ಸದ್ಯ ರಾಜ್ಯದಲ್ಲಿ ಡ್ರಗ್ಸ್‌, ಕ್ಯಾಸಿನೋ ನದ್ದೇ ಸುದ್ದಿ ಜೋರಾಗಿದೆ. ಅವರು ಅಷ್ಟು ಹಣ ತೆಗದುಕೊಂಡು ಶ್ರೀಲಂಕಾ ಕ್ಯಾಸಿನೋಗೆ ಹೋಗಿದ್ರು, ಇವರು ಅಲ್ಲಿ ಹೋಗಿದ್ರು ಎನ್ನುವುದೇ ಮಾತು. ಇದರ ಮಧ್ಯೆ ಶಾಸಕರೊಬ್ಬರು  ಕ್ಯಾಸಿನೋವನ್ನು ಕರ್ನಾಟಕದಲ್ಲೇ ಓಪನ್ ಮಾಡಿ ಎಂದಿದ್ದಾರೆ.

ಮಂಡ್ಯ, (ಸೆ.16): ಕರ್ನಾಟಕದ ದುಡ್ಡೆಲ್ಲ ಶ್ರೀಲಂಕಾ ಕ್ಯಾಸಿನೋಗೆ ಹೋಗುತ್ತಿದೆ. ಕ್ಯಾಸಿನೋವನ್ನು ಕರ್ನಾಟಕದಲ್ಲೇ ಓಪನ್ ಮಾಡಿ ನಮ್ಮ ದುಡ್ಡು ನಮ್ಮಲ್ಲೆ ಉಳಿಸಿ ಎಂದು ಜೆಡಿಎಸ್ ಶಾಸಕ ಸುರೇಶ್ ಗೌಡ ಹೇಳಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇಂದು (ಬುಧವಾರ) ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಲ್ಲಿ ಯಾರ್ಯಾರು ಹೆಚ್ಚಿಗೆ ದುಡ್ಡು ಮಾಡಿದ್ದರೋ ಅವರೆಲ್ಲ ಅಲ್ಲಿ ದುಡ್ಡು ಕಳೆಯುತ್ತಿದ್ದಾರೆ. ಕರ್ನಾಟಕದ ದುಡ್ಡೆಲ್ಲ ಶ್ರೀಲಂಕಾ ಕ್ಯಾಸಿನೋಗೆ ಹೋಗುತ್ತಿದೆ. ಕ್ಯಾಸಿನೋವನ್ನು ಕರ್ನಾಟಕದಲ್ಲೇ ಓಪನ್ ಮಾಡಿ ನಮ್ಮ ದುಡ್ಡು ನಮ್ಮಲ್ಲೆ ಉಳಿಸಿ ಎಂದು ಸರ್ಕಾರ ಸಲಹೆ ಕೊಡಬೇಕೆಂದಿದ್ದೇನೆ ಎಂದರು.

ಡ್ರಗ್ಸ್ ಮಾಫಿಯಾದ ಸಂಪೂರ್ಣ ಚಿತ್ರಣ

ರಾಜಕಾರಣಿಗಳು ಡ್ರಗ್ಸ್ ತೆಗೆದುಕೊಳ್ಳುವ ಬಗ್ಗೆ ನನಗೆ ಗೊತ್ತಿಲ್ಲ. ನಾವು ಜಮೀರ್ ಅವರನ್ನು ಟಾರ್ಗೆಟ್ ಮಾಡುತ್ತಿಲ್ಲ. ನಾವು ಕಾಂಗ್ರೆಸ್ ಪರ ಇದ್ದು ಸರ್ಕಾರ ಮಾಡಿದ್ದವರು. ನಾವು ಯಾಕೆ ಅವರನ್ನು ಟಾರ್ಗೆಟ್ ಮಾಡ್ತೀವಿ ಎಂದು ಇದೆಲ್ಲವೂ ಊಹಾಪೋಹಗಳು ಎಂದು ಸ್ಪಷ್ಟಪಡಿಸಿದರು.

ಇನ್ನು ರಾಜ್ಯ ಬಿಜೆಪಿ ಸರ್ಕಾರ ತನ್ನ ತಪ್ಪುಗಳನ್ನು ಮುಚ್ಚಿಕೊಳ್ಳಲು ಕೆಜಿ ಹಳ್ಳಿ, ಡಿಜೆ ಹಳ್ಳಿ ಅಂತ ಶುರು ಮಾಡಿತ್ತು. ಈಗ ಅದು ಮುಗಿದ ಬಳಿಕ ಡ್ರಗ್ಸ್ ವಿಚಾರ ಶುರು ಮಾಡಿದೆ. ರಾಜ್ಯದಲ್ಲಿ ಕಷ್ಟಕರ ಸಮಸ್ಯೆಗಳಿವೆ. ಆದರೆ ಜನರ ಗಮನ ಬೇರೆಡೆ ಸೆಳೆಯಲು ಈ ರೀತಿ ಮಾಡಲಾಗುತ್ತಿದೆ ಎಂದು ಹೇಳಿದರು.

"