Asianet Suvarna News Asianet Suvarna News

ಕಲುಷಿತ ನೀರಿಂದ ಸಾವಾದರೆ ಸಿಇಒ ಸಸ್ಪೆಂಡ್‌: ಸಿದ್ದರಾಮಯ್ಯ ಎಚ್ಚರಿಕೆ

ರಾಜ್ಯದಲ್ಲಿ ಇನ್ನು ಮುಂದೆ ಕಲುಷಿತ ನೀರು ಸೇವನೆಯಿಂದ ಮರಣ ಪ್ರಕರಣಗಳು ಮರುಕಳಿಸಿದರೆ ಸಂಬಂಧಿಸಿದ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಗಳನ್ನು ನೇರವಾಗಿ ಹೊಣೆಗಾರರನ್ನಾಗಿಸಿ ಅಮಾನತು ಮಾಡಲಾಗುವುದು ಹಾಗೂ ನಗರಸಭೆಗಳ ಆಯುಕ್ತರ ಮೇಲೆ ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

CEO suspended if death due to contaminated water Says CM Siddaramaiah gvd
Author
First Published Aug 23, 2023, 1:18 PM IST

ಬೆಂಗಳೂರು (ಆ.23): ರಾಜ್ಯದಲ್ಲಿ ಇನ್ನು ಮುಂದೆ ಕಲುಷಿತ ನೀರು ಸೇವನೆಯಿಂದ ಮರಣ ಪ್ರಕರಣಗಳು ಮರುಕಳಿಸಿದರೆ ಸಂಬಂಧಿಸಿದ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಗಳನ್ನು ನೇರವಾಗಿ ಹೊಣೆಗಾರರನ್ನಾಗಿಸಿ ಅಮಾನತು ಮಾಡಲಾಗುವುದು ಹಾಗೂ ನಗರಸಭೆಗಳ ಆಯುಕ್ತರ ಮೇಲೆ ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ, ನಗರಾಭಿವೃದ್ಧಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಉನ್ನತ ಅಧಿಕಾರಿಗಳೊಂದಿಗೆ ಕುಡಿಯುವ ನೀರಿನ ಸಮಸ್ಯೆ ಕುರಿತು ಮಂಗಳವಾರ ಗೃಹ ಕಚೇರಿ ಕೃಷ್ಣಾದಲ್ಲಿ ಮಹತ್ವದ ಸಭೆ ನಡೆಸಿದ ಮುಖ್ಯಮಂತ್ರಿ ಅವರು, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಬಡವರು ವಾಸಿಸುವ ಕೊಳಗೇರಿಗಳಲ್ಲಿ ಕುಡಿಯುವ ನೀರಿನ ಪೈಪ್‌ಲೈನ್‌ ಹಾಗೂ ಚರಂಡಿ ನೀರಿನ ಪೈಪುಗಳು ಪ್ರತ್ಯೇಕವಾಗಿರುವುದನ್ನು ಖಾತರಿ ಪಡಿಸಬೇಕು. ಪ್ರತ್ಯೇಕ ಇಲ್ಲದಿರುವ ಸ್ಥಳಗಳನ್ನು ಗುರುತಿಸಿ ರಾಜ್ಯದಲ್ಲಿ ಈ ಕುರಿತು ನೈರ್ಮಲ್ಯ ಅಭಿಯಾನ ಕೈಗೊಂಡು 15 ದಿನಗಳಲ್ಲಿ ವರದಿ ಸಲ್ಲಿಸಬೇಕೆಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

