ನಗರದಲ್ಲಿ ಕೋಮು ಸೌಹಾರ್ದತೆ ಕಾಪಾಡಲು ಬಿಜೆಪಿ ಆದ್ಯತೆ ನೀಡುತ್ತಿದೆ. ಶಿವಮೊಗ್ಗಕ್ಕೂ ಬಂಡವಾಳ ಹೂಡಿಕೆದಾರರು ಬರಲಿದ್ದಾರೆ. ಇಲ್ಲಿಯೂ ಉದ್ದಿಮೆಗಳು ಆರಂಭವಾಗಲಿವೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಸಚಿವ ಮಹೇಂದ್ರನಾಥ ಪಾಂಡೆ ಭರವಸೆ ನೀಡಿದರು.
ಶಿವಮೊಗ್ಗ (ಏ.26) : ನಗರದಲ್ಲಿ ಕೋಮು ಸೌಹಾರ್ದತೆ ಕಾಪಾಡಲು ಬಿಜೆಪಿ ಆದ್ಯತೆ ನೀಡುತ್ತಿದೆ. ಶಿವಮೊಗ್ಗಕ್ಕೂ ಬಂಡವಾಳ ಹೂಡಿಕೆದಾರರು ಬರಲಿದ್ದಾರೆ. ಇಲ್ಲಿಯೂ ಉದ್ದಿಮೆಗಳು ಆರಂಭವಾಗಲಿವೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಸಚಿವ ಮಹೇಂದ್ರನಾಥ ಪಾಂಡೆ ಭರವಸೆ ನೀಡಿದರು.
ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಶಿವಮೊಗ್ಗದಲ್ಲಿ ಬಂಡವಾಳಶಾಹಿಗಳು ಮುಂಬರುವ ದಿನಗಳಲ್ಲಿ ನಿಶ್ಚಿತವಾಗಿ ಬಂಡವಾಳ ಹೂಡಿ ಕೈಗಾರಿಕೆಗಳನ್ನು ಆರಂಭಿಸುತ್ತಾರೆ. ಅಂತಹ ವಾತಾವರಣವನ್ನು ನಾವು ನಿರ್ಮಿಸುತ್ತೇವೆ ಎಂದರು.
ಶಿವಮೊಗ್ಗದಲ್ಲಿ ಚನ್ನಬಸಪ್ಪ ಗೆಲುವಿಗೆ ಶ್ರಮಿಸುವೆ: ಕೆ.ಎಸ್.ಈಶ್ವರಪ್ಪ
2008 ಮತ್ತು 2013ರಲ್ಲಿ ರಾಜ್ಯದಲ್ಲಿ ಬಿಜೆಪಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಆದರೆ, ಬಹುಮತಕ್ಕೆ ಕೆಲವು ಸೀಟುಗಳ ಕಡಿಮೆ ಇತ್ತು. ಯಡಿಯೂರಪ್ಪ ಅವರ ಅಭಿವೃದ್ಧಿ ಫಲವಾಗಿ ಬಿಜೆಪಿಗೆ ಬಲ ನೀಡಿದ್ದು ಶಿವಮೊಗ್ಗ ಜಿಲ್ಲೆ. ಚನ್ನಬಸಪ್ಪ ಸಂಘ ಪರಿವಾರದ ಹಿನ್ನೆಲೆಯ ನಿಷ್ಠಾವಂತ ಬಿಜೆಪಿ ಕಾರ್ಯಕರ್ತ. ಶಾಸಕರಾಗಿ ಒಳ್ಳೆಯ ಸೇವೆಯನ್ನು ಮಾಡಲಿದ್ದಾರೆ. ಅಟಲ್ ಬಿಹಾರಿ ವಾಜಪೇಯಿ ಅವರ ಅಧಿಕಾರವಧಿಯ ನಂತರ 9 ವರ್ಷಗಳಿಂದ ದೇಶ ಮತ್ತು ಜನಸೇವೆಯ ಕಾಯಕವನ್ನು ಪ್ರಧಾನಿ ನರೇಂದ್ರ ಮೋದಿ ಮುಂದುವರಿಸಿದ್ದಾರೆ ಎಂದರು.
ಇನ್ನು ಎರಡು ವರ್ಷಗಳಲ್ಲಿ ಭಾರತದ ನೆಲದಲ್ಲಿ ತಯಾರಾದ ಮೊಬೈಲ್‌ಗಳು ವಿಶ್ವ ಮಾರುಕಟ್ಟೆಯಲ್ಲಿ ರಾರಾಜಿಸಲಿದೆ. ಈಗ ವಿಶ್ವ ಮಾರುಕಟ್ಟೆಯಲ್ಲಿ ಚೀನಾದಲ್ಲಿ ನಿರ್ಮಿತ ಮೊಬೈಲ್‌ಗಳು ಹೆಚ್ಚಿನ ಮಟ್ಟದಲ್ಲಿದೆ. ಶೇ.85ರಷ್ಟುಮೊಬೈಲ್‌ಗಳು ಅಲ್ಲಿಂದಲೇ ತಯಾರಾಗಿ ಮಾರುಕಟ್ಟೆಗೆ ಬರುತ್ತಿವೆ. ಈಗ ನರೇಂದ್ರ ಮೋದಿ ಅವರ ಸರ್ಕಾರ ದೇಶದಲ್ಲಿಯೇ ಮೊಬೈಲ್ ಉತ್ಪಾದನೆಗೆ ಆದ್ಯತೆ ನೀಡಿದೆ. ಆ್ಯಪಲ್ ಕಂಪನಿ ಸಹ ಇಲ್ಲಿಯೇ ಮೊಬೈಲ್ ಉತ್ಪಾದನೆ ಆರಂಭಿಸಿದೆ. ಇನ್ನು ಎರಡು ವರ್ಷಗಳಲ್ಲಿ ಭಾರತದಲ್ಲಿ ತಯಾರಾದ ಮೊಬೈಲ್‌ಗಳು ವಿಶ್ವಕ್ಕೇ ಸರಬರಾಜಾಗಲಿವೆ ಎಂದರು.
ಸಂಘಟನೆ ಮತ್ತು ಈಶ್ವರಪ್ಪ ಹೇಗೋ ಹಾಗೆಯೇ ನಾನು ಮತ್ತು ಸಂಘಟನೆ: ಎಸ್ ಎನ್ ಚನ್ನಬಸಪ್ಪ
ದೇಶದಲ್ಲಿ ಬ್ಯಾಟರಿ ತಯಾರಿಕಾ ಘಟಕ ಇರಲಿಲ್ಲ. ಇದರ ಬಗ್ಗೆ ಯಾರೂ ಗಮನ ಹರಿಸಿರಲಿಲ್ಲ. ಇದೀಗ ಕೇಂದ್ರ ಸರ್ಕಾರ ಲಿಥಿಯಂ ಇಯೋನ್ ಬ್ಯಾಟರಿ ತಯಾರಿಕೆಗೆ ಪ್ರೋತ್ಸಾಹ ನೀಡುತ್ತಿದೆ. 100 ಗಿಗಾ ವ್ಯಾಟ್ ಲಿಥೇನಿಯಂ ಇಯೋನ್ ಇಲ್ಲಿ ಉತ್ಪಾದನೆ ಆಗಲಿದೆ. ಇದರಿಂದ ಭಾರತದ ಸಾಮರ್ಥ್ಯ ಇನ್ನಷ್ಟುಹೆಚ್ಚಳ ಆಗಲಿದೆ ಎಂದು ತಿಳಿಸಿದರು.
