ಮೈಸೂರು ಲೋಕಸಭಾ ಕ್ಷೇತ್ರದಿಂದ ಈ ಬಾರಿ ಯತೀಂದ್ರ ಗೆಲ್ಲೋದು ಗ್ಯಾರಂಟಿ: ಶಾಸಕ ಪ್ರದೀಪ್ ಈಶ್ವರ್
ಸಂಸದ ಪ್ರತಾಪ್ ಸಿಂಹನಂತಹ ಅಯೋಗ್ಯ, ಮುಠ್ಠಾಳ ಮತ್ತೊಬ್ಬನಿಲ್ಲ. ಸಿಎಂ ಸಿದ್ದರಾಮಯ್ಯ ಬಗ್ಗೆ ಮಾತಾಡಿದ್ರೆ ಹುಷಾರ್, ಪರಿಣಾಮ ನೆಟ್ಟಗಿರಲ್ಲ ಎಂದು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಎಚ್ಚರಿಕೆ ನೀಡಿದರು.
ಚಿಕ್ಕಬಳ್ಳಾಪುರ (ಜ.11): ಈ ಬಾರಿ ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಯತೀಂದ್ರ ಗೆಲ್ಲೋದು ಗ್ಯಾರಂಟಿ ಎನ್ನುವ ಮೂಲಕ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಹೆಸರು ಬಹಿರಂಗಗೊಳಿಸಿದ್ದಾರೆ.
ಇಂದು ಚಿಕ್ಕಬಳ್ಳಾಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಶಾಸಕ ಪ್ರದೀಪ್ ಈಶ್ವರ್ ಅವರು, ಸಂಸದ ಪ್ರತಾಪ್ ಸಿಂಹನಂತಹ ಅಯೋಗ್ಯ, ಮುಠ್ಠಾಳ ಮತ್ತೊಬ್ಬನಿಲ್ಲ. ಸಿಎಂ ಸಿದ್ದರಾಮಯ್ಯ ಬಗ್ಗೆ ಮಾತಾಡಿದ್ರೆ ಹುಷಾರ್, ಪರಿಣಾಮ ನೆಟ್ಟಗಿರಲ್ಲ ಎಂದು ಎಚ್ಚರಿಕೆ ನೀಡಿದರು.
ಬಿಜೆಪಿಯಿಂದ ಸುಧಾಕರ್‌ಗೆ ಟಿಕೆಟ್ ಕೊಟ್ಟರೆ, ಕಾಂಗ್ರೆಸ್ ಪಕ್ಷದಿಂದ ನಾನು ಸ್ಪರ್ಧಿಸಲು ರೆಡಿ: ಶಾಸಕ ಪ್ರದೀಪ್ ಈಶ್ವರ್!
ಸಂಸತ್ ಭವನದಲ್ಲಿ ಸ್ಮೋಕ್ ಬಾಂಬ್ ಹಾಕಿದವನಿಗೆ ನೀವು ಪಾಸ್ ನೀಡಿದ್ದೀರಿ. ನೀವು ದೇಶ ದ್ರೋಹಿ ಅಲ್ಲವೇ? ಈ ಬಾರಿ ಚುನಾವಣೆಯಲ್ಲಿ ನೀವು ಗೆಲ್ಲುವುದಿಲ್ಲ. ಈ ಬಾರಿ ಮೈಸೂರು ಕ್ಷೇತ್ರದಲ್ಲಿ ಯತೀಂದ್ರ ಸಿದ್ದರಾಮಯ್ಯನೇ ಗೆಲ್ಲೋದು ಎಂದು ಅಚ್ಚರಿಕೆ ಹೇಳಿಕೆ ನೀಡಿದ್ದಾರೆ.
ರಾಮಮಂದಿರದ ವಿಷಯದಲ್ಲಿ ಕಾಂಗ್ರೆಸ್ ಮೂರ್ಖತನ : ನಾನಂತೂ ಅಯೋಧ್ಯೆಗೆ ಹೋಗ್ತೇನೆ: ಸಂಸದ ಪ್ರಜ್ವಲ್ ರೇವಣ್ಣ
ಇದರೊಂದಿಗೆ ಈ ಬಾರಿ ಸಿಎಂ ಸಿದ್ದರಾಮಯ್ಯನವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎನ್ನುವ ಸುದ್ದಿಗೆ ಈಗ ರೆಕ್ಕೆಪುಕ್ಕ ಬಂದಂತಾಗಿದೆ. ಕಾಂಗ್ರೆಸ್ ಈಗಾಗಲೇ ಲೋಕಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸುತ್ತಿದ್ದು, ಸೂಕ್ತ ಅಭ್ಯರ್ಥಿಗಳ ಆಯ್ಕೆಗೆ ಈಗಿನಿಂದಲೇ ಕಸರತ್ತು ಆರಂಭಿಸಿದೆ. ಆದರೆ ಯಾವ ಕ್ಷೇತ್ರದ ಅಭ್ಯರ್ಥಿ ಎಂಬ ಬಗ್ಗೆ ಸುಳಿವು ಬಿಟ್ಟುಕೊಟ್ಟಿಲ್ಲ. ಈ ಮಧ್ಯೆ ವರುಣಾ ಕ್ಷೇತ್ರವನ್ನು ತಂದೆಗೆ ಬಿಟ್ಟುಕೊಟ್ಟಿರುವ ಯತೀಂದ್ರ ಸಿದ್ದರಾಮಯ್ಯ ಅವರು ಈ ಬಾರಿ ಲೋಕಸಭಾ ಚುನಾವಣೆಗೆ ಮೈಸೂರು-ಕೊಡಗು ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಇದಕ್ಕೆ ಪುಷ್ಠಿ ನೀಡುವಂತೆ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಅವರು, ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರಿಗೆ ಬೈಯುವ ಭರದಲ್ಲಿ ಯತೀಂದ್ರ ಸಿದ್ದರಾಮಯ್ಯ ಅವರು ಸ್ಪರ್ಧೆ ಮಾಡುವ ವಿಚಾರವನ್ನು ಬಹಿರಂಗಪಡಿಸಿದ್ದಾರೆ.