ್ಸಿನ ಎದುರು ರಾಜ್ಯದ ಗ್ಯಾರಂಟಿ ನಿರೀಕ್ಷೆಗಿಂತ ಕಡಿಮೆ ಕೆಲಸ ಮಾಡಿದರೂ 10-12 ಸ್ಥಾನಗಳನ್ನು ಗೆಲ್ಲುವು ದರಲ್ಲಿ ಅನುಮಾನವಿಲ್ಲ ಎಂಬ ಚರ್ಚೆ ಪಕ್ಷದಲ್ಲಿದೆ.
ಮುಗಿದ ಲೋಕಸಭೆ ಚುನಾವಣೆ: ಗಿಜುಗುಡುತ್ತಿದ್ದ ಕಾರ್ಯಾಲಯಗಳು ಇದೀಗ ಭಣಭಣ..!
ಒಟ್ಟಾರೆ ಮೊದಲ ಹಂತದ (ದಕ್ಷಿಣ ಕರ್ನಾಟಕ) ಚುನಾವಣೆಗಿಂತ 2ನೇ ಹಂತದ ಚುನಾವಣೆಯಲ್ಲಿ (ಉತ್ತರ ಕರ್ನಾಟಕ) ಹೆಚ್ಚಿನ ಸ್ಥಾನ ಲಭ್ಯವಾಗುವ ಸಾಧ್ಯತೆಯಿದೆ. ಉ. ಕರ್ನಾಟಕದಲ್ಲಿ ಗ್ಯಾರಂಟಿ ಪರಿಣಾಮ ತೀವ್ರ ಪ್ರಮಾಣದಲ್ಲಿ ಆಗಿದೆ ಎಂದು ಮೂಲಗಳು ತಿಳಿಸಿವೆ. ಹಾಸನದಲ್ಲಿ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ಲೈಂಗಿಕ ಹಗರಣ ತೀವ್ರ ಪರಿಣಾಮ ಬೀರಿದೆ. ಜತೆಗೆ ಕಾಂಗ್ರೆಸ್ ಶ್ರೇಯಸ್ ಪಟೇಲ್ ಮೂಲಕ ಉತ್ತಮ ಅಭ್ಯರ್ಥಿಯನ್ನು ಕಣಕ್ಕಿಳಿಸಿತ್ತು. ಹೀಗಾಗಿ ಗೆಲ್ಲುವ ಸಾಧ್ಯತೆ ಹೆಚ್ಚಿದೆ ಎಂಬ ಅಭಿಪ್ರಾಯ ಪಕ್ಷದಲ್ಲಿದೆ.
ಇನ್ನು ಚಿತ್ರದುರ್ಗ ಕಾಂಗ್ರೆಸ್ ಮತಗಳು ಹೆಚ್ಚಾಗಿರುವ ಜತೆಗೆ ಗ್ಯಾರಂಟಿ ಜತೆಯಾಗಿ ಸುಲಭವಾಗಿ ಗೆಲ್ಲುವ ಲೆಕ್ಕಾಚಾರದಲ್ಲಿ ಕಾಂಗ್ರೆಸ್ ಇದೆ. ಚಾಮರಾಜನಗರದಲ್ಲೂ ಇದೇ ಸ್ಥಿತಿಯಿದೆ. ಉಳಿದಂತೆ ಬೆಂಗಳೂರು ಗ್ರಾಮಾಂತರ, ಮಂಡ್ಯ, ಬೆಂಗಳೂರು ಕೇಂದ್ರದಲ್ಲಿ ಕಾಂಗ್ರೆಸ್ ಗೆಲುವಿನ ತುದಿಯಲ್ಲಿ ನಿಂತಿದೆ.
