ಎರಡು ಬಾರಿ ಸೋತಿದ್ದೇನೆ, ಜನ ಈ ಬಾರಿ ಆಶೀರ್ವಾದ ಮಾಡ್ತಾರೆ ಎನ್ನುವ ವಿಶ್ವಾಸ ಇದೆ. ನನ್ನ ಕೆಲಸಗಳು ಈ ಬಾರಿ ಗೆಲುವಿಗೆ ಅವಕಾಶ ಮಾಡುತ್ತವೆ. ಈ ಕ್ಷೇತ್ರದ ಅಭಿವೃದ್ಧಿಗಾಗಿ ಜನ ಬೆಂಬಲ ನೀಡುತ್ತಾರೆ. ಎಲ್ಲರೂ ಬೇಸರ ಬಿಟ್ಟು ಕಾಂಗ್ರೆಸ್ ಗೆ ಬೆಂಬಲ ನೀಡುತ್ತಿದ್ದಾರೆ ಎಂದ ಯೋಗೇಶ್ವ‌ರ್  

ಚನ್ನಪಟ್ಟಣ(ಅ.30): ನಾನು ಕಳೆದ ಎರಡು ಬಾರಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಸೋಲು ಅನುಭವಿಸಿದ್ದೇನೆ. ಆದರೆ, ನನ್ನ ವಿರುದ್ಧ ಗೆಲುವು ಸಾಧಿಸಿದ ಕುಮಾರಸ್ವಾಮಿ ಏನು ಕೆಲಸ ಮಾಡಿದ್ದಾರೆ ಎಂದು ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್‌ ಪ್ರಶ್ನಿಸಿದರು. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ತಾಲೂಕಿನ ಬೇವೂರು ಜಿಲ್ಲಾ ಪಂಚಾಯಿತಿಯ ಕೋಟೆಹೊಲ ಗ್ರಾಮದಿಂದ ಪ್ರಚಾರ ಆರಂಭಿಸಿದ ಅವರು, ಮಾಕಳಿ ಗ್ರಾಮದಲ್ಲಿ ಜನರನ್ನುದ್ದೇಶಿಸಿ ಮಾತನಾಡಿದರು. ಅವರು ನಾನು ತಂದಿದ್ದ ಅನುದಾನವನ್ನೇ ಸರಿಯಾಗಿ ಬಳಸಿಕೊಳ್ಳಲಿಲ್ಲ. ಈಗ ನಾನು ಅಭಿವೃದ್ಧಿಗಾಗಿ ಕಾಂಗ್ರೆಸ್ ಸೇರಿದ್ದೇನೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇದೆ. ಈ ಬಾರಿ ಅವಕಾಶ ಸಿಕ್ಕರೆ ಮತ್ತಷ್ಟು ಅಭಿವೃದ್ಧಿ ಮಾಡುತ್ತೇನೆ ಎಂದು ಹೇಳಿದರು. 

ಚನ್ನಪಟ್ಟಣ ಉಪಚುನಾವಣೆ: ಬೊಂಬೆನಾಡಲ್ಲಿ ನೀರಾವರಿ ವಿಷಯವೇ ಚುನಾವಣಾ ಅಸ್ತ್ರ!

ನಾನು ಮತ್ತೆ ಗೆದ್ದು ಕೆರೆಗಳನ್ನ ತುಂಬಿಸುವ ಕೆಲಸ ಮಾಡುತ್ತೇನೆ. ಎಲ್ಲರೂ ಆಶೀರ್ವಾದ ಮಾಡಿ ಗೆಲ್ಲಿಸಿಕೊಡಿ. ಕುಮಾರಸ್ವಾಮಿ ಚನ್ನಪಟ್ಟಣ ಬಿಟ್ಟು ಮಂಡ್ಯಕ್ಕೆ ಹೋಗಿದ್ದಾರೆ. ಈಗ ಅವರ ಮಗನನ್ನ ತಂದು ಚುನಾವಣೆಗೆ ನಿಲ್ಲಿಸಿ ದ್ದಾರೆ. ಅವರು ಎರಡು ಬಾರಿ ಗೆದ್ದು ಏನು ಕೆಲಸ ಮಾಡಿದ್ದಾರೆಂದು ನೀವೇ ಯೋಚನೆ ಮಾಡಿ ನೋಡಿ. ಜೆಡಿಎಸ್‌ ಜೆಡಿಎಸ್‌ ಅಂತ ಜನ ತೊಂದರೆಯಲ್ಲಿ ಸಿಕ್ಕಿಹಾಕಿಕೊಳ್ತಿದ್ದಾರೆ. ಈ ಬಾರಿ ಅದಕ್ಕೆ ಅವಕಾಶ ಕೊಡಬೇಡಿ, ದಯಮಾಡಿ ಈ ಬಾರಿ ಒಂದು ಅವಕಾಶ ಕೊಟ್ಟು ಗೆಲ್ಲಿಸಿಕೊಡಿ ಎಂದು ಮನವಿ ಮಾಡಿದರು. 

