ಇತ್ತೀಚಿನ ವರ್ಷಗಳಲ್ಲಿ ಸಿಸೇರಿಯನ್ ಹೆರಿಗೆ ಹೆಚ್ಚಳವಾಗಲು ಗರ್ಭಿಣಿ ಮಹಿಳೆಯರ ಭಯ, ಆತಂಕ ಸೇರಿದಂತೆ ಕುಟುಂಬದ ಸದಸ್ಯರೂ ಕಾರಣರಾಗಿದ್ದಾರೆ. ಈ ಬಗ್ಗೆ ಅವರಿಗೆ ಅರಿವು ಮೂಡಿಸುವ ಕೆಲಸ ಆಗಬೇಕು ಎಂದು ದಿನೇಶ್ ಗುಂಡೂರಾವ್ ಹೇಳಿದರು.
ಸುವರ್ಣಸೌಧ (ಡಿ.09): ಇತ್ತೀಚಿನ ವರ್ಷಗಳಲ್ಲಿ ಸಿಸೇರಿಯನ್ ಹೆರಿಗೆ ಹೆಚ್ಚಳವಾಗಲು ಗರ್ಭಿಣಿ ಮಹಿಳೆಯರ ಭಯ, ಆತಂಕ ಸೇರಿದಂತೆ ಕುಟುಂಬದ ಸದಸ್ಯರೂ ಕಾರಣರಾಗಿದ್ದಾರೆ. ಈ ಬಗ್ಗೆ ಅವರಿಗೆ ಅರಿವು ಮೂಡಿಸುವ ಕೆಲಸ ಆಗಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಜೆಡಿಎಸ್ ಸದಸ್ಯ ಗೋವಿಂದರಾಜು ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಕಳೆದ ಐದು ವರ್ಷಗಳಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಶೇ. 34-38, ಖಾಸಗಿ ಆಸ್ಪತ್ರೆಗಳಲ್ಲಿ ಶೇ.62ರಷ್ಟು ಹೆರಿಗೆ ನಡೆಯುತ್ತಿದೆ. ದೊಡ್ಡ ನಗರಗಳಲ್ಲಿ ಸಿಸೇರಿಯನ್ ಸಂಖ್ಯೆ ಜಾಸ್ತಿಯಾಗಿದೆ. ಯಾಕೆ ಸಿಸೇರಿಯನ್ ಹೆರಿಗೆ ಜಾಸ್ತಿಯಾಗುತ್ತಿದೆ ಎಂಬುದನ್ನು ತಿಳಿಯಲು ಪ್ರಾಯೋಗಿಕವಾಗಿ ತುಮಕೂರು ಜಿಲ್ಲೆಯಲ್ಲಿ ಆಡಿಟ್ ಮಾಡಲಾಗುತ್ತದೆ ಎಂದರು. ಇನ್ನು, ಖಾಸಗಿ ಆಸ್ಪತ್ರೆಗಳು ಹಣ ವಸೂಲಿಗಾಗಿ ಅನಗತ್ಯವಾಗಿ ಹೆರಿಗೆ ಮಾಡಿರುವ ಕುರಿತು ಯಾವುದೇ ದೂರು ಬಂದಿಲ್ಲ ಎಂದು ಸಚಿವರು ತಿಳಿಸಿದರು.
ಮೆಕ್ಕೆಜೋಳಕ್ಕೆ ಕೇಂದ್ರ ಬೆಂಬಲ ಬೆಲೆ ನೀಡುತ್ತಿಲ್ಲ: ಯಾವುದೇ ಸರ್ಕಾರ ಇರಲಿ, ಸಮಸ್ಯೆ ಇಲ್ಲದೆ ಇರುವುದಿಲ್ಲ. ಅದನ್ನೇ ಹೇಳುವುದು ದೊಡ್ಡ ವಿಷಯವೇನಲ್ಲ. ಆದರೆ, ಎಲ್ಲಾ ಸಮಸ್ಯೆಗಳಿಗೆ ಪರಿಹಾರ ನೀಡುತ್ತಿರುವುದು ನಮ್ಮ ಸರ್ಕಾರ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ನಗರದ ಖಾಸಗಿ ಹೋಟೆಲ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯಕ್ಕೆ ದ್ರೋಹ ಮಾಡುತ್ತಿರುವುದು ಕೇಂದ್ರದ ಬಿಜೆಪಿ ಸರ್ಕಾರ. ಕಬ್ಬು, ಮೆಕ್ಕೆಜೋಳಕ್ಕೆ ಕೇಂದ್ರ ಬೆಂಬಲ ಬೆಲೆ ನೀಡುತ್ತಿಲ್ಲ. ಯಾವುದಕ್ಕಾಗಿ ಕೇಂದ್ರ ಸರ್ಕಾರ ಇದೆ. ಬೆಂಬಲ ಬೆಲೆ ಕೇಂದ್ರ ಸರ್ಕಾರ ನೀಡಬೇಕು. ಆದರೆ, ಕೇಂದ್ರ ಸರ್ಕಾರ ರಾಜ್ಯದ ಮೇಲೆ ಮಲತಾಯಿ ಧೋರಣೆ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು. ನಮ್ಮಲ್ಲಿ ಯಾವುದೇ ಬಣ ರಾಜಕಾರಣ ಇಲ್ಲ. ಉತ್ತರ ಕರ್ನಾಟಕ ಬಗ್ಗೆ ಚರ್ಚೆ ಆಗಬೇಕು. ಆಗ ಬಿಜೆಪಿ ಬಂಡವಾಳ ಗೊತ್ತಾಗುತ್ತದೆ ಎಂದರು.
ರಾಜ್ಯಕ್ಕೆ ದ್ರೋಹ ಮಾಡುತ್ತಿರುವುದು ಬಿಜೆಪಿ
ಯಾವುದೇ ಸರ್ಕಾರ ಇರಲಿ, ಸಮಸ್ಯೆ ಇಲ್ಲದೆ ಅಂತೂ ಇರುವುದಿಲ್ಲ. ಯಾವುದೇ ಸರ್ಕಾರ ಇದ್ದರೂ ಸಮಸ್ಯೆಗಳು ಇದೆ ಅಂತ ಹೇಳುವುದು ದೊಡ್ಡ ವಿಷಯವೇನಲ್ಲ. ಆದರೆ, ಎಲ್ಲಾ ಸಮಸ್ಯೆಗಳಿಗೆ ಪರಿಹಾರ ನೀಡುತ್ತಿರುವುದು ನಮ್ಮ ಸರ್ಕಾರ ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಹೇಳಿದರು. ಅಧಿವೇಶನದಲ್ಲಿ ಪಾಲ್ಗೊಳ್ಳುವ ಮುನ್ನ ಬೆಳಗಾವಿ ಖಾಸಗಿ ಹೋಟೆಲ್‌ನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯಕ್ಕೆ ದ್ರೋಹ ಮಾಡುತ್ತಿರುವುದು ಕೇಂದ್ರದ ಬಿಜೆಪಿ ಸರ್ಕಾರ. ಕಬ್ಬು, ಮೆಕ್ಕೆಜೋಳಕ್ಕೆ ಕೇಂದ್ರ ಬೆಂಬಲ ಬೆಲೆ ನೀಡುತ್ತಿಲ್ಲ. ಯಾವುದಕ್ಕಾಗಿ ಕೇಂದ್ರ ಸರ್ಕಾರ ಇದೆ. ಬೆಂಬಲ ಬೆಲೆ ಕೇಂದ್ರ ಸರ್ಕಾರ ನೀಡಬೇಕು. ಆದರೆ, ಕೇಂದ್ರ ಸರ್ಕಾರ ರಾಜ್ಯದ ಮೇಲೆ ಮಲತಾಯಿ ಧೋರಣೆ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು. ನಮ್ಮಲ್ಲಿ ಯಾವುದೇ ಬಣ ರಾಜಕಾರಣ ಇಲ್ಲ ಎಂದ ದಿನೇಶ ಗುಂಡೂರಾವ್, ಉತ್ತರ ಕರ್ನಾಟಕ ಬಗ್ಗೆ ಚರ್ಚೆ ಆಗಬೇಕು. ಆಗ ಬಿಜೆಪಿ ಬಂಡವಾಳ ಗೊತ್ತಾಗುತ್ತದೆ ಎಂದರು.