ಬೆಂ.ಗ್ರಾಮಾಂತರದಲ್ಲಿ ಡಾ.ಸಿ.ಎನ್. ಮಂಜುನಾಥ್ ಬಿಜೆಪಿ ಯಿಂದ ಸ್ಪರ್ಧಿಸಿದ್ದರೂ ಡಿ.ಕೆ.ಸುರೇಶ್ ತಳಮಟ್ಟದಲ್ಲಿ ತುಂಬಾ ಕೆಲಸ ಮಾಡಿದ್ದಾರೆ. ಜತೆಗೆ ಜನರಿಗೆ ಸಿಗುವ ನಾಯಕ ಎಂಬ ಹೆಸರಿದೆ. ಮಂಡ್ಯದಲ್ಲಿ ಸ್ಟಾರ್ ಚಂದ್ರು (ವೆಂಕಟರಮಣೇಗೌಡ) ಯಾವುದಕ್ಕೂ ಕೊರತೆಯಿಲ್ಲದಂತೆ ಚುನಾವಣೆ ಮಾಡಿದ್ದಾರೆ. ಜೆಡಿಎಸ್‌ನಿಂದೆ ಕುಮಾರಸ್ವಾಮಿ ನಿಂತಿದ್ದರೂ ಕೊನೆ ಕ್ಷಣದವರೆಗೆ ಎಲ್ಲಾ ರೀತಿಯಲ್ಲೂ ಗೆಲ್ಲುವ ಸಲುವಾಗಿ ಕೃಷಿ ಮಾಡಿದ್ದಾರೆ. ಕುಮಾರಸ್ವಾಮಿಯಿಂದ ಒಕ್ಕಲಿಗರು ಶೇ.60 ರಿಂದ 70 ರಷ್ಟು ಜೆಡಿಎಸ್‌ಗೆ ಮತ ಹಾಕಿದರೂ ಹಿಂದುಳಿದ ವರ್ಗ, ಲಿಂಗಾಯತ ಹಾಗೂ ಅಲ್ಪಸಂಖ್ಯಾತರು ಕಾಂಗ್ರೆಸ್ ಪರ ನಿಂತಿದ್ದಾರೆ ಎಂಬ ವಿಶ್ವಾಸ ಕಾಂಗ್ರೆಸ್ ನಾಯಕರದ್ದು.
ಇನ್ನು ಬೆಂಗಳೂರು ದಕ್ಷಿಣದಲ್ಲಿ ಸಚಿವ ರಾಮಲಿಂಗಾರೆಡ್ಡಿ ಶಕ್ತಿ. ಮೀರಿ ಕೆಲಸ ಮಾಡಿ ಕಾಂಗ್ರೆ ಸ್ತನ್ನು ಗೆಲುವಿನ: ಸನಿಹ ತಂದಿದ್ದಾರೆ. ಇನ್ನು ಕೋಲಾರ ಮತ್ತು ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್ ಗಟ್ಟಿ ಪೈಪೋಟಿ ನೀಡಿದೆ ಎಂದ ಪಕ್ಷದ ಮೂಲಗಳು ತಿಳಿಸಿವೆ.
ಉತ್ತರ ಕರ್ನಾಟಕದಲ್ಲಿ ಉತ್ತಮ ಸ್ಥಾನ ಗಳಿಕೆ:
ಕಲಬುರಗಿ, ಬೀದರ್, ಚಿಕ್ಕೋಡಿ, ಕೊಪ್ಪಳ, ಬಳ್ಳಾರಿ, ದಾವಣಗೆರೆ ಮತ್ತು ರಾಯಚೂರಿನಲ್ಲಿ ಕಾಂಗ್ರೆಸ್ ಗೆಲ್ಲುವ ಸಾಧ್ಯತೆ ಹೆಚ್ಚಿದೆ. ದಕ್ಷಿಣ ಕನ್ನಡ, ಮೈಸೂರು, ಬೆಂ. ಉತ್ತರ, ಉಡುಪಿ-ಚಿಕ್ಕಮಗಳೂರು, ಬಾಗಲಕೋಟೆ, ಹಾವೇರಿ, ಉತ್ತರ ಕನ್ನಡ, ಧಾರವಾಡ, ಶಿವಮೊಗ್ಗ, ವಿಜಯಪುರ ಕ್ಷೇತ್ರಗಳಲ್ಲಿ ಹಿನ್ನಡೆಯಾಗುವ ಅನುಮಾನವೂ ಕಾಂಗ್ರೆಸ್ ಪಾಳೆಯದಲ್ಲಿದೆ.