ಎರಡು ಬಾರಿ ಸೋತಿದ್ದೇನೆ, ಜನ ಈ ಬಾರಿ ಆಶೀರ್ವಾದ ಮಾಡ್ತಾರೆ ಎನ್ನುವ ವಿಶ್ವಾಸ ಇದೆ. ನನ್ನ ಕೆಲಸಗಳು ಈ ಬಾರಿ ಗೆಲುವಿಗೆ ಅವಕಾಶ ಮಾಡುತ್ತವೆ. ಈ ಕ್ಷೇತ್ರದ ಅಭಿವೃದ್ಧಿಗಾಗಿ ಜನ ಬೆಂಬಲ ನೀಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಯೋಗೇಶ್ವರ್, ಎಲ್ಲರೂ ಬೇಸರ ಬಿಟ್ಟು ಕಾಂಗ್ರೆಸ್ ಗೆ ಬೆಂಬಲ ನೀಡುತ್ತಿದ್ದಾರೆ ಎಂದು ಯೋಗೇಶ್ವ‌ರ್ ಹೇಳಿದರು. 

ಇದೇ ವೇಳೆ ಅವರು ಬೇವೂರು ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಮಾಕಳಿ ಗ್ರಾಮ, ಮಾಕಳಿ ಪ್ಲಾಂಟೇಷನ್ ದೊಡ್ಡಿ, ದಾಸೇಗೌಡನ ದೊಡ್ಡಿ, ನಾಗವಾರ, ಹಾರೋಹಳ್ಳಿ ದೊಡ್ಡಿ, ಬೈರ ನಾಯಕನಹಳ್ಳಿ, ಬೇವೂರು ಸೇರಿದಂತೆ ಹತ್ತಾರು ಗ್ರಾಮಗಳಲ್ಲಿ ಯೋಗೇಶ್ವರ್ ಪರ ಬಿರುಸಿನ ಪ್ರಚಾರ ನಡೆಸಿದರು. 

ಮೈಸೂರು ರಾಜಮನೆತನಕ್ಕೆ ರಾಜ್ಯ ಸರ್ಕಾರದಿಂದ ಕಿರುಕುಳ : ಹೆಚ್‌ಡಿಕೆ ಗಂಭೀರ ಆರೋಪ

ಈ ಸಂದರ್ಭದಲ್ಲಿ ಅವರಿಗೆ ಮಾಜಿ ಸಂಸದ ಡಿ.ಕೆ.ಸುರೇಶ್, ಬಿಎಂಐಸಿಎಪಿಎ ಅಧ್ಯಕ್ಷ ರಘನಂದನ್ ರಾಮಣ್ಣ, ಮಾಜಿ ಶಾಸಕ ಎಂ.ಸಿ.ಅಶ್ವತ್ ಸೇರಿದಂತೆ ಅನೇಕ ಮುಖಂಡರು ಸಾಥ್ ನೀಡಿದರು.

ವಲಸೆಗಾರರು ಬೇಕಾ ಅಥವಾ ಕೆಲಸಗಾರರು ಬೇಕಾ? ಎಂದು ಚನ್ನಪಟ್ಟಣ ತಾಲೂಕಿನ ಜನ ಯೋಚನೆ ಮಾಡಬೇಕು. ನೀರಾವರಿ ಯೋಜನೆ ಕೊಟ್ಟ ಯೋಗೇಶ್ವರ್ ಅವರಿಗೆ ಬೆಂಬಲ ನೀಡಿ. ಹೊರಗಡೆಯಿಂದ ಬಂದವರಿಗೆ ಮಣೆ ಹಾಕಬೇಡಿ ಎಂದು ಕುಣಿಗಲ್ ಶಾಸಕ ಡಾ.ರಂಗನಾಥ್ ತಿಳಿಸಿದ್ದಾರೆ.