ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆ ಅಭ್ಯರ್ಥಿ ಕುರಿತು ಈವರೆಗೆ ಯಾವುದೇ ರೀತಿಯಲ್ಲೂ ಚರ್ಚೆಯಾಗಿಲ್ಲ. ಪಕ್ಷದ ಸ್ಥಳೀಯ ನಾಯಕರು, ಕಾರ್ಯಕರ್ತರ ಜತೆ ಚಚಿಸಿ ಅಂತಿಮ ನಿರ್ಣಯ ಕೈಗೊಳ್ಳಲಾಗುವುದು ಎಂದು ಕೇಂದ್ರ ಉಕ್ಕು ಸಚಿವ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.  

ಬೆಂಗಳೂರು (ಜು.07): ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆ ಅಭ್ಯರ್ಥಿ ಕುರಿತು ಈವರೆಗೆ ಯಾವುದೇ ರೀತಿಯಲ್ಲೂ ಚರ್ಚೆಯಾಗಿಲ್ಲ. ಪಕ್ಷದ ಸ್ಥಳೀಯ ನಾಯಕರು, ಕಾರ್ಯಕರ್ತರ ಜತೆ ಚಚಿಸಿ ಅಂತಿಮ ನಿರ್ಣಯ ಕೈಗೊಳ್ಳಲಾಗುವುದು ಎಂದು ಕೇಂದ್ರ ಉಕ್ಕು ಸಚಿವ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಚನ್ನಪಟ್ಟಣದಲ್ಲಿ ತಮ್ಮ ಸ್ಪರ್ಧೆಗೆ ಜೆಡಿಎಸ್‌ ಕೂಡ ಸಮ್ಮತಿಸಿದೆ ಎಂಬ ಬಿಜೆಪಿ ನಾಯಕ ಸಿ.ಪಿ.ಯೋಗೇಶ್ವರ್‌ ಹೇಳಿಕೆ ಬೆನ್ನಲ್ಲೇ, ಇಂಥ ಹೇಳಿಕೆಯನ್ನು ನೀಡುವ ಮೂಲಕ ಕುಮಾರಸ್ವಾಮಿ ಅವರು ಯೋಗೇಶ್ವರ್‌ ಹೇಳಿಕೆಯನ್ನು ಸ್ಪಷ್ಟವಾಗಿ ಅಲ್ಲಗಳೆದಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಶನಿವಾರ ಜೆಡಿಎಸ್‌ ಕಚೇರಿ ಜೆ.ಪಿ.ಭವನದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಚನ್ನಪಟ್ಟಣ ವಿಧಾನಸಭಾ ಉಪಚುನಾವಣಾ ವಿಚಾರವಾಗಿ ಮಿತ್ರ ಪಕ್ಷಗಳ ನಡುವೆ ಚರ್ಚೆಯಾಗಿಲ್ಲ. ಬಿಜೆಪಿ ಹೈಕಮಾಂಡ್‌ ಜತೆಗೂ ಯಾವುದೇ ಮಾತುಕತೆ ನಡೆದಿಲ್ಲ. ಅಭ್ಯರ್ಥಿ ಘೋಷಣೆಗೆ ಇನ್ನೂ ಸಮಯಾವಕಾಶ ಇದೆ. ಉಪಚುನಾವಣೆ ಘೋಷಣೆ ಬಳಿಕ ಅಭ್ಯರ್ಥಿಯ ಆಯ್ಕೆಯನ್ನು ಅಂತಿಮಗೊಳಿಸಲಾಗುವುದು ಎಂದರು.