ಬಿಜೆಪಿಗೆ 18ರಿಂದ 20 ಸ್ಥಾನ ನಿರೀಕ್ಷೆ
ಬೆಂಗಳೂರು: ಬಿಜೆಪಿಯಲ್ಲಿ ಸೋಲು- ಗೆಲುವಿನ ಲೆಕ್ಕಾಚಾರ ಸಾಗಿದ್ದು, ಜೆಡಿಎಸ್ ಜತೆಗೂಡಿ ಕನಿಷ್ಠ 18ರಿಂದ 20 ಸ್ಥಾನ ಗೆಲ್ಲುವ ನಿರೀಕ್ಷೆ ಹೊಂದಿದೆ. 28 ಕ್ಷೇತ್ರಗಳ ಪೈಕಿ ಬಿಜೆಪಿ 25ರಲ್ಲಿ ಸ್ಪರ್ಧಿಸಿದ್ದು, 3 ಸ್ಥಾನ ಜೆಡಿಎಸ್‌ಗೆ ಬಿಟ್ಟುಕೊಟ್ಟಿದೆ. ಮೋದಿ ನಾಯಕತ್ವ ಇರುವುದರಿಂದ ಹೆಚ್ಚು ಸ್ಥಾನ ಗೆಲ್ಲುವ ವಿಶ್ವಾಸವನ್ನೇನೊ ನೊ ಬಿಜೆಪಿಗರು ಹೊಂದಿದ್ದಾರೆ. ಆದರೂ ಕಾಂಗ್ರೆಸ್‌ನ ಗ್ಯಾರಂಟಿ ಯೋ ಜನೆಗಳ ಬಗ್ಗೆ ಒಳಗೊಳಗೆ ಭಯ ಇದ್ದೇ ಇದೆ.
ಈ ಯೋಜನೆಗಳು ತಳಹಂತದಲ್ಲಿ ಹೇಗೆ ಕೆಲಸ ಮಾಡಿದೆಯೋ ಎಂಬ ಆತಂಕವೂ ಸಣ್ಣದಾಗಿ ಕಂಡು ಬರುತ್ತಿದೆ. ಕಳೆದ ಬಾರಿ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯಾ ಧ್ಯಕ್ಷರಾಗಿದ್ದ ವೇಳೆ ನಡೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ದಾಖಲೆ ಎಂಬಂತೆ 25 ಸ್ಥಾನಗಳಲ್ಲಿ ಜಯಭೇರಿ ಬಾರಿಸಿತ್ತು. ಇದೀಗ ಅವರ ಪುತ್ರ ಬಿ.ವೈ. ವಿಜಯೇಂದ್ರ, ರಾಜ್ಯಾಧ್ಯಕ್ಷ ಹುದ್ದೆ ಅಲಂಕರಿಸಿದ್ದಾರೆ. ರಾಜ್ಯಾಧ್ಯಕ್ಷರಾದ ಬಳಿಕ ಎದುರಿಸುತ್ತಿರುವ ಮೊದಲ ಚುನಾವಣೆಯೂ ಹೌದು. ಹೀಗಾಗಿ, ವಿಜಯೇಂದ್ರ ಮತ್ತು ಯಡಿಯೂರಪ್ಪ ನೇತೃತ್ವದಲ್ಲಿ ಪಕ್ಷದ ರಾಜ್ಯ ನಾಯಕರು ಕಳೆದ ಬಾರಿಯ ದಾಖಲೆಯನ್ನು ಉಳಿಸಿಕೊಳ್ಳಲು ಪ್ರಯತ್ನಿಸಿದರೂ ಅದು ಪೂರ್ಣ ಪ್ರಮಾಣದಲ್ಲಿ ಯಶಸ್ವಿಗೊಳ್ಳುವ ಬಗ್ಗೆ ಪಕ್ಷದಲ್ಲಿ ಅನುಮಾನ ಕಂಡು ಬರುತ್ತಿದೆ.
