ಬಿಹಾರದಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕೇಂದ್ರ ಸರಕಾರವು ತನ್ನ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಗೆದ್ದಿದೆಯೇ ಹೊರತು ಪ್ರಜಾ ಪ್ರಭುತ್ವ ವ್ಯವಸ್ಥೆಯಡಿ ಗೆದ್ದಿಲ್ಲ ಎಂದು ಸಚಿವ ಕೆ.ಎಚ್.ಮುನಿಯಪ್ಪ ದೂರಿದರು.

ಶಿಡ್ಲಘಟ್ಟ (ನ.19): ಬಿಹಾರದಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕೇಂದ್ರ ಸರಕಾರವು ತನ್ನ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಗೆದ್ದಿದೆಯೇ ಹೊರತು ಪ್ರಜಾ ಪ್ರಭುತ್ವ ವ್ಯವಸ್ಥೆಯಡಿ ಗೆದ್ದಿಲ್ಲ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ದೂರಿದರು. ನಗರದ ಕಾಂಗ್ರೆಸ್ ಭವನದಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಹಮ್ಮಿಕೊಂಡಿದ್ದ ಓಟ್ ಚೋರ್ ಗದ್ದಿ ಛೋಡ್ ಸಹಿ ಸಂಗ್ರಹ ಅಭಿಯಾನ ಕಾರ್ಯಕ್ರಮದಲ್ಲಿ ಕಾರ್ಯಕರ್ತರನ್ನು ಉದೇಶಿಸಿ ಮಾತನಾಡಿ, ಚುನಾವಣೆ ಹತ್ತಿರದಲ್ಲಿದ್ದಾಗ ಕೇಂದ್ರ ಸರ್ಕಾರವು ಬಿಹಾರದ 1.25 ಕೋಟಿ ಕುಟುಂಬಗಳ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ತಲಾ 10 ಸಾವಿರ ರು.ಗಳನ್ನು ಜಮಾ ಮಾಡಿತು. ಇದು ಅಧಿಕಾರದ ದುರ್ಬಳಕೆ ಅಲ್ಲವೇ ಎಂದು ಪ್ರಸ್ನಿಸಿದರು.

ಕಾಂಗ್ರೆಸ್ ಗೆಲ್ಲಬೇಕು: ಶಿಡ್ಲಘಟ್ಟ ಕ್ಷೇತ್ರವು ಕಾಂಗ್ರೆಸ್ಸಿನ ಭದ್ರಕೋಟೆ. ಮಾಜಿ ಸಚಿವ ವಿ.ಮುನಿಯಪ್ಪ ಅವರು ಈ ಕ್ಷೇತ್ರದಲ್ಲಿ ಕಾಂಗ್ರೆಸ್ಸನ್ನು ಭದ್ರವಾಗಿ ಕಟ್ಟಿ ಬೆಳೆಸಿದ್ದಾರೆ. ನೀವೆಲ್ಲರೂ ಅವರಿಗೆ ಬೆಂಬಲವಾಗಿ ನಿಂತಿದ್ದೀರಿ. ಕಳೆದ ಸಲ ಏನೋ ಸಣ್ಣ ಪುಟ್ಟ ಸಮಸ್ಯೆ ಗೊಂದಲದಿಂದ ಆದಂತೆ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಆಗಬಾರದು ಎಂದು ಹೇಳಿದರು. ಕೆಪಿಸಿಸಿ ಸಂಯೋಜಕ ರಾಜೀವ್ ಗೌಡ ಮಾತನಾಡಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೇಶವರೆಡ್ಡಿ, ಉಸ್ತುವಾರಿ ಉದಯ್ ಶಂಕರ್, ಕೆಪಿಸಿಸಿ ಉಪಾಧ್ಯಕ್ಷ ಕೃಷ್ಣಂರಾಜು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಸಹನಾ ರಾಜೀವ್ ಗೌಡ, ಕೃಷ್ಣಾರೆಡ್ಡಿ, ಡಿಸಿಸಿ ನಿರ್ದೇಶಕ ಡಾಲ್ಫಿನ್ ನಾಗರಾಜ್ ಇನ್ನಿತರರು ಹಾಜರಿದ್ದರು.

