ಸಂಸದ ಶ್ರೀನಿವಾಸ ಪ್ರಸಾದ್‌ಗೆ ಕೊರೋನಾ ದೃಢ: ಸಿಎಂ ಪುತ್ರ ವಿಜಯೇಂದ್ರಗೆ ಆತಂಕ..!

ಚಾಮರಾಜನಗರ ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ಅವರಿಗೂ ಕೊರೋನಾ ಪಾಸಿಟಿವ್ ಬಂದಿದ್ದು, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪುತ್ರನಿಗೆ ಆತಂಕ ಶುರುವಾಗಿದೆ.

chamarajanagar BJP MP Srinivas Prasad tests positive For Covid19

ಮೈಸೂರು, (ಆ.18): ಚಾಮರಾಜನಗರ ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ಅವರಿಗೂ ಕೋವಿಡ್ ಸೋಂಕು ದೃಢಪಟ್ಟಿದೆ.

 ಜ್ವರ ಹಾಗೂ ಮೈಕೈ ನೋವಿನಿಂದ ಬಳಲುತ್ತಿದ್ದ ಅವರು ಮೈಸೂರಿನ ಜಯಲಕ್ಷ್ಮಿಪುರಂ ತನ್ನ ನಿವಾಸದಲ್ಲಿ ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದರು. ಈ ಸಂದರ್ಭ ಅವರ ಪರೀಕ್ಷಾ ವರದಿಯಲ್ಲಿ ಕೋವಿಡ್ ಪಾಸಿಟಿವ್ ಬಂದಿದೆ. 

ಕರ್ನಾಟಕದ ಬಿಜೆಪಿ ಶಾಸಕಿಗೆ ಕೊರೋನಾ ದೃಢ

ಶ್ರೀನಿವಾಸ್ ಪ್ರಸಾದ್ ಅವರಿಗೆ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಮನೆಯ 17ಕ್ಕೂ ಹೆಚ್ಚು ಸದಸ್ಯರ ಸ್ವ್ಯಾಬ್ ಪರೀಕ್ಷೆ ಮಾಡಲಾಗಿದ್ದು, ಪುತ್ರ, ಶಾಸಕ ಹರ್ಷವರ್ಧನ್ ಸೇರಿ ಇತರರ ಪರೀಕ್ಷಾ ವರದಿ ನೆಗಟಿವ್ ಬಂದಿದೆ.

ಸಿಎಂ ಪುತ್ರನಿಗೆ ಆತಂಕ
ಹೌದು...ಶ್ರೀನಿವಾಸ್ ಪ್ರಸಾದ್‌ಗೆ ಕೊರೋನಾ ದೃಢಪಟ್ಟ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಅವರಿಗೂ ಆತಂಕ ಶುರುವಾಗಿದೆ.

ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಸೋಮವಾರ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದ, ವಿಜಯೇಂದ್ರ,ಶ್ರೀನಿವಾಸ್ ಪ್ರಸಾದ್‌ ಅವರನ್ನ ಭೇಟಿ ಮಾಡಿದ್ದರು. ಬಳಿಕ ವಿಜಯೇಂದ್ರ ಸುತ್ತೂರು ಶ್ರೀಗಳನ್ನ ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡಿದ್ದರು.

ಅಲ್ಲದೇ ಸೋಮವಾರವಷ್ಟೇ ಬಿವೈ ವಿಜಯೇಂದ್ರ ಜೊತೆ ಹಾಸನ ಶಾಸಕ ಪ್ರೀತಂಗೌಡ, ಎಂಎಲ್ ಸಿ ವಿಶ್ವನಾಥ್, ಮಾಜಿ ಸಚಿವ ವಿಜಯಶಂಕರ್ ಸೇರಿದಂತೆ ಹಲವರು ಸಂಸದರನ್ನು ಭೇಟಿಯಾಗಿದ್ದರು. ಈಗ ಅವರೆಲ್ಲರಿಗೂ ಕೋವಿಡ್ ಭೀತಿ ಎದುರಾಗಿದೆ. ಅಷ್ಟೇ ಅಲ್ಲದೇ ಇದೀಗ ಅವರೆಲ್ಲರೂ ಕ್ವಾರಂಟೈನ್‌ಗೆ ಒಳಗಾಗಬೇಕಿದೆ.

Latest Videos
Follow Us:
Download App:
  • android
  • ios