ಮೋದಿ ಗ್ಯಾರಂಟಿ ವರ್ಸಸ್ ಸಿದ್ದರಾಮಯ್ಯ ಗ್ಯಾರಂಟಿ ನಡುವೆ ನಡೆದ ಚುನಾವಣಾ ಹೋರಾಟದಲ್ಲಿ ನಮ್ಮ ಪಕ್ಷಕ್ಕೆ ಹೆಚ್ಚು ಸ್ಥಾನ ಗೆಲ್ಲುವ ವಿಶ್ವಾಸವಿದ್ದರೂಕರಾರುವಾಕ್ಕಾಗಿ ಹೇಳದಂಥಸನ್ನಿವೇಶ ಇದೆ.ಆರಂಭದಲ್ಲಿ ಇದ್ದ ವಿಶ್ವಾಸ ನಂತರದ ದಿನಗಳಲ್ಲಿ ತುಸು ಕಡಿಮೆಯಾಯಿತು. ಜೆಡಿಎಸ್ Q ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣವೂ ಒಂದು ಕಾರಣ. ನಾವು 28ಕ್ಕೆ 28 ಕ್ಷೇತ್ರಗಳನ್ನೂ ಗೆಲ್ಲುತ್ತೇವೆ ಎನ್ನುತ್ತಿದ್ದರೂ ಆ ಸಂಖ್ಯೆ ದಿನೇ ದಿನೇ ಕಡಮೆಯಾಗಿ ಅಂತಿಮವಾಗಿ 18ರಿಂದ20 ಸ್ಥಾನಗಳನ್ನು ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಗೆಲ್ಲಬಹುದು ಎಂಬ ಮಾಹಿತಿ ಪಕದ ಬೂತ್ ಮಟ್ಟದ ಕಾರ್ಯಕರ್ತರಿಂದ ಸಂಗ್ರಹಿಸಿದ ಅಂಕಿ ಅಂಶಗಳಿಂದ ಗೊತ್ತಾಗುತ್ತಿದೆ ಎಂದು ಹೆಸರು ಬಹಿರಂಗಪಡಿಸಲು ಇಚ್ಛಿಸದ ಬಿಜೆಪಿಯ ನಾಯಕರೊಬ್ಬರು ತಿಳಿಸಿದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ನೀಡಿದ್ದ ಗ್ಯಾರಂಟಿ ಯೋಜನೆಗಳ ಭರವಸೆ ಬಿಜೆಪಿಗೆ ದೊಡ್ಡ ಹೊಡೆತ ನೀಡಿತು. ಪರಿಣಾಮ ಬಿಜೆಪಿ ಹೀನಾಯ ಸೋಲನುಭವಿಸಿತು. ಆದರೆ, ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅದೇ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಮುಂದಿಟ್ಟುಕೊಂಡು ಭರ್ಜರಿ ಪ್ರಚಾರ ನಡೆಸಿದರೂ ಮತದಾರರು ದೇಶಕ್ಕಾಗಿ ಮೋದಿ ಎಂಬ ಅಂಶವನ್ನು ಹೆಚ್ಚು ಗಂಭೀರವಾಗಿ ಪರಿಗಣಿಸಿದ್ದಾರೆ. ಹೀಗಾಗಿ, ಬಿಜೆಪಿ ಅತಿಹೆಚ್ಚು ಸ್ಥಾನಗಳನ್ನು ಗೆಲ್ಲುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಮತ್ತೊಬ್ಬ ಮುಖಂಡರು ಮಾಹಿತಿ ನೀಡಿದರು.
