ಮೀಸಲಾತಿ ಶಾಶ್ವತ, ಅದನ್ನು ರದ್ದು ಮಾಡಲ್ಲ: ಅಮಿತ್ ಶಾ ಸ್ಪಷ್ಟನೆ
ಕೇಂದ್ರ ಸರ್ಕಾರದಲ್ಲಿ ಮೀಸಲಾತಿಯು ಶಾಶ್ವತವಾಗಿರಲಿದ್ದು, ಬಿಜೆಪಿಯೂ ಎಂದಿಗೂ ಅದನ್ನು ತೆಗೆಯುವುದಿಲ್ಲ ಮತ್ತು ಕಾಂಗ್ರೆಸ್ ಪಕ್ಷಕ್ಕೂ ಅದನ್ನು ತೆಗೆಯಲು ಬಿಡುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ಪಷ್ಟಪಡಿಸಿದರು.
ಖೈರಾಗಢ(ಛತ್ತಿಸ್‌ಗಢ): ಕೇಂದ್ರ ಸರ್ಕಾರದಲ್ಲಿ ಮೀಸಲಾತಿಯು ಶಾಶ್ವತವಾಗಿರಲಿದ್ದು, ಬಿಜೆಪಿಯೂ ಎಂದಿಗೂ ಅದನ್ನು ತೆಗೆಯುವುದಿಲ್ಲ ಮತ್ತು ಕಾಂಗ್ರೆಸ್ ಪಕ್ಷಕ್ಕೂ ಅದನ್ನು ತೆಗೆಯಲು ಬಿಡುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ಪಷ್ಟಪಡಿಸಿದರು.
ಭಾನುವಾರ ಬಿಜೆಪಿ ಚುನಾವಣಾ ರ್‍ಯಾಲಿಯಲ್ಲಿ ಮಾತನಾಡಿದ ಅವರು, ‘ಅಂಬೇಡ್ಕರ್ ಹುಟ್ಟಿದ ದಿನದಂದು ನಾವು ಸಂವಿಧಾನವನ್ನು ರಕ್ಷಿಸುವ ಕೆಲಸ ಮಾಡಬೇಕಿದೆ. ಅವರ ಆಶಯದಂತೆ ಆದಿವಾಸಿಗಳು, ಮಹಿಳೆಯರು, ದಲಿತರನ್ನು ಶೋಷಣೆಯಿಂದ ಪಾರು ಮಾಡಬೇಕಿದೆ. ಈ ಹಿನ್ನೆಲೆಯಲ್ಲಿ ನಾನು ಕೇಂದ್ರ ಸರ್ಕಾರದಲ್ಲಿ ಎಂದಿಗೂ ಮೀಸಲಾತಿಯನ್ನು ತೆಗೆಯುವುದಿಲ್ಲ ಎಂದು ಸ್ಪಷ್ಟಪಡಿಸುತ್ತೇನೆ. ಆದರೆ ಕಾಂಗ್ರೆಸ್ ಪಕ್ಷವು ಸದಾ ಸುಳ್ಳನ್ನು ಹಬ್ಬಿಸುವ ಕೆಲಸ ಮಾಡುತ್ತಿದ್ದು, ಸಂವಿಧಾನ ಬದಲಿಸಿ ಮೀಸಲಾತಿಯನ್ನು ರದ್ದು ಮಾಡುವುದಾಗಿ ಸುಳ್ಳುಸುದ್ದಿ ಹಬ್ಬಿಸುತ್ತಿದೆ’ ಎಂದು ಕಿಡಿ ಕಾರಿದರು.
ಕಾಂಗ್ರೆಸ್ಸಿಗರು ತುಕ್ಡೆ ಗ್ಯಾಂಗ್ ಸುಲ್ತಾನರು: ಮೋದಿ ಕಿಡಿ
ನಕ್ಸಲರ ನಿರ್ಮೂಲನೆ:
ಇದೇ ವೇಳೆ ಮಾತನಾಡುತ್ತಾ, ‘ಪ್ರಧಾನಿ ಮೋದಿಗೆ ಮೂರನೇ ಬಾರಿ ಅಧಿಕಾರ ನೀಡಿದರೆ ಮೂರು ವರ್ಷಗಳಲ್ಲಿ ನಕ್ಸಲರ ಉಪಟಳವನ್ನು ಸಂಪೂರ್ಣ ನಿರ್ಮೂಲನೆ ಮಾಡುತ್ತಾರೆ. ಈಗಾಗಲೇ ಮಾವೋವಾದಿಗಳ ಅಟ್ಟಹಾಸವನ್ನು ಬಿಜೆಪಿ ನಿರ್ಮೂಲನೆ ಮಾಡಿದ್ದು, ಅತ್ಯಲ್ಪ ಪ್ರಮಾಣದಲ್ಲಿ ಉಳಿದುಕೊಂಡಿರುವ ನಕ್ಸಲರನ್ನೂ ನಿರ್ಮೂಲನೆ ಮಾಡಲಾಗುತ್ತದೆ’ ಎಂದು ಭರವಸೆ ನೀಡಿದರು.