ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಸಿಟ್ಟಾಗಿರುವ ಪತ್ನಿ ಚೆನ್ನಮ್ಮ: ಕಾರಣ ಏನಂತೀರಾ?
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪರವಾಗಿ ಮನೆ, ಮನೆಗೆ ತೆರಳಿ ಪ್ರಚಾರ ಮಾಡುತ್ತಿದ್ದ ಅವರ ಪತ್ನಿ ಚನ್ನಮ್ಮ ಬೊಮ್ಮಾಯಿ, ತಮ್ಮ ಪತಿಯ ವಿರುದ್ಧ ಗರಂ ಆಗಿದ್ದಾರೆ.
ಹಾವೇರಿ (ಏ.21): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಿಗ್ಗಾವಿ ವಿಧಾನಸಭಾ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಕಿಚ್ಚ ಸುದೀಪ್ ಅವರೊಂದಿಗೆ ಅದ್ಧೂರಿ ಮರೆವಣಿಗೆ ಮಾಡಿದ್ದರು. ಇದೀಗ ಅವರ ಪರವಾಗಿ ಮನೆ, ಮನೆಗೆ ತೆರಳಿ ಪ್ರಚಾರ ಮಾಡುತ್ತಿದ್ದ ಸಿಎಂ ಬೊಮ್ಮಾಯಿ ಅವರ ಪತ್ನಿ ಚನ್ನಮ್ಮ ಅವರು ತಮ್ಮ ಪತಿಯ ವಿರುದ್ಧ ಗರಂ ಆಗಿದ್ದಾರೆ.
ಇನ್ನು ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ (Karnataka assembly election 2023) ಮತ್ತೊಮ್ಮೆ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತರಬೇಕು ಎಂದು ಕಸರತ್ತು ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕ ಸೇರಿದಂತೆ ಎಲ್ಲೆಡೆ ಕೇಂದ್ರ ನಾಯಕರು ಬಂದು ಪ್ರಚಾರ ಮಾಡುತ್ತಿದ್ದಾರೆ. ಇನ್ನು ಬಸವರಾಜ ಬೊಮ್ಮಾಯಿ ಕೂಡ ರಾಜ್ಯಾದ್ಯಂತ ಪ್ರಚಾರ ಕಾರ್ಯದಲ್ಲಿ ತೊಡಗಿದ್ದು, ತಮ್ಮ ಕ್ಷೇತ್ರದಲ್ಲಿ ಪ್ರಚಾರ ಮಾಡುವುದಕ್ಕೆ ಅವರ ಪತ್ನಿ ಚನ್ನಮ್ಮ ಬೊಮ್ಮಾಯಿ ಕ್ಷೇತ್ರದಾದ್ಯಂತ ಪ್ರಚಾರ ಕಾರ್ಯವನ್ನು ಆರಂಭಿಸಿದ್ದದಾರೆ. ವಿವಿಧ ಗ್ರಾಮಗಳಿಗೆ ತೆರಳಿ ಮನೆ, ಮನೆಗೆ ಹೋಗಿ ಪ್ರಚಾರ ಮಾಡುತ್ತಿದ್ದಾರೆ.
ಕಾಂಗ್ರೆಸ್‌ನ 224 ಅಭ್ಯರ್ಥಿಗಳ ನಾಮಪತ್ರ ಅನೂರ್ಜಿತ ಭೀತಿ: ಕೊನೆಗೂ ಖೆಡ್ಡಾ ತೋಡಿದ ಬಿಜೆಪಿ
ನಮಗೆ ಶಾಪಿಂಗ್ ಕೂಡಾ ಮಾಡಿಸಿಲ್ಲ: ಈ ವೇಳೆ ಏಷ್ಯಾನೆಟ್ ಸುವರ್ಣ ನ್ಯೂಸ್‌ನೊಂದಿಗೆ ಮಾತನಾಡಿದ ಅವರು ಬಸವರಾಜ ಬೊಮ್ಮಾಯಿ ವಿರುದ್ಧವೇ ಅವರ ಪತ್ನಿ ಚೆನ್ನಮ್ಮ ಬೊಮ್ಮಾಯಿ (Chennamma Bommai) ಅವರು ಹುಸಿಮುನಿಸು ತೋರಿಸಿದ್ದಾರೆ. ಚುನಾವಣೆ ಆರಂಭವಾದಾಗಿನಿಂದ (Karnataka elections 2023 date) ಸಾಹೇಬ್ರು ಕೈಗೇ ಸಿಗುತ್ತಿಲ್ಲ. ನಮಗೆ ಈವರೆಗೆ ಶಾಪಿಂಗ್ ಕೂಡಾ (No Shopping) ಮಾಡಿಸಿಲ್ಲ. ನಮಗೆ ಟೈಂ ಕೂಡಾ ಕೊಟ್ಟಿಲ್ಲ ಎಂದು ಹೇಳಿದರು. ಜೊತೆಗೆ, ಇದೆಲ್ಲಾ ತಮಾಷೆ ರೀ ಎಂದು ನಗು ನಗುತ್ತಾ ತಮ್ಮ ಪ್ರಚಾರದ ಕಾರ್ಯಕ್ಕೆ ಮುಂದಾದರು.