ಎಲ್ಲೆಲ್ಲಿ ಪ್ರಬಲ ಹೋರಾಟ:
ಬಿಜೆಪಿ ರಾಜ್ಯ ನಾಯಕರ ಪ್ರಕಾರ, ಬೀದರ್, ಕಲಬುರಗಿ, ಕೊಪ್ಪಳ, ಬಳ್ಳಾರಿ, ಚಿಕ್ಕೋಡಿ, ದಾವಣಗೆರೆ, ಚಾಮರಾಜನಗರ, ಹಾಸನ, ಚಿತ್ರದುರ್ಗ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಕೇಂದ್ರ ಮತ್ತಿತರ ಲೋಕಸಭಾ ಕ್ಷೇತ್ರಗಳಲ್ಲಿ ಪ್ರಬಲ ಹೋರಾಟ ನಡೆದಿದೆ. ಈ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲುವ ಅವಕಾಶವಿದ್ದರೂ ಅದನ್ನು ಪಕ್ಕಾ ಎನ್ನುವಂತೆ ಹೇಳುವುದು ತುಸು ಕಷ್ಟ. ಗೆದ್ದರೂ ಪ್ರಯಾಸದ ಗೆಲುವು ಆಗಬಹುದೇ ಹೊರತು ಸುಲಭವಂತೂ ಇಲ್ಲ ಎಂದು ಪಕ್ಷದ ಮೂಲಗಳು ತಿಳಿಸಿವೆ.
ನಾಳೆ ಪರಿಶೀಲನಾ ಸಭೆ:
ಲೋಕಸಭಾ ಚುನಾವಣೆಯ ಮತದಾನದ ಬಳಿಕ ಸೋಲು ಗೆಲುವಿನ ಲೆಕ್ಕಾಚಾರದ ಬಗ್ಗೆ ಚರ್ಚೆ ನಡೆಸುವ ಸಂಬಂಧ ಶನಿವಾರ ಬಿಜೆಪಿ ಮುಖಂಡರ ಪರಿಶೀಲನಾ ಸಭೆ ನಡೆಯಲಿದೆ. ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಈ ಸಭೆ ನಡೆಯಲಿದ್ದು, ರಾಜ್ಯ ಪದಾಧಿಕಾರಿಗಳು ಹಾಗೂ ಜಿಲ್ಲಾ ಅಧ್ಯಕ್ಷರು-ಪ್ರಧಾನ ಕಾರ್ಯದರ್ಶಿಗಳು ಪಾಲ್ಗೊಳ್ಳಲಿದ್ದಾರೆ. ಈ ಸಭೆಯಲ್ಲಿ ಚುನಾವಣಾ ಪ್ರಚಾರ ನಡೆದ ಬಗೆ, ಯಾವ ಕ್ಷೇತ್ರದಲ್ಲಿ ಹಿನ್ನಡೆ ಉಂಟಾಗಬಹುದು, ಆ ಹಿನ್ನಡೆಗೆ ಕಾರಣಗಳೇನು ಎಂಬುದರ ಬಗ್ಗೆ ಚರ್ಚೆ ನಡೆಯಲಿದೆ ಎಂದು ತಿಳಿದು ಬಂದಿದೆ.
ಜೆಡಿಎಸ್‌ಗೆ 2 ಸ್ಥಾನ ಗೆಲ್ಲುವ ವಿಶ್ವಾಸ
ಬೆಂಗಳೂರು: ಬಿಜೆಪಿ ಮೈತ್ರಿಯೊಂದಿಗೆ 3 ಲೋಕಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಿರುವ ಜೆಡಿಎಸ್ 2 ಕ್ಷೇತ್ರಗಳಲ್ಲಿ ಗೆಲ್ಲುವ ವಿಶ್ವಾಸ ವನ್ನು ಪಕ್ಷದ ಮುಖಂಡರು ಹೊಂದಿದ್ದಾರೆ. ಮಂಡ್ಯ, ಹಾಸನ ಮತ್ತು ಕೋಲಾರ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದರೂ ಮಂಡ್ಯದಲ್ಲಿ ಜಯ ಖಚಿತ ಎಂದು ಮುಖಂಡರು ಹೇಳುತ್ತಾರೆ. ಕಳೆದ ಬಾರಿ ಕೋಲಾರದಲ್ಲಿ ಬಿಜೆಪಿ ಗೆದ್ದಿದೆ. ಜಿಲ್ಲೆಯಲ್ಲಿ ಕಾರ್ಯಕರ್ತರ ಪಡೆ ದೊಡ್ಡದಾಗಿದೆ.
