ಸಮ್ಮಿಶ್ರ ಸರ್ಕಾರದ ಪತನದಲ್ಲಿ ಸಿದ್ದರಾಮಯ್ಯ ಪಾತ್ರ ನಿರಾಕರಿಸಲು ಸಾಧ್ಯವೇ? ಸುಧಾಕರ್ ಸ್ಪೋಟಕ ಹೇಳಿಕೆ

ಲೋಕಸಭೆ ಚುನಾವಣೆ ಮುಗಿದ ನಂತರ ಯಾವುದೇ ಕಾರಣಕ್ಕೂ ಒಂದು ದಿವಸವೂ ಮಾನ್ಯ ಕುಮಾರಸ್ವಾಮಿ ಅವರ ನೇತೃತ್ವದ ಈ ಸಮ್ಮಿಶ್ರ ಸರ್ಕಾರ ಇರಲು ಬಿಡುವುದಿಲ್ಲ ಎಂದು ಶಾಸಕರುಗಳಿಗೆ ಸಿದ್ದರಾಮಯ್ಯ ಸಮಾಧಾನ ಮಾಡುತ್ತಿದ್ದರು ಎಂದು ಸುಧಾಕರ್‌ ಟ್ವೀಟ್‌ ಮಾಡಿದ್ದಾರೆ. 

can siddaramaiah s role in the downfall of the coalition government be denied tweets ex minister dr k sudhakar ash

ಬೆಂಗಳೂರು (ಮೇ 17, 2023): ಕರ್ನಾಟಕ ವಿಧಾನಸಭೆ ಚುನಾವಣೆ ಮುಗಿದಿದ್ದು, ಕಾಂಗ್ರೆಸ್‌ ಭರ್ಜರಿ ಬಹುಮತದೊಂದಿಗೆ ರಾಜ್ಯದಲ್ಲಿ ಅಧಿಕಾರಕ್ಕೂ ಬಂದಿದೆ. ಆದರೂ, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಸಿಎಂ ಆಗಲು ಪ್ರಬಲ ಪೈಪೋಟಿ ನಡೆಸುತ್ತಿದ್ದು, ಈ ಹಿನ್ನೆಲೆ ಸರ್ಕಾರ ರಚನೆಯೇ ಆಗುತ್ತಿಲ್ಲ. ಆದರೆ, ಈ ನಡುವೆ ಮಾಜಿ ಸಚಿವ ಸುಧಾಕರ್‌ ಸಿದ್ದರಾಮಯ್ಯ ವಿರುದ್ಧ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಜೆಡಿಎಸ್‌ - ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರ ಉರುಳಿಸಿದ್ದರಲ್ಲಿ ಇವರ ಪಾತ್ರ ಇಲ್ಲವೇ ಎಂದೂ ಪ್ರಶ್ನೆ ಮಾಡಿದ್ದಾರೆ. 

ಸಮ್ಮಿಶ್ರ ಸರ್ಕಾರ ಉರುಳಿಸಿದ್ದರಲ್ಲಿ ಸಿದ್ದರಾಮಯ್ಯ ಪಾತ್ರದ ಬಗ್ಗೆ ಆರೋಪಿಸಿ ಮಾಜಿ ಸಚಿವ ಡಾ. ಕೆ. ಸುಧಾಕರ್‌ ಸರಣಿ ಟ್ವೀಟ್‌ ಮಾಡಿದ್ದಾರೆ. ‘’2018ರಲ್ಲಿ ಅಂದಿನ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ನಮಗಾಗುತ್ತಿದ್ದ ಅನ್ಯಾಯದ ಬಗ್ಗೆ ಹೇಳಿಕೊಳ್ಳಲು ಶಾಸಕರುಗಳು ಸಮನ್ವಯ ಸಮಿತಿ ಅಧ್ಯಕ್ಷರಾಗಿದ್ದ ಮಾನ್ಯ ಸಿದ್ದರಾಮಯ್ಯನವರ ಬಳಿ ಹೋದಾಗಲೆಲ್ಲ ಈ ಸರ್ಕಾರದಲ್ಲಿ ನನ್ನದೇ ಏನು ನಡೆಯುತ್ತಿಲ್ಲ, ನನ್ನ ಕ್ಷೇತ್ರದ, ನನ್ನ ಜಿಲ್ಲೆಯ ಕೆಲಸಗಳೇ ಆಗುತ್ತಿಲ್ಲ ಎಂದು ಹೇಳುತ್ತಿದ್ದರು’’ ಎಂದು ಟ್ವೀಟ್‌ ಮೂಲಕ ಹೇಳಿದ್ದಾರೆ.