ರಣ ಬಿಸಿಲಿನಲ್ಲಿಯೇ ರಸ್ತೆಗಿಳಿದು ಪ್ರಚಾರ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ (Chief Basavaraj Bommai) ಅವರ ಪರವಾಗಿ ಶಿಗ್ಗಾವಿ ವಿಧಾನಸಭಾ ಕ್ಷೇತ್ರದಾದ್ಯಂತ ಪ್ರಚಾರಕ್ಕಿಳಿದ ಪತ್ನಿ ಚನ್ನಮ್ಮ ಬೊಮ್ಮಾಯಿ ಅವರು, ರಣ ಬಿಸಿಲಿನಲ್ಲೇ ಜಬರ್ದಸ್ತ್ ಪ್ರಚಾರ ಕಾರ್ಯವನ್ನು ಮುಂದುವರೆಸಿದ್ದಾರೆ. ಜನಪ್ರತಿನಿಧಿಗಳ ಮನೆಯವರು ಬಿಸಿಲನ್ನೇ ಕಾಣೊಲ್ಲ ಎಂದುಕೊಂಡರೆ ನಮ್ಮ ನಿರೀಕ್ಷೆ ತಪ್ಪಾಗುತ್ತದೆ ಎಂಬುದಕ್ಕೆ ಇಲ್ಲಿ ಸಿಎಂ ಬೊಮ್ಮಾಯಿ ಅವರ ಪತ್ನಿ ಚನ್ನಮ್ಮ ಅವರ ಪ್ರಚಾರ ನೋಡಿದರೆ ಅರ್ಥವಾಗುತ್ತದೆ. ಇನ್ನು ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್ ಬೊಮ್ಮಾಯಿ (Bharath Bommai) ಕೂಡ ಬೇರೆ ಗ್ರಾಮಗಳಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ.
ಕಾಂಗ್ರೆಸ್‌ದು ಗ್ಯಾರಂಟಿ ಕಾರ್ಡಲ್ಲ, ವಿಸಿಟಿಂಗ್ ಕಾರ್ಡ್: ಸಿಎಂ ಬೊಮ್ಮಾಯಿ ವ್ಯಂಗ್ಯ
ದಿನಕ್ಕೆ 10- 20 ಗ್ರಾಮಗಳಲ್ಲಿ ಪ್ರಚಾರ: ಇನ್ನು ಪ್ರತಿನಿತ್ಯ ಬಸವರಾಜ ಬೊಮ್ಮಾಯಿ ಅವರ ಪರವಾಗಿ ಕುಟುಂಬ ಸದಸ್ಯರೆಲ್ಲರೂ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಪ್ರತಿನಿತ್ಯ 10 ರಿಂದ 20 ಹಳ್ಳಿಗಳಲ್ಲಿ ಹೋಗಿ ಪ್ರಚಾರ ಮಾಡುವ ಯೋಜನೆಯನ್ನು ಹಾಕಿಕೊಂಡಿದ್ದಾರೆ. ಅದರಂತೆ, ಚನ್ನಮ್ಮ ಬೊಮ್ಮಾಯಿ ಅವರು ಶಿಗ್ಗಾಂವಿ ಕ್ಷೇತ್ರದ ವಿವಿಧ ಹಳ್ಳಿಗಳಿಗೆ ತೆರಳಿ ಪ್ರಚಾರ ಮಾಡುತ್ತಿದ್ದಾರೆ. ಇಂದು ಬೆಳಗ್ಗೆ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ಚಿಕ್ಕನೆಲ್ಲೂರು (Chikkanelluru), ಹನುಮರಹಳ್ಳಿ (Hanumarahalli), ಚಾಕಾಪುರ (Chakapura) ಸೇರಿದಂತೆ ಹಲವು ಗ್ರಾಮಗಳಿಗೆ ತೆರಳಿ ಮನೆ ಮನೆಗೆ ಪ್ರಚಾರ ಮಾಡಿದರು. ಇನ್ನು ಕಳೆದ ನಾಲ್ಕು ದಿನಗಳಿಂದ ಪ್ರಚಾರ ಕಾರ್ಯವನ್ನು ಆರಂಭಿಸಿದ್ದು, ಮುಂದಿನ 15 ದಿನಗಳಲ್ಲಿ ಎಲ್ಲ ಗ್ರಾಮಗಳಲ್ಲಿ ಪ್ರಚಾರ ಕಾರ್ಯ ಪೂರ್ಣಗೊಳಿಸುವುದಾಗಿ ತಿಳಿಸಿದರು.