ಚಂದ್ರಯಾನ-3 ಇಸ್ರೋ ತಂಡದಲ್ಲಿ ಬಾಳೆಹೊನ್ನೂರಿನ ಯುವತಿ: ರಂಭಾಪುರಿ ಶ್ರೀ ಶುಭಹಾರೈಕೆ

ರಾಜ್ಯದಲ್ಲಿ ಕಲುಷಿತ ನೀರಿನ ಸೇವನೆಯಿಂದಾಗಿ 13-14 ಜನ ಸಾವಿಗೀಡಾಗಿದ್ದು, ಚಿತ್ರದುರ್ಗದಲ್ಲಿಯೇ ಆರೇಳು ಜನ ಅಸುನೀಗಿದ್ದಾರೆ. ಹಾಸ್ಟೆಲ್‌ಗಳಲ್ಲೂ ವಿದ್ಯಾರ್ಥಿಗಳು ಕಲುಷಿತ ನೀರು ಕುಡಿದು ಆಸ್ಪತ್ರೆ ಸೇರಿದ ಪ್ರಕರಣಗಳು ಸಂಭವಿಸಿವೆ. ಕೆಲವೆಡೆ ನಿರ್ವಹಣೆ ಇಲ್ಲದೆ ಇರುವುದರಿಂದ, ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ ರೀತಿ ಅವಘಡಗಳು ಸಂಭವಿಸುತ್ತದೆ. ಇದನ್ನು ತಪ್ಪಿಸಲು ಸಾಧ್ಯವಿದ್ದು ಉನ್ನತ ಅಧಿಕಾರಿಗಳು ಈ ನಿಟ್ಟಿನಲ್ಲಿ ಅಗತ್ಯ ಕ್ರಮ ವಹಿಸಬೇಕು. 

ಎಲ್ಲೆಡೆ ನೀರಿನ ಟ್ಯಾಂಕುಗಳ ಸ್ವಚ್ಛತಾ ಕಾರ್ಯ, ಪೈಪ್‌ಲೈನ್‌ ಸರಿಪಡಿಸುವುದು ತುರ್ತಾಗಿ ಆಗಬೇಕು. ಗ್ರಾಮೀಣಾಭಿವೃದ್ಧಿ, ಆರೋಗ್ಯ, ಪೌರಾಡಳಿತ ಹಾಗೂ ನಗರಾಭಿವೃದ್ಧಿ ಈ ನಾಲ್ಕು ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಒಟ್ಟಾರೆ ರಾಜ್ಯದಲ್ಲಿ ಕಲುಷಿತ ನೀರು ಸೇವನೆಯಿಂದ ಮರಣ ಪ್ರಕರಣಗಳು ಮರುಕಳಿಸಬಾರದು. ಮರುಕಳಿಸಿದರೆ ಆಯಾ ಜಿ.ಪಂ. ಸಿಇಒಗಳನ್ನು ಹೊಣೆಯಾಗಿಸಿ ಅಮಾನತುಗೊಳಿಸಲಾಗುವುದು, ನಗರಸಭೆ ಆಯುಕ್ತರುಗಳ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

39 ತಾಲ್ಲೂಕಿನಲ್ಲಿ ನೀರಿನ ಅಭಾವ: ರಾಜ್ಯದ 39 ತಾಲ್ಲೂಕುಗಳಲ್ಲಿ ಕುಡಿಯುವ ನೀರಿನ ಅಭಾವವಿದೆ. 121 ಹಳ್ಳಿಗಳಲ್ಲಿ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಇದಕ್ಕೆ 86 ಕೋಟಿ ರು. ಅನುದಾನ ಅಗತ್ಯವಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಸಭೆಯ ಗಮನಕ್ಕೆ ತಂದರು. ಇದಕ್ಕೆ ಮುಖ್ಯಮಂತ್ರಿ ಅವರು ಅಗತ್ಯ ಅನುದಾನ ಬಿಡುಗಡೆ ಮೂಲಕ ಎಲ್ಲಿಯೂ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಎಚ್ಚರಿಕೆ ವಹಿಸಬೇಕು. ನೀರಿನ ಸ್ವಚ್ಛತೆ ಬಗ್ಗೆ ಆದ್ಯತೆ ವಹಿಸಿ ಜನರಲ್ಲೂ ಈ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.

ಚಂದ್ರಯಾನ-3 ಯಶಸ್ವಿಯಾಗಲಿ: ರಾಯಚೂರಿನ ಪುಟಾಣಿ ಮಕ್ಕಳಿಂದ ಶಿವಲಿಂಗಕ್ಕೆ ಹಾಲಿನ ಅಭಿಷೇಕ

ನೈರ್ಮಲ್ಯಕ್ಕೆ ಕನಿಷ್ಠ ಅನುದಾನಕ್ಕೆ ಮನವಿ: ಸಭೆಯಲ್ಲಿ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್‌, ಸಹಕಾರ ಸಚಿವ ಕೆ.ಎನ್‌.ರಾಜಪ್ಪ, ಪೌರಾಡಳಿತ ಸಚಿವ ರಹೀಮ ಖಾನ್‌, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ.ರಜನೀಶ್‌ ಗೋಯಲ್‌ ಸೇರಿದಂತೆ ವಿವಿಧ ಇಲಾಖೆಗಳ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.

Follow Us:
Download App:
  • android
  • ios