ಕಾಂಗ್ರೆಸ್ ಒಗ್ಗಟ್ಟಾಗಿದೆ: ಮಾಜಿ ಸಹಕಾರ ಸಚಿವ ರಾಜಣ್ಣನವರು ನವೆಂಬರ್‌ನಲ್ಲಿ ಕ್ರಾಂತಿಯಾಗಲಿದೆ ಎಂದಿರುವುದು ಅವರ ವೈಯುಕ್ತಿ ಅಭಿಪ್ರಾಯವಾಗಿದೆ. ಇದಕ್ಕೆ ನಾನು ಯಾವೂದೇ ರೀತಿ ಪ್ರತಿಕ್ರಿಯಿಸುವುದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಒಗ್ಗಟ್ಟಾಗಿದ್ದೇವೆ. ಮುಂಬರಲಿರುವ ಸ್ಥಳೀಯ ಸಂಸ್ಥೆಗಳ ಹಾಗೂ ಪಂಚಾಯಿತಿ ಚುನಾವಣೆಯನ್ನು ಎದುರಿಸಲು ಸಿದ್ದರಾಗಿದ್ದೇವೆ. ನಮ್ಮ ಪಕ್ಷವು ನುಡಿದಂತೆ ನಡೆಯುವ ಮೂಲಕ ಚುನಾವಣೆಗೆ ಮುನ್ನ ನೀಡಿದ್ದ ಪ್ರಶ್ನೆಯೊಂದಕ್ಕೆ ಮುಖ್ಯ ಮಂತ್ರಿಗಳ ಬದಲಾವಣೆ ಬಗ್ಗೆ ಹೈ ಕಮಾಂಡ್ ಅಂತಿಮ ನಿರ್ಧಾರವಾಗಲಿದೆ. ಈಗ ರಾಜ್ಯದಲ್ಲಿ ಸಚಿವ ಸಂಪುಟ ಪುನರ್ ರಚನೆಯಾಗಲಿದೆ. ಜಿಲ್ಲೆಯ 6 ವಿಧಾನ ಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಶಾಸಕರು ಆಯ್ಕೆಯಾಗಿದ್ದು ಎಲ್ಲಾ ಶಾಸಕರು ಸಚಿವ ಸ್ಥಾನಕ್ಕೆ ಆರ್ಹರಾಗಿದ್ದಾರೆ. ೀ ಬಗ್ಗೆ ಹೈಮಾಂಡ್ ನಿರ್ಧಾರ ಕೈಗೊಳ್ಳಲಿದೆ. ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರ ಬದಲಾವಣೆ ಪ್ರಸ್ತವನೆ ಕೆ.ಪಿ.ಸಿ.ಸಿ. ಮುಂದೆ ಇಲ್ಲ ಎಂದು ಸ್ವಷ್ಟಪಡಿಸಿದರು.

ಸ್ಥಳೀಯರಿಗೆ ಜಿಲ್ಲಾ ಉಸ್ತುವಾರಿ ನೀಡಲಿ

ಸಚಿವ ಸಂಪುಟ ಪುನರ್ ರಚನೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನವನ್ನು ಸ್ಥಳೀಯರಿಗೆ ನೀಡ ಬೇಕೆಂಬುವುದು ಎಲ್ಲಾರ ಒತ್ತಾಸೆಯಾಗಿದೆ. ಸಚಿವ ಸ್ಥಾನಕ್ಕೆ ನಾನು ಸಹ ಆಶಾ ಭಾವನೆ ಹೊಂದಿದ್ದೇನೆ. ಈ ಬಗ್ಗೆ ಎಲ್ಲವನ್ನು ಪಕ್ಷದ ಹೈ ಕಮಾಂಡ್ ತೀರ್ಮಾನಿಸಲಿದೆ. ಅವರ ತೀರ್ಮಾನಕ್ಕೆ ನಾವೆಲ್ಲಾ ಬದ್ದರಾಗಿದ್ದೇವೆ. ಜಿಲ್ಲೆಯಲ್ಲಿ ಯಾರಿಗೂ ಸಚಿವ ಸ್ಥಾನ ಸಿಕ್ಕಿರಲಿಲ್ಲ. ಕಳೆದ ಎರಡೂವರೆ ವರ್ಷದಲ್ಲಿ ಜಿಲ್ಲೆಯಲ್ಲಿ ಸಾಕಷ್ಟು ಅಭಿವೃದ್ದಿ ಕಾರ್ಯಗಳು ಎಲ್ಲಾ ಕ್ಷೇತ್ರದಲ್ಲೂ ಅಗಿದೆ. ಅದರೂ ಇನ್ನು ಹಲವಾರು ಅಭಿವೃದ್ದಿ ಕಾರ್ಯಕ್ರಮಗಳಿಗೆ ಸ್ಥಳೀಯರು ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ನೀಡುವುದು ಅವಶ್ಯವಿದೆ ಎಂದರು.