ಬೆಂಗಳೂರು, (ಮಾ.16): ರಾಸಲೀಲೆ ಸಿ.ಡಿ. ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿ ತಲೆ ಎತ್ತಿ ಓಡಾಡದ ಸ್ಥಿತಿ ನಿರ್ಮಾಣವಾಗಿದೆ. 

ಇದರ ಮಧ್ಯೆ ಕನ್ನಡಿಗರಿಗೆ ಅವಾಚ್ಯ ಪದವನ್ನು ಬಳಸಿದ್ದಾರೆ ಎಂದು ಆರೋಪಿಸಿ ಕನ್ನಡಿಗರ ರಕ್ಷಣಾ ವೇದಿಕೆ ಮಾಜಿ ಸಚಿವ ರಮೇಶ್​ ಜಾರಕಿಹೊಳಿ ವಿರುದ್ಧ ದೂರು ದಾಖಲಿಸಿದ್ದಾರೆ.

ಜಾರಕಿಹೊಳಿ ಸಿ.ಡಿ. ಕೇಸ್: ಮಹಾನಾಯಕಿಯನ್ನು ಎಳೆದು ತಂದ ಬಿಜೆಪಿ! 

ಹೌದು....ಯುವತಿಯೊಂದಿಗಿನ ರಾಸಲೀಲೆ ವೇಳೆ ರಮೇಶ್ ಜಾರಕಿಹೊಳಿ ಅವರು ಕನ್ನಡಿಗರ ಬಗ್ಗೆ ಅವಹೇಳನ ಮಾತುಗಳನ್ನಾಡಿದ್ದಾರೆ.  ಈ ಹಿನ್ನೆಲೆಯಲ್ಲಿ ಕನ್ನಡಿಗರ ರಕ್ಷಣಾ ವೇದಿಕೆಯಿಂದ ಕಬ್ಬನ್​ ಪಾರ್ಕ್ ಠಾಣೆಯಲ್ಲಿ ದೂರು ದಾಖಲಾಗಿದೆ.

ರಮೇಶ್ ಜಾರಕಿಹೊಳಿ ಕನ್ನಡಿಗರಿಗೆ ಅಪಮಾನ ಮಾಡಿದ್ದಾರೆ. ಕನ್ನಡಿಗರಿಗೆ ಅವಾಚ್ಯ ಪದ ಬಳಸಿ ನಿಂದಿಸಿದ್ದಾರೆ. ಕರ್ನಾಟಕದಲ್ಲಿ ಹುಟ್ಟಿ, ಕರ್ನಾಟಕದಲ್ಲಿ ಬೆಳೆದು ಅಪಮಾನ ಮಾಡುವುದು ಅವರಿಗೆ ಶೋಭೆಯಲ್ಲ ಎಂದು ಹೇಳಿರುವ ಕನ್ನಡಿಗರ ರಕ್ಷಣಾ ವೇದಿಕೆ ಸದಸ್ಯರು ಸರ್ಕಾರ ಈ ಕೂಡಲೇ ರಮೇಶ್​ ಜಾರಕಿಹೊಳಿ ಅವರನ್ನು ಶಾಸಕ ಸ್ಥಾನದಿಂದ ವಜಾ ಮಾಡಬೇಕು, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.