ಬೆಳಗಾವಿ: ಅವಿವಾಹಿತ ಯುವಕರಿಗೆ ಮದುವೆ ಮಾಡಿಸುವುದಾಗಿ ಪ್ರಣಾಳಿಕೆಯಲ್ಲಿ ಘೋಷಿಸಿದ ಪಕ್ಷೇತರ ಅಭ್ಯರ್ಥಿಗಳು
ಬೆಳಗಾವಿ ಜಿಲ್ಲೆಯ ಪಕ್ಷೇತರ ಅಭ್ಯರ್ಥಿಗಳ ಪ್ರಣಾಳಿಕೆ ಸಾಕಷ್ಟು ಸದ್ದು ಮಾಡುತ್ತಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ಪ್ರಣಾಳಿಕೆ ಹಲವರ ಹುಬ್ಬೇರಿಸಿದೆ.
ಬೆಳಗಾವಿ (ಮೇ 4, 2023): ಕರ್ನಾಟಕ ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿದ್ದು, ಎಲ್ಲ ರಾಜಕೀಯ ಪಕ್ಷಗಳ ಹಾಗೂ ಪಕ್ಷೇತರ ಅಭ್ಯರ್ಥಿಗಳ ಪ್ರಚಾರದ ಭರಾಟೆ ಹೆಚ್ಚಾಗುತ್ತಿದೆ. ಈ ನಡುವೆ, ರಾಜಕೀಯ ಪಕ್ಷಗಳು ಹಾಗೂ ಪಕ್ಷೇತರ ಅಭ್ಯರ್ಥಿಗಳು ಪ್ರಣಾಳಿಕೆಯನ್ನೂ ಬಿಡುಗಡೆ ಮಾಡುತ್ತಿದ್ದಾರೆ. ಕೆಲವು ಪ್ರಣಾಳಿಕೆಗಳು ಸಾಕಷ್ಟು ಸದ್ದು ಮಾಡುತ್ತಿದೆ. ಅಂತಹದ್ದೊಂದು ಪ್ರಣಾಳಿಕೆಯನ್ನು ಪಕ್ಷೇತರ ಅಭ್ಯರ್ಥಿಗಳು ಬಿಡುಗಡೆ ಮಾಡಿದ್ದಾರೆ ನೋಡಿ.
ಬೆಳಗಾವಿ ಜಿಲ್ಲೆಯ ಪಕ್ಷೇತರ ಅಭ್ಯರ್ಥಿಗಳ ಪ್ರಣಾಳಿಕೆ ಸಾಕಷ್ಟು ಸದ್ದು ಮಾಡುತ್ತಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ಪ್ರಣಾಳಿಕೆ ಹಲವರ ಹುಬ್ಬೇರಿಸಿದೆ ಎಂದೂ ತಿಳಿದುಬಂದಿದೆ. ಬೆಳಗಾವಿ ಜಿಲ್ಲೆ ಅರಭಾವಿ ವಿಧಾನಸಭೆ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಗುರುಪುತ್ರ ಕೆಂಪಣ್ಣ ಕುಳ್ಳೂರ ಹಾಗೂ ಗೋಕಾಕ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಪುಂಡಲೀಕ ಕುಳ್ಳೂರ ವಧು-ವರರ ಮದುವೆ ಭಾಗ್ಯವನ್ನು ಘೋಷಣೆ ಮಾಡಿದ್ದಾರೆ.
ಇದನ್ನು ಓದಿ: 10 ಕೋಟಿ ನಕಲಿ ಹೆಸರಲ್ಲಿ ಸರ್ಕಾರಿ ಯೋಜನೆಗಳಲ್ಲಿ ಕಾಂಗ್ರೆಸ್ ಲೂಟಿ ಮಾಡಿದೆ: ಪ್ರಧಾನಿ ಮೋದಿ
ಗುರುಪುತ್ರ ಕುಳ್ಳೂರ ಹಾಗೂ ಪುಂಡಲೀಕ ಕುಳ್ಳೂರ ಇಬ್ಬರೂ ಸಹೋದರರಾಗಿದ್ದು, ಮದುವೆಯಾಗದ ಯುವಕರಿಗೆ ಮದುವೆ ಮಾಡಿಸುವುದಾಗಿ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ್ದಾರೆ. ಪಕ್ಷೇತರರಾಗಿ ಅರಭಾವಿ ಹಾಗೂ ಗೋಕಾಕ ವಿಧಾನಸಭಾ ಕ್ಷೇತ್ರಗಳಿಂದ ಈ ಸಹೋದರರು ಸ್ಪರ್ಧೆಗೆ ಇಳಿದಿದ್ದಾರೆ ಎಂದು ತಿಳಿದುಬಂದಿದೆ. ಈ ಇಬ್ಬರೂ ಅಭ್ಯರ್ಥಿಗಳು ಎರಡೂ ಮತಕ್ಷೇತ್ರದ ಮದುವೆಯಾಗದ ಯುವಕರಿಗೆ ಮದುವೆ ಮಾಡಿಸುವ ಭರವಸೆಯನ್ನು ಪ್ರಣಾಳಿಕೆಯ ಮೂಲಕ ನೀಡಿದ್ದಾರೆ.
ಇದನ್ನೂ ಓದಿ: 'ಜೈ ಭಜರಂಗ ಬಲಿ' ಘೋಷಣೆ ಮೂಲಕ ಕಾಂಗ್ರೆಸ್ ಪ್ರಣಾಳಿಕೆಗೆ ಪ್ರಧಾನಿ ಮೋದಿ ಟಾಂಗ್