ಡಿಕೆಶಿ ವಿರುದ್ಧ ಸಿಬಿಐ ತನಿಖೆ ಅನುಮತಿ ವಾಪಸ್; ಸರ್ಕಾರದ ಕ್ರಮ ಪ್ರಶ್ನಿಸಿ ಯತ್ನಾಳ್ ಹೈಕೋರ್ಟ್ ಮೊರೆ
ಆದಾಯಕ್ಕೂ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಡಿಸಿಎಂ ಡಿಕೆ ಶಿವಕುಮಾರ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆದಿರುವ ರಾಜ್ಯ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೈಕೋರ್ಟ್ ಮೊರೆ ಹೋಗಿದ್ದಾರೆ.
ವಿಜಯಪುರ (ಡಿ.16): ಆದಾಯಕ್ಕೂ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಡಿಸಿಎಂ ಡಿಕೆ ಶಿವಕುಮಾರ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆದಿರುವ ರಾಜ್ಯ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೈಕೋರ್ಟ್ ಮೊರೆ ಹೋಗಿದ್ದಾರೆ.
ಹೈಕೋರ್ಟ್ ನಲ್ಲಿ ಈ ಕುರಿತು ನಡೆದಿರೋ ವಿಚಾರಣೆ ಬಗ್ಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಮ್ಮ ಟ್ವೀಟರ್ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಸಿಬಿಐ ಕುಣಿಕೆಯಿಂದ ಡಿಕೆಶಿ ಸದ್ಯಕ್ಕೆ ಬಚಾವ್; ಮುಂದಿದೆ ಸವಾಲು!
ಡಿಕೆಶಿ ವಿರುದ್ಧದ ಸಿಬಿಐ ತನಿಖೆಗೆ ಅನುಮತಿ ವಾಪಸಾತಿ ವಿರುದ್ಧ ನಾನು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯ ನಡೆಸಿದೆ ಎಂದಿದ್ದಾರೆ. ಇದೇ ವೇಳೆ ಸಿಎಂ ಸಿದ್ದರಾಮಯ್ಯರ ವಿರುದ್ಧ ಟ್ವೀಟ್ ಮೂಲಕ ಕಿಡಿ ಕಾರಿರುವ ಅವರು, ಮಾತೆತ್ತಿದರೆ ಭ್ರಷ್ಟಾಚಾರದ ವಿರುದ್ಧ ದಿನಂಪ್ರತಿ ಮಾತನಾಡುವ ಸಿಎಂ ಸಿದ್ದರಾಮಯ್ಯ ಸಿಬಿಐ ಅನುಮತಿ ಹಿಂಪಡೆಯುವ ಮೂಲಕ ಭ್ರಷ್ಟಾಚಾರಿಯ ರಕ್ಷಣೆಗೆ ನಿಂತಿರುವುದು ದುರಂತ ಎಂದಿದ್ದಾರೆ.