Asianet Suvarna News Asianet Suvarna News

ಕೇಂದ್ರ ಸರ್ಕಾರ ನಮ್ಮ ಗ್ಯಾರಂಟಿ ಕದ್ದಿದೆ: ಸಿಎಂ ಟೀಕೆ

ಕೇಂದ್ರದಿಂದ ನಾಡಿನ ಜನಕ್ಕೆ ಮಾಡಿರುವ ಅನ್ಯಾಯವನ್ನು ಸಮರ್ಥನೆ ಮಾಡುವ ಬಿಜೆಪಿ ನಾಯಕರಿಗೆ ಪ್ರಧಾನಿ ನರೇಂದ್ರ ಮೋದಿ ಮುಂದೆ ರಾಜ್ಯದ ಪರವಾಗಿ ಮಾತನಾಡುವ ತಾಕತ್ತಿಲ್ಲ. ಏಳು ಕೋಟಿ ಕನ್ನಡಿಗರಿಗೆ ಆಗಿರುವ ಅನ್ಯಾಯವನ್ನು ಸಮರ್ಥಿಸಿಕೊಳ್ಳಲು ನಾಚಿಕೆಯಾಗುವುದಿಲ್ಲವೇ: ಸಿದ್ದರಾಮಯ್ಯ

Central Government Stolen Congress Guarantee Schemes Says CM Siddaramaiah grg
Author
First Published Mar 1, 2024, 6:55 AM IST

ವಿಧಾನಸಭೆ(ಮಾ.01):  ಸಾರ್ವಜನಿಕ ಸಭೆಗಳಲ್ಲಿ ಮಾತ್ರವಲ್ಲದೇ ಸದನದ ಲ್ಲಿಯೂ ಕೇಂದ್ರ ಸರ್ಕಾರ ವಿರುದ್ಧ ಟೀಕಾಪ್ರಹಾರ ಮುಂದುವರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರವು 'ಮೋದಿ ಗ್ಯಾರಂಟಿ' ಎಂದು ನಮ್ಮ ಗ್ಯಾರಂಟಿಯನ್ನು ಕದ್ದಿದೆ ಎಂದು ಹರಿಹಾಯ್ದಿದ್ದಾರೆ. 

ಗುರುವಾರ ಪ್ರತಿಪಕ್ಷ ಸಭಾತ್ಯಾಗದ ನಡುವೆ ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡಿದ ಅವರು, ಪಿಎಂ ಆವಾಸ್ ಯೋಜನೆಯಡಿ 5-0 ಲಕ್ಷ ರು. ರಾಜ್ಯ ಸರ್ಕಾರ ನೀಡಿದರೆ, ಕೇಂದ್ರ 1.50 ಲಕ್ಷ ರು. ನೀಡುತ್ತದೆ. ಅದರ ಜೊತೆಗೆ 1.38 ಲಕ್ಷ ಬಿಎಸ್ಪಿ ಸೇರಿ ಒಂದು ಮನೆಗೆ ಕೇಂದ್ರ ಸರ್ಕಾರ ನೀಡುವುದು ಕೇವಲ 12 ಸಾವಿರ ರು. ಮಾತ್ರ. ಬಡವರ ಮನೆ ನಿರ್ಮಾಣದ ಹೆಸರನ್ನಿಸಿಕೊಂಡು ಮೋದಿ ಗ್ಯಾರಂಟಿ ಎಂದು ಪ್ರಚಾರ ಮಾಡಿಕೊಳ್ಳುತ್ತಿದ್ದಾರೆ. ಇದರಲ್ಲಿ ನಮ್ಮ ಹೆಸರಿಲ್ಲ, ಇದು ಯಾವ ನ್ಯಾಯ? ಮೋದಿ ಗ್ಯಾರಂಟ ಎಂದು ನಮ್ಮ ಗ್ಯಾರಂಟಿ ಕದ್ದಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಕೇಂದ್ರದ ಪರಿಸರ ಮಂಡಳಿ ಅನುಮತಿ ನೀಡಿದ್ರೆ ನಾಳೆಯಿಂದಲೇ ಕಳಸಾ ಬಂಡೂರಿ ಕಾಮಗಾರಿ ಆರಂಭ: ಸಿಎಂ ಸಿದ್ದು

