ಲೋಕಸಭೆ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಇನ್ನು ಅಂತಿಮವಾಗಿಲ್ಲ: ಸಚಿವ ಸತೀಶ್ ಜಾರಕಿಹೊಳಿ
ಬೆಳಗಾವಿ ಲೋಕಸಭೆಗೆ ಲಿಂಗಾಯತ ಸಮುದಾಯದ ಅಭ್ಯರ್ಥಿ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರಕ್ಕೆ ಕುರುಬ ಸಮುದಾಯದ ಅಭ್ಯರ್ಥಿಗೆ ಕಾಂಗ್ರೆಸ್ ಟಿಕೆಟ್ ನೀಡುವ ಚಿಂತನೆ ನಡೆಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ಬೆಳಗಾವಿ (ನ.15): ಬೆಳಗಾವಿ ಲೋಕಸಭೆಗೆ ಲಿಂಗಾಯತ ಸಮುದಾಯದ ಅಭ್ಯರ್ಥಿ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರಕ್ಕೆ ಕುರುಬ ಸಮುದಾಯದ ಅಭ್ಯರ್ಥಿಗೆ ಕಾಂಗ್ರೆಸ್ ಟಿಕೆಟ್ ನೀಡುವ ಚಿಂತನೆ ನಡೆಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ನಗರದ ಕಾಂಗ್ರೆಸ್ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆ ತಯಾರಿ ಕಾರ್ಯಕರ್ತರೊಂದಿಗೆ ನಿರಂತರ ಶ್ರಮ ಇದೆ. ಅಭ್ಯರ್ಥಿಗಳ ತೀರ್ಮಾನ ಮಾಡಿಲ್ಲ. ಅಧಿವೇಶವದ ಸಂದರ್ಭದಲ್ಲಿ ಪಕ್ಷದ ಸಭೆ ನಡೆಸಿ ತೀರ್ಮಾನಿಸಲಾಗುವುದು. ಪಕ್ಷದ ಕಾರ್ಯಕರ್ತರು, ಜನರ ಜೊತೆಗೆ ನಿರಂತರ ಸಂಪರ್ಕ ಇರಬೇಕು.
ಗೆಲ್ಲುವ ಅಭ್ಯರ್ಥಿಗೆ ಪಕ್ಷ ಮಣೆ ಹಾಕಲಿದೆ ಎಂದರು. ಸಮಾಜ, ಪಕ್ಷ, ಜಿಲ್ಲೆಯಲ್ಲಿರುವ ಶಾಸಕರು, ಮಾಜಿ ಶಾಸಕರು ಒಪ್ಪಿಗೆಯಾದರೆ ರಾಜ್ಯ ಕಾಂಗ್ರೆಸ್ ನಾಯಕರು ಹಾಗೂ ಲೋಕಸಭಾ ಚುನಾವಣೆಯ ಅಭ್ಯರ್ಥಿಗಳ ಆಯ್ಕೆಯನ್ನು ಹೈಕಮಾಂಡ್ ಮಾಡಲಿದೆ. ಉಪಮುಖ್ಯಮಂತ್ರಿ ನೇಮಕ ವಿಚಾರ ಪಕ್ಷದ ಹೈಕಮಾಂಡ್‌ಗೆ ಬಿಟ್ಟಿದ್ದು. ಈ ಬಗ್ಗೆ ಪಕ್ಷವೇ ತೀರ್ಮಾನ ಕೈಗೊಳ್ಳುತ್ತದೆ. ಬೆಳಗಾವಿ ಜಿಲ್ಲಾ ವಿಭಜನೆ ಪ್ರಸ್ತಾವನೆ ಸರ್ಕಾರದ ಮುಂದೆ ಸದ್ಯಕ್ಕಿಲ್ಲ ಎಂದರು. ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಆಪರೇಷನ್ ಹಸ್ತ ಅವಶ್ಯಕತೆ ಇಲ್ಲ. ಆಡಳಿತ ಪಕ್ಷ ಬಿಜೆಪಿಯಲ್ಲಿ ಸದಸ್ಯರಿಗೆ ಸ್ವತಂತ್ರವಾಗಿ ಕೆಲಸ ಮಾಡಲು ಬಿಡುತ್ತಿಲ್ಲ.
ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಆಸೆ ಇದೆ: ಸಚಿವ ರಾಜಣ್ಣ
ಹಾಗಾಗಿ , ಅವರು ನಮ್ಮ ಪಕ್ಷದತ್ತ ಒಲವು ಹೊಂದಿರಬಹುದು. ರಾಜ್ಯ ಬಿಜೆಪಿಯವರು ವಿರೋಧ ಪಕ್ಷದಲ್ಲಿದ್ದಾರೆ. ಅವರು ಆರೋಪ ಮಾಡುವುದು ಸಹಜ. ನಮ್ಮ ಗ್ಯಾರಂಟಿ ಯೋಜನೆ ಜನರಿಗೆ ಹೋಗುತ್ತಿದೆ. ವಿನಾಕಾರಣ ಆರೋಪ ಮಾಡುತ್ತಿದ್ದಾರೆ ಎಂದರು. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಲು ಅಪರಾಧ ಪ್ರಕರಣದಲ್ಲಿ ಚಿಕ್ಕಮಕ್ಕಳು ಯುವಕರು ಭಾಗಿಯಾಗುತ್ತಿದ್ದಾರೆ. ಈ ಕುರಿತು ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದರು. ಬೆಳಗಾವಿ ಜಿಲ್ಲೆಗೆ ₹410 ಕೋಟಿ ಕೇಂದ್ರ ಸರ್ಕಾರದಿಂದ ಪರಿಹಾರ ಬರಬೇಕು. ಬಂದ ಕೂಡಲೇ ಜಿಲ್ಲೆಯಲ್ಲಿರುವ ಫಲಾನುಭವಿಗಳಿಗೆ ನೀಡಲಾಗುವುದು ಎಂದರು. ಬೆಳಗಾವಿ ಕಾಂಗ್ರೆಸ್ ಗ್ರಾಮೀಣ ಘಟಕದ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ, ಮಾಜಿ ಸಚಿವ ವೀರಕುಮಾರ ಪಾಟೀಲ, ಮಾಜಿ ಶಾಸಕ ಕಾಕಾಸಾಹೇಬ ಪಾಟೀಲ, ಕಿರಣ್ ಸಾದುನವರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.