ಇದನ್ನು ಓದಿ: ಸೋಲಿನಿಂದ ವಿಚಲಿತರಾಗಬೇಡಿ: ಸೋಮಣ್ಣ, ಸುಧಾಕರ್‌ಗೆ ಬೊಮ್ಮಾಯಿ ಸಮಾಧಾನ

ಅಲ್ಲದೆ, ‘’2019ರ ಲೋಕಸಭೆ ಚುನಾವಣೆವರೆಗೂ ಸಹಿಸಿಕೊಳ್ಳಿ, ಲೋಕಸಭೆ ಚುನಾವಣೆ ಮುಗಿದ ನಂತರ ಯಾವುದೇ ಕಾರಣಕ್ಕೂ ಒಂದು ದಿವಸವೂ ಮಾನ್ಯ ಕುಮಾರಸ್ವಾಮಿ ಅವರ ನೇತೃತ್ವದ ಈ ಸಮ್ಮಿಶ್ರ ಸರ್ಕಾರ ಇರಲು ಬಿಡುವುದಿಲ್ಲ ಎಂದು ಶಾಸಕರುಗಳಿಗೆ ಸಮಾಧಾನ ಮಾಡುತ್ತಿದ್ದರು’’ ಎಂದೂ ಮಾಜಿ ಆರೋಗ್ಯ ಸಚಿವರು ಸ್ಪೋಟಕ ಆರೋಪ ಮಾಡಿದ್ದಾರೆ. 

ಜತೆಗೆ, ‘’ನಮ್ಮ ಕ್ಷೇತ್ರಗಳಲ್ಲಿ ನಮ್ಮನ್ನು ನಂಬಿದ ಕಾರ್ಯಕರ್ತರನ್ನ, ಮುಖಂಡರನ್ನ ಉಳಿಸಿಕೊಳ್ಳಲು ದೊಡ್ಡ ರಿಸ್ಕ್ ತೆಗೆದುಕೊಂಡು ರಾಜೀನಾಮೆ ಕೊಟ್ಟು ಮತ್ತೊಮ್ಮೆ ಜನರಿಂದ ಆರಿಸಿ ಬಂದು ಮಂತ್ರಿಗಳಾದೆವು. ನಮ್ಮ ನಡೆಯಲ್ಲಿ ಮಾನ್ಯ ಸಿದ್ದರಾಮಯ್ಯನವರ ಪ್ರೇರಣೆ, ಪರೋಕ್ಷ ಅಥವಾ ಅಪರೋಕ್ಷ ಪಾತ್ರ ಇಲ್ಲವೆಂದು ಸಿದ್ದರಾಮಯ್ಯನವರು ನಿರಾಕರಿಸಲು ಸಾಧ್ಯವೇ?’’ ಎಂದೂ ಚಿಕ್ಕಬಳ್ಳಾಪುರದ ಕ್ಷೇತ್ರದ ಮಾಜಿ ಶಾಸಕ ಹಾಗೂ ಆಜಿ ಸಚಿವ ಡಾ. ಕೆ. ಸುಧಾಕರ್‌ ಸರಣಿ ಟ್ವೀಟ್‌ಗಳ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯರನ್ನು ಪ್ರಶ್ನೆ ಮಾಡಿದ್ದು, ಆರೋಪವನ್ನೂ ಮಾಡಿದ್ದಾರೆ.

ಇದನ್ನೂ ಓದಿ: Chikkaballapura Election Result 2023: ಕರ ಹಿಡಿದ ಪ್ರದೀಪನ ಮುಂದೆ ಸೋತ ಡಾ. ಸುಧಾಕರ್!

ಸಿಎಂ ಆಗಲು ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್‌ ಬಿಗಿ ಪಟ್ಟು ಮುಂದುವರಿದಿದ್ದು, ಈ ಮಧ್ಯೆ ಮಾಜಿ ಸಚಿವ ಸುಧಾಕರ್‌ ಮಾಜಿ ಸಿಎಂ ವಿರುದ್ಧ ಸ್ಪೋಟಕ ಆರೋಪ ಮಾಡಿದ್ದಾರೆ.

ಇದನ್ನೂ ಓದಿ: ಈ ಬಾರಿ ಮತ್ತೆ ಬಿಜೆಪಿ ಸರ್ಕಾರ ರಚನೆ: ಸಚಿವ ಸುಧಾಕರ್‌

Latest Videos
Follow Us:
Download App:
  • android
  • ios