ಈ ಹಿಂದೆ ರಾಹುಲ್‌ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್‌ ಪಕ್ಷವು ಛತ್ತೀಸ್‌ಗಢದಲ್ಲಿ ಗ್ಯಾರಂಟಿ ಕಾರ್ಡ್‌ ಹಾಗೂ ಭರವಸೆಗಳನ್ನು ನೀಡಿದ್ದರು. ಬಳಿಕ ಕಾಂಗ್ರೆಸ್‌ ಸರ್ಕಾರವೇ ಅಧಿಕಾರಕ್ಕೆ ಬಂದರೂ ಭರವಸೆಗಳನ್ನು ಈಡೇರಿಸಿಲ್ಲ ಎಂದು ಕಾಂಗ್ರೆಸ್‌ ವಿರುದ್ಧ ಕಿಡಿಕಾರಿದ ರಮಣ್‌ ಸಿಂಗ್‌. 

ಬೊಮ್ಮನಹಳ್ಳಿ(ಏ.27): ಕಾಂಗ್ರೆಸ್‌ ಪಕ್ಷವು ಛತ್ತೀಸ್‌ಗಢದಲ್ಲಿ ಅಧಿಕಾರಕ್ಕೆ ಬಂದರೂ ಚುನಾವಣಾ ಸಮಯದಲ್ಲಿ ನೀಡಿದ್ದ ಗ್ಯಾರಂಟಿ ಕಾರ್ಡ್‌ ಹಾಗೂ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ ಎಂದು ಚತ್ತೀಸ್‌ಗಢದ ಮಾಜಿ ಮುಖ್ಯಮಂತ್ರಿ ರಮಣ್‌ ಸಿಂಗ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಎಚ್‌ಎಸ್‌ಆರ್‌ ಬಡಾವಣೆಯ ನಾಡಪ್ರಭು ಕೆಂಪೇಗೌಡ, ವೇಮನ, ಬಿಪಿನ್‌ ರಾವತ್‌ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಮಾತನಾಡಿ, ಈ ಹಿಂದೆ ರಾಹುಲ್‌ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್‌ ಪಕ್ಷವು ಛತ್ತೀಸ್‌ಗಢದಲ್ಲಿ ಗ್ಯಾರಂಟಿ ಕಾರ್ಡ್‌ ಹಾಗೂ ಭರವಸೆಗಳನ್ನು ನೀಡಿದ್ದರು. ಬಳಿಕ ಕಾಂಗ್ರೆಸ್‌ ಸರ್ಕಾರವೇ ಅಧಿಕಾರಕ್ಕೆ ಬಂದರೂ ಭರವಸೆಗಳನ್ನು ಈಡೇರಿಸಿಲ್ಲ ಎಂದು ಕಾಂಗ್ರೆಸ್‌ ವಿರುದ್ಧ ಕಿಡಿಕಾರಿದರು.

KARNATAKA ELECTION 2023: ನಾಯ​ಕರ ನಾಡು ಮಾನ್ವಿ ಕ್ಷೇತ್ರದಲ್ಲಿ ಅರಳದ ಕಮಲ !

ಬಳಿಕ ಎಚ್‌ಎಸ್‌ಆರ್‌ ಲೇಔಟ್‌ನ ಆಕ್ಸ್‌ಫರ್ಡ್‌ ಕಾಲೇಜಿನಲ್ಲಿ ಐಟಿ-ಬಿಟಿ ವಿದ್ಯಾರ್ಥಿಗಳೊಂದಿಗೆ ನೇರ ಸಂವಾದ ನಡೆಸಿದರು. ಸತತ ಮೂರು ಬಾರಿ ಛತ್ತೀಸ್‌ಗಢದ ಮುಖ್ಯಮಂತ್ರಿಯಾಗಿ ಯಶಸ್ವಿಯಾಗಿ ಅಭಿವೃದ್ಧಿ ಸಾಧಿಸಿರುವ ಬಗ್ಗೆ ಹಾಗೂ ನಕ್ಸಲ್‌ ಸಮಸ್ಯೆಗಳನ್ನು ಬಗೆಹರಿಸಿದ ಬಗ್ಗೆ ವಿವರಿಸಿದರು.

ಈ ವೇಳೆ ಮಾತನಾಡಿದ ಶಾಸಕ ಎಂ.ಸತೀಶ್‌ ರೆಡ್ಡಿ, ಈಗಾಗಲೇ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ದಿಗಳು ಜರುಗಿವೆ. ವಿದ್ಯಾವಂತರಾದ ತಾವುಗಳು ಮತದಾನದ ಬಗ್ಗೆ ಗಮನಹರಿಸಿ ಮತ್ತೊಮ್ಮೆ ಬಿಜೆಪಿಗೆ ಅಧಿಕಾರ ನೀಡಬೇಕೆಂದು ಮನವಿ ಮಾಡಿದರು. ಸಂಸದ ತೇಜಸ್ವಿ ಸೂರ್ಯ, ಬೆಂಗಳೂರು ನಗರ ಜಿಲ್ಲೆ ಬಿಜೆಪಿ ಮಹಿಳಾ ಆಧ್ಯಕ್ಷೆ ವಿಜಯಲಕ್ಷ್ಮೇ ಆನಂದ್‌, ಮಾಜಿ ಬಿಬಿಎಂಪಿ ಸದಸ್ಯ ಗುರುಮೂರ್ತಿ ರೆಡ್ಡಿ ಮತ್ತಿತರರಿದ್ದರು.