ಸಿಡಿ ಫ್ಯಾಕ್ಟರಿ ಬಂದ್ ಆಯ್ತು ಎಂಡಿಎ ಫ್ಯಾಕ್ಟರಿ ಶುರುವಾಯ್ತು: ಡಿಕೆಶಿ ವಿರುದ್ಧ ಎಚ್‌ಡಿಕೆ ಪರೋಕ್ಷ ಆರೋಪ

ಮಾಧ್ಯಮಗಳು ತಮಗೆ ಇಷ್ಟಬಂದವರ ಹೆಸರನ್ನು ಹರಿಬಿಡುತ್ತಿವೆ. ಈ ಮೊದಲು ನಿಖಿಲ್‌ ಕುಮಾರಸ್ವಾಮಿ ಅಭ್ಯರ್ಥಿ ಎಂದು ವರದಿ ಬಿತ್ತರಿಸಿದವು. ಈಗ ಸಂಸದ ಡಾ.ಸಿ.ಎನ್‌.ಮಂಜುನಾಥ್‌ ಪತ್ನಿ ಅನಸೂಯ ಹೆಸರನ್ನು ಹರಿಬಿಟ್ಟಿವೆ. ಈ ಬಗ್ಗೆ ಮಾಧ್ಯಮಗಳೇ ತೀರ್ಮಾನಿಸುತ್ತಿವೆ. ಆದರೆ, ವಾಸ್ತವವಾಗಿ ಬಿಜೆಪಿ-ಜೆಡಿಎಸ್‌ನಲ್ಲಿ ಈ ಬಗ್ಗೆ ಚರ್ಚೆಯೇ ನಡೆದಿಲ್ಲ ಎಂದು ಸ್ಪಷ್ಟಪಡಿಸಿದರು.

ಮುಡಾ ಅಕ್ರಮ ಬಯಲು: ಮುಖ್ಯಮಂತ್ರಿ ಕುರ್ಚಿ ಮೇಲೆ ಕಣ್ಣಿಟ್ಟವರಿಂದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ಹಗರಣ ಬಯಲಾಗಿದೆ. ಮುಖ್ಯಮಂತ್ರಿ ಅವರನ್ನು ಅಧಿಕಾರದಿಂದ ಕೆಳಗಿಳಿಸಲು ಕಾಂಗ್ರೆಸ್ಸಿಗರಿಂದಲೇ ಪಿತೂರಿ ನಡೆಯುತ್ತಿದೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಹೊಸ ‘ಬಾಂಬ್‌’ ಸಿಡಿಸಿದ್ದಾರೆ.

ಚನ್ನಪಟ್ಟಣದಲ್ಲಿ ನನ್ನ ಸ್ಫರ್ಧೆಗೆ ಎಚ್.ಡಿ.ಕುಮಾರಸ್ವಾಮಿ ಗ್ರೀನ್‌ಸಿಗ್ನಲ್‌: ಸಿ.ಪಿ.ಯೋಗೇಶ್ವರ್

ಮೈಸೂರಿನ ಚಾಮುಂಡಿಬೆಟ್ಟದಲ್ಲಿರುವ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಶುಕ್ರವಾರ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಹಾಗೂ ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಇಷ್ಟು ದಿನ ಹೊರಗೆ ಬಾರದ ಹಗರಣ ಈಗ ಬಂದಿದ್ದು ಯಾಕೆ? ಇದರ ಹಿಂದೆ ಮುಖ್ಯಮಂತ್ರಿ ಕುರ್ಚಿ ಮೇಲೆ ಟವೆಲ್ ಹಾಕಿರುವವರ ಪಾತ್ರ ಇದೆ. ಈಗಿನ ಮುಖ್ಯಮಂತ್ರಿ ತೆಗೆದು ತಾವು ಆ ಸ್ಥಾನದಲ್ಲಿ ಕೂರಬೇಕೆಂದು ಕಾಯುತ್ತಿದ್ದಾರೆ. ಅವರು ಸಿದ್ದರಾಮಯ್ಯ ಅವರ ಇಮೇಜ್ ಹಾಳು ಮಾಡಲು ಕಾರ್ಯತಂತ್ರ ರೂಪಿಸಿದ್ದಾರೆ. ಸಿ.ಡಿ. ಫ್ಯಾಕ್ಟರಿ ಬಂದ್ ಆಯ್ತು, ಈಗ ಮುಡಾ ಫ್ಯಾಕ್ಟರಿ ಶುರುವಾಯ್ತು ಎಂದು ಲೇವಡಿ ಮಾಡಿದರು.