ಮೋದಿ ಗ್ಯಾರಂಟಿ ಮುಂದೆ ಕಾಂಗ್ರೆಸ್ ಆಟ ನಡೆಯಲ್ಲ: ವೀರಣ್ಣ ಚರಂತಿಮಠ
ಮೋದಿ ಅಲೆ, ಬಿಜೆಪಿ ಕಾರ್ಯಕರ್ತರಬೆಂಬಲದಿಂದಾಗಿ ಕೋಲಾರ ಜೆಡಿಎಸ್ ತೆಕ್ಕೆಗೆ ಬರಲಿದೆ ಎಂದು ಬಲವಾಗಿ ನಂಬಿದ್ದಾರೆ. ಆದರೆ, ಅನೇಕ ವರ್ಷಗಳಿಂದ ಜೆಡಿಎಸ್ ಭದ್ರಕೋಟೆ ಎನಿಸಿರುವ ಹಾಸನ ಈ ಬಾರಿ ಕೈ ತಪ್ಪುವ ಸಾಧ್ಯತೆ ಇದೆ ಎಂಬ ಆತಂಕ ಮುಖಂಡರಿಗೆ ಇದೆ.
ಮೈತ್ರಿಗೆ ವಿರುದ್ಧವಾಗಿ ಕೆಲವರು ಕೆಲಸಮಾಡಿರುವುದು, ಮತದಾನಕ್ಕೂ ಮುನ್ನ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ಕ್ಷೇತ್ರದಲ್ಲಿ ಹಂಚಿಕೆಯಾಗಿರುವುದು ಸೇರಿ ವಿವಿಧ ಕಾರಣದಿಂದಾಗಿ ಗೆಲುವು ಸುಲಭವಲ್ಲ. ಚುನಾವಣೆ ಬಳಿಕ ಪಕ್ಷವೇ ನಡೆಸಿದ ಲೆಕ್ಕಾಚಾರದಲ್ಲಿಯೂ ಸಹ ಹಾಸನದಲ್ಲಿ ಗೆಲುವು ಕಷ್ಟ ಎನ್ನಲಾಗುತ್ತಿದೆ. ಇನ್ನು, ಮಂಡ್ಯದಲ್ಲಿ ಎಚ್.ಡಿ. ಕುಮಾರಸ್ವಾಮಿ ಸ್ಪರ್ಧಿಸಿದ ಕಾರಣ ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ಒಗ್ಗಟ್ಟಾಗಿ ಕೆಲಸ ಮಾಡಿದ್ದಾರೆ. ಬಿಜೆಪಿ ಹೈಕಮಾಂಡ್ ನಿರ್ದೇಶನ ಮೇರೆಗೆ ಪಕ್ಷದ ನಾಯಕರು, ಕಾರ್ಯಕರ್ತರು ಒಗ್ಗೂಡಿ ಚುನಾವಣೆಯಲ್ಲಿ ಶ್ರಮವಹಿಸಿದ್ದಾರೆ. ಕುಮಾರಸ್ವಾಮಿ ಗೆದ್ದರೆ ಕೇಂದ್ರದಲ್ಲಿ ಮಂತ್ರಿಯಾಗಲಿದ್ದಾರೆ ಎಂಬ ಮಾತುಗಳು ಮತದಾರರ ಮೇಲೆ ಪರಿಣಾಮ ಬೀರಿದೆ. ಹೀಗಾಗಿ ಮಂಡ್ಯದಲ್ಲಿ ಜೆಡಿಎಸ್ ಗೆಲುವು ನಿಶ್ಚಿತವೆಂದು ಪಕ್ಷದಲ್ಲಿನ ಬಹುತೇಕ ಮುಖಂಡರು ಹೇಳುತ್ತಾರೆ.