Asianet Suvarna News Asianet Suvarna News

ಲೋಕಸಭಾ ಚುನಾವಣೆ ಸ್ಪರ್ಧೆ ಬಗ್ಗೆ ಚಕ್ರವರ್ತಿಯಿಂದ ಅಚ್ಚರಿಯ ಹೇಳಿಕೆ: ಏನಂದ್ರು ಸೂಲಿಬೆಲೆ!

ಚುನಾವಣೆ ಟಿಕೆಟ್‌ ಕೇಳಿಕೊಂಡು ಹೋಗುವುದಿಲ್ಲ. ಚುನಾವಣೆ ಸ್ಪರ್ಧೆಗೆ ಅವಕಾಶ ಸಿಕ್ಕರೆ ವಿರೋಧ ಇಲ್ಲ ಎಂದು ಚಿಂತಕ ಚಕ್ರವರ್ತಿ ಸೂಲಿಬೆಲೆ ತಿಳಿಸಿದ್ದಾರೆ. 

Chakravarti Sulibele Reaction To Contesting LokSabha Election 2024 With BJP Ticket gvd
Author
First Published Mar 15, 2024, 9:58 AM IST

ಮಂಗಳೂರು (ಮಾ.15): ಚುನಾವಣೆ ಟಿಕೆಟ್‌ ಕೇಳಿಕೊಂಡು ಹೋಗುವುದಿಲ್ಲ. ಚುನಾವಣೆ ಸ್ಪರ್ಧೆಗೆ ಅವಕಾಶ ಸಿಕ್ಕರೆ ವಿರೋಧ ಇಲ್ಲ ಎಂದು ಚಿಂತಕ ಚಕ್ರವರ್ತಿ ಸೂಲಿಬೆಲೆ ತಿಳಿಸಿದ್ದಾರೆ. ಉತ್ತರ ಕನ್ನಡ ಬಿಜೆಪಿ ಟಿಕೆಟ್ ಬಗ್ಗೆ ಪುತ್ತೂರಿನಲ್ಲಿ ಮಾತನಾಡಿದ ಅವರು, ಚುನಾವಣೆ ಟಿಕೆಟ್ ಕೇಳಿಕೊಂಡು ಹೋಗುವುದಿಲ್ಲ. ಒಂದು ವೇಳೆ ಅಂಥ ಅವಕಾಶ ಬಂದರೆ ಸ್ಪರ್ಧಿಸಲು ವಿರೋಧ ಇಲ್ಲ ಎಂದು ಹೇಳಿದ್ದಾರೆ. ಲೋಕಸಭಾ ಚುನಾವಣೆಗೆ ನಾನು ಸ್ಪರ್ಧಿಸುವ ವಿಚಾರ ಸದ್ಯ ವದಂತಿಯಷ್ಟೆ. 

2014, 2019 ರಲ್ಲೂ ಇಂತಹ ವದಂತಿ ಹರಡಿತ್ತು.ಈಗ 2024 ರಲ್ಲೂ ಅಂಥದ್ದೊಂದು ವದಂತಿ ಹರಡಿದೆ ಎಂದಿದ್ದಾರೆ. ರಾಜಕೀಯ ಆಸಕ್ತಿಯ ಪ್ರಶ್ನೆ ಬೇರೆ. ಅದಕ್ಕೆ ನನ್ನ ವಿರೋಧವಿಲ್ಲ. ಆದರೆ ಸೀಟ್ ಕೇಳಿಕೊಂಡು ಹೋಗುವುದಿಲ್ಲ. ಅಂಥ ಅವಕಾಶ ಬಂದರೆ ಯಾವುದೇ ವಿರೋಧ ಇಲ್ಲ. ಹತ್ತು ವರ್ಷಗಳಿಂದ ಕಾಪಾಡಿಕೊಂಡು ಬಂದಿರೋದನ್ನ ಸ್ವಲ್ಪ ಸಡಿಲ ಮಾಡ್ತೀನಿ. ಏನಾದ್ರು ಭಗವಂತನ ಇಚ್ಛೆ ಇದ್ದರೆ ಅದು ಆಗೇ ಆಗುತ್ತೆ. ಆದರೆ ಇದುವರೆಗೆ ನನ್ನನ್ನ ಯಾರೂ ಸಂಪರ್ಕಿಸಿಲ್ಲ, ನಾನೂ ಸಂಪರ್ಕ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ರಾಜಕೀಯಕ್ಕೆ ಬಂದ್ರೆ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಬೇಕು ಎಂಬುದು ನನ್ನ ಆಸೆ ಇತ್ತು: ಯದುವೀರ್ ಒಡೆಯರ್