ಕೇಂದ್ರ ಸರ್ಕಾರದ ಬಜೆಟ್ ಗಾತ್ರ 45 ಲಕ್ಷ ಕೋಟಿ ರು. ಇದ್ದರೂ ನಮಗೆ 50,257 ಕೋಟಿ ರು. ಮಾತ್ರ ಕೊಟ್ಟಿದ್ದಾರೆ. ಅದರಲ್ಲಿ 13 ಸಾವಿರ ಕೋಟಿ ರು. ಕೇಂದ್ರ ಪುರಸ್ಕೃತ ಯೋಜನೆಗಳೂ ಸೇರಿವೆ. ಅದರಲ್ಲಿ ಯೂ ಕೇಂದ್ರದ ಪಾಲು ಕಡಿಮೆ ಇದ್ದು, ನಮ್ಮ ಪಾಲು ಹೆಚ್ಚಿದೆ. 2013 ಮಾರ್ಚ್ ವರೆಗೆ 2067 ಕಿಮೀ ರಸ್ತೆಗೆಳಾಗಿವೆ. ಬೇರೆ ರಾಜ್ಯಗಳಲ್ಲಿ ಇದಕ್ಕಿಂತ ಹೆಚ್ಚಾಗಿದ್ದು 

ಬಿಜೆಪಿಗರಿಗೆ ನಾಚಿಕೆಯಾಗುವುದಿಲ್ಲವೇ?: 

ಕೇಂದ್ರದಿಂದ ನಾಡಿನ ಜನಕ್ಕೆ ಮಾಡಿರುವ ಅನ್ಯಾಯವನ್ನು ಸಮರ್ಥನೆ ಮಾಡುವ ಬಿಜೆಪಿ ನಾಯಕರಿಗೆ ಪ್ರಧಾನಿ ನರೇಂದ್ರ ಮೋದಿ ಮುಂದೆ ರಾಜ್ಯದ ಪರವಾಗಿ ಮಾತನಾಡುವ ತಾಕತ್ತಿಲ್ಲ. ಏಳು ಕೋಟಿ ಕನ್ನಡಿಗರಿಗೆ ಆಗಿರುವ ಅನ್ಯಾಯವನ್ನು ಸಮರ್ಥಿಸಿಕೊಳ್ಳಲು ನಾಚಿಕೆಯಾಗುವುದಿಲ್ಲವೇ ಎಂದು ಸಿದ್ದರಾಮಯ್ಯ

1.40 ಸಾವಿರ ಕೋಟಿ ರು. ರಾಜ್ಯದಿಂದ ಕೇಂದ್ರ ಸರ್ಕಾರಕ್ಕೆ ತೆರಿಗೆ ಹೋಗುತ್ತದೆ. 100 ರು. ತೆರಿಗೆ ಕೊಟ್ಟರೆ ನಮಗೆ 12 ರು. ಮಾತ್ರ ಕೇಂದ್ರದಿಂದ ತೆರಿಗೆ ಬರುತ್ತಿದೆ. ಇದನ್ನು ಸಮರ್ಥಿಸಿಕೊಳ್ಳಲು ಬಿಜೆಪಿಗೆ ನಾಚಿಕೆಯಾಗಬೇಕು. ರಾಜ್ಯದ ಇತಿಹಾಸದಲ್ಲಿ ಮೊದಲ ಸಲ ಬಜೆಟ್ ಓದುವಾಗ ಪ್ರತಿಪಕ್ಷ ದವರು ಗೈರಾಗಿದ್ದಾರೆ. ಇವರಿಗೆ ರಾಜ್ಯದ ಆರ್ಥಿಕತೆ ಬಗ್ಗೆ ಕಾಳಜಿ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

Follow Us:
Download App:
  • android
  • ios