ಅನಂತ್‌ ಹೆಗಡೆ ಬದಲು ಸೂಲಿಬೆಲೆ ಕಣಕ್ಕೆ?: ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಈ ಬಾರಿ ಹಾಲಿ ಸಂಸದ ಅನಂತಕುಮಾರ್ ಹೆಗಡೆ ಅವರ ಬದಲು ಅವರಷ್ಟೇ ಹಿಂದುತ್ವದ ಪ್ರಖರವಾದಿಯಾದಿಯಾಗಿರುವ ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರನ್ನು ಕಣಕ್ಕಿಳಿಸುವ ಬಗ್ಗೆ ಬಿಜೆಪಿ ಪಾಳೆಯದಲ್ಲಿ ಚರ್ಚೆ ನಡೆದಿದೆ. ಚುನಾವಣೆಯ ಕಾವು ಆರಂಭವಾಗುವ ಮೊದಲು ಅನಂತಕುಮಾರ್ ಹೆಗಡೆ ಅವರು ಈ ಬಾರಿ ಸ್ಪರ್ಧಿಸುವುದಿಲ್ಲ ಎಂಬ ವದಂತಿ ಹಬ್ಬಿತ್ತು. ಆದರೆ, ಕಳೆದ ಕೆಲವು ದಿನಗಳಿಂದ ದಿಢೀರನೆ ಕ್ರಿಯಾಶೀಲರಾದ ಅವರು ಸಭೆ ಸಮಾರಂಭಗಳಲ್ಲಿ ಪಾಲ್ಗೊಳ್ಳುವ ಮೂಲಕ ಮತ್ತೆ ಚುನಾವಣೆಗೆ ಸ್ಪರ್ಧಿಸುವ ಆಸಕ್ತಿ ಹೊರಹಾಕಿದರು.

ಆದರೆ, ಪಕ್ಷದ ಸಂಘಟನೆಯಿಂದ ದೂರ ಇರುವುದಷ್ಟೇ ಅಲ್ಲದೆ ಸದಾ ಪಕ್ಷಕ್ಕೆ ಮುಜುಗರ ಉಂಟು ಮಾಡುವಂಥ ವಿವಾದಾಸ್ಪದ ಹೇಳಿಕೆಗಳನ್ನು ನೀಡುವ ಅನಂತಕುಮಾರ್ ಹೆಗಡೆ ಅವರಿಗೆ ಮತ್ತೊಮ್ಮೆ ಟಿಕೆಟ್ ನೀಡುವ ಬದಲು ಹೊಸಬರಿಗೆ ಅವಕಾಶ ಕಲ್ಪಿಸಬೇಕು ಎಂಬ ಕೂಗು ಬಿಜೆಪಿ ಆಂತರ್ಯದಲ್ಲಿ ಬಲವಾಗಿ ಕೇಳಿಬರುತ್ತಿದೆ. ಈ ಹಿನ್ನೆಲೆಯಲ್ಲಿ ಚಕ್ರವರ್ತಿ ಸೂಲಿಬೆಲೆ ಸಮರ್ಥ ಅಭ್ಯರ್ಥಿಯಾಬಹುದು ಎಂಬ ಮಾತುಕತೆ ನಡೆಯುತ್ತಿದೆ ಎನ್ನಲಾಗಿದೆ.

ಲೋಕಸಭಾ ಚುನಾವಣೆಗೆ ಬೆಳಗಾವಿಯಿಂದ ಸ್ಪರ್ಧೆ ಮಾಡಲು ಜಗದೀಶ್ ಶೆಟ್ಟರ್ ಒಪ್ಪಿಗೆ!

ಈ ಹಿಂದೆಯೂ ಚಕ್ರವರ್ತಿ ಸೂಲಿಬೆಲೆ ಅವರ ಹೆಸರು ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಕೇಳಿಬಂದಿತ್ತು. ಆ ವೇಳೆ ಸೂಲಿಬೆಲೆ ಅವರು ಚುನಾವಣಾ ರಾಜಕಾರಣಕ್ಕೆ ಪ್ರವೇಶಿಸುವ ಬಗ್ಗೆ ನಿರಾಸಕ್ತಿ ತೋರಿದ್ದರು. ಕಳೆದ 2014 ಮತ್ತು 2019ರ ಲೋಕಸಭಾ ಚುನಾವಣೆಯಲ್ಲೂ ಸೂಲಿಬೆಲೆ ಅವರು ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದ ಪರವಾಗಿ ರಾಜ್ಯಾದ್ಯಂತ ವೈಯಕ್ತಿಕವಾಗಿ ಸಂಚರಿಸಿ ಪ್ರಚಾರ ಮಾಡಿದರು. ಮೋದಿ ಅವರ ನಾಯಕತ್ವ ಯಾಕೆ ಬೆಂಬಲಿಸಬೇಕು ಎಂಬುದನ್ನು ಜನರಿಗೆ ಮನವರಿಕೆ ಮಾಡಿಕೊಡುವ ಪ್ರಯತ್ನ ನಡೆಸಿದರು.

Follow Us:
Download App:
  